Close Menu
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ

Subscribe to Updates

Get the latest creative news from FooBar about art, design and business.

What's Hot

ನಾಡಿನ ಜಲಹಕ್ಕುಗಳೊಂದಿಗೆ ಖಂಡಿತ ರಾಜಿ ಇಲ್ಲ

ಮಹಾತ್ಮ ಗಾಂಧೀಜಿ ಚಿಂತನೆಗಳು ಇಂದಿಗೂ ಪ್ರಸ್ತುತ

ರಾಮಾಯಣ ಮಾನವನ ಬದುಕಿಗೆ ದಾರಿದೀಪ :ಬಸನಗೌಡ

Facebook X (Twitter) Instagram
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
Facebook X (Twitter) Instagram YouTube WhatsApp
udayarashminews.comudayarashminews.com
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
udayarashminews.comudayarashminews.com
Home»(ರಾಜ್ಯ ) ಜಿಲ್ಲೆ»ದೈನಂದಿನ ಬದುಕಿನಲ್ಲಿ ಕನ್ನಡ ಭಾಷೆ ಬಳಕೆಗೆ ಆದ್ಯತೆ ನೀಡಿ
(ರಾಜ್ಯ ) ಜಿಲ್ಲೆ

ದೈನಂದಿನ ಬದುಕಿನಲ್ಲಿ ಕನ್ನಡ ಭಾಷೆ ಬಳಕೆಗೆ ಆದ್ಯತೆ ನೀಡಿ

By No Comments2 Mins Read
Facebook Twitter Pinterest LinkedIn Telegram WhatsApp
Share
Facebook Twitter LinkedIn Email Telegram WhatsApp

ಕರ್ನಾಟಕ ರಾಜ್ಯೋತ್ಸವ ಕಾರ್ಯಕ್ರಮದಲ್ಲಿ ಪತ್ರಕರ್ತ ನಾಗೇಶ ತಳವಾರ ಕರೆ

ಉದಯರಶ್ಮಿ ದಿನಪತ್ರಿಕೆ

ಸಿಂದಗಿ: ಕನ್ನಡ ಭಾಷೆಯ ಶ್ರೀಮಂತ ಪರಂಪರೆಯನ್ನು ಉಳಿಸಿ ಬೆಳೆಸುವ ಜವಾಬ್ದಾರಿ ಪ್ರತಿಯೊಬ್ಬ ಕನ್ನಡಿಗನ ಮೇಲಿದೆ. ಕೇವಲ ರಾಜ್ಯೋತ್ಸವದ ದಿನದಂದು ಕನ್ನಡದ ಬಗ್ಗೆ ಅಭಿಮಾನ ವ್ಯಕ್ತಪಡಿಸುವುದಷ್ಟೇ ಸಾಲದು. ದೈನಂದಿನ ಬದುಕಿನಲ್ಲಿ ಕನ್ನಡ ಭಾಷೆಯ ಬಳಕೆಗೆ ಆದ್ಯತೆ ನೀಡಬೇಕು ಎಂದು ಪತ್ರಕರ್ತ ನಾಗೇಶ ತಳವಾರ ಹೇಳಿದರು.
ಸಿಂದಗಿ ತಾಲೂಕು ಆಡಳಿತ ವತಿಯಿಂದ ಅಂಬೇಡ್ಕರ್ ಭವನದಲ್ಲಿ ಹಮ್ಮಿಕೊಂಡ ೨೦೨೬ರ ಕರ್ನಾಟಕ ರಾಜ್ಯೋತ್ಸವ ಕಾರ್ಯಕ್ರಮದಲ್ಲಿ ಉಪನ್ಯಾಸ ನೀಡಿ ಮಾತನಾಡಿದ ಅವರು, ಕನ್ನಡ ಭಾಷೆ ಸಾವಿರಾರು ವರ್ಷಗಳ ಇತಿಹಾಸ ಹಾಗೂ ಶ್ರೀಮಂತ ಸಾಹಿತ್ಯ ಪರಂಪರೆಯನ್ನು ಹೊಂದಿದೆ. ಅನೇಕ ಮಹನೀಯರ ತ್ಯಾಗ, ಹೋರಾಟ ಮತ್ತು ಪರಿಶ್ರಮದ ಫಲವಾಗಿ ಕನ್ನಡಿಗರೆಲ್ಲರೂ ಒಂದೇ ರಾಜ್ಯದಡಿ ಒಗ್ಗೂಡುವ ಅವಕಾಶ ದೊರೆತಿದೆ. ಕರ್ನಾಟಕ ಏಕೀಕರಣಕ್ಕಾಗಿ ಹೋರಾಡಿದ ಮಹನೀಯರ ಕೊಡುಗೆ ಹಾಗೂ ತ್ಯಾಗವನ್ನು ಪ್ರತಿಯೊಬ್ಬ ಕನ್ನಡಿಗನು ಸ್ಮರಿಸಬೇಕು. ಮನೆ, ಶಾಲೆ, ಕಚೇರಿ, ವ್ಯಾಪಾರ ಸೇರಿದಂತೆ ಎಲ್ಲ ಕ್ಷೇತ್ರಗಳಲ್ಲಿಯೂ ಕನ್ನಡಕ್ಕೆ ಗೌರವ ಮತ್ತು ಪ್ರಾಶಸ್ತ್ಯ ನೀಡುವ ಮೂಲಕ ಭಾಷೆಯ ಬೆಳವಣಿಗೆಗೆ ಕೈಜೋಡಿಸಬೇಕು ಎಂದರು.
ಈ ವೇಳೆ ಕಸಾಪ ತಾಲೂಕಾಧ್ಯಕ್ಷ ವಾಯ್.ಸಿ.ಮಯೂರ ಪ್ರಾಸ್ತಾವಿಕ ಮಾತನಾಡಿದರು.
ಅಧ್ಯಕ್ಷತೆಯನ್ನು ತಾಲೂಕು ದಂಡಾಧಿಕಾರಿ ಕರೆಪ್ಪ ಬೆಳ್ಳಿ ವಹಿಸಿದ್ದರು.
ಸಿಂದಗಿ ನಗರದಲ್ಲಿ ಭಾನುವಾರ ಕನ್ನಡ ರಾಜ್ಯೋತ್ಸವದ ಸಡಗರ ಮುಗಿಲು ಮುಟ್ಟಿತ್ತು. ತಾಲೂಕು ಆಡಳಿತ, ಪೊಲೀಸ್ ಇಲಾಖೆ ಹಾಗೂ ಕನ್ನಡ ಸಾಹಿತ್ಯ ಪರಿಷತ್ತು, ಕಾರ್ಯನಿರತ ಪತ್ರಕರ್ತರ ಸಂಘ, ಕನ್ನಡ ಮನಸುಗಳ ಸಹಯೋಗದೊಂದಿಗೆ ಎಂಟು ಜ್ಞಾನಪೀಠ ಪ್ರಶಸ್ತಿ ಪುರಸ್ಕೃತರ ಭಾವಚಿತ್ರಗಳ ಜೊತೆಗೆ ಅವರ ಅವರ ಕೃತಿಗಳ ಮೆರವಣಿಗೆ ಮಾಡಲಾಯಿತು.
ತಾಲೂಕು ಆಡಳಿತದಿಂದ ಆರಂಭವಾದ ಮೆರವಣಿಗೆ ದಿ.ಎಂ.ಸಿ.ಮನಗೂಳಿ ರಸ್ತೆ ಮಾರ್ಗ, ಸ್ವಾಮಿ ವಿವೇಕಾನಂದ ವೃತ್ತದಿಂದ ತೋಂಟದ ಸಿದ್ದಲಿಂಗ ಶ್ರೀಗಳ ಮಾರ್ಗ, ಟಿಪ್ಪು ಸುಲ್ತಾನ್ ವೃತ್ತದ ಮಾರ್ಗವಾಗಿ ಸಂಚರಿಸಿ ಡಾ.ಬಿ.ಆರ್.ಅಂಬೇಡ್ಕರ್ ಭವನಕ್ಕೆ ರೂಪಕಗಳ ಜೊತೆಗೆ ನಗರದ ಪ್ರಮುಖ ಬೀದಿಗಳಲ್ಲಿ ಸಾಗಿತು.
ಕನ್ನಡ ವಿಷಯದಲ್ಲಿ ೧೨೫ಕ್ಕೆ ೧೨೫ ಅಂಕಗಳನ್ನು ಪಡೆದ ವಿದ್ಯಾರ್ಥಿಗಳಿಗೆ ಮತ್ತು ಕಲಾವಿದರಿಗೆ ಹಾಗೂ ಸಾಧಕರಿಗೆ ಸನ್ಮಾನಿಸಿ ಗೌರವಿಸಲಾಯಿತು.
ವೇದಿಕೆಯ ಮೇಲೆ ತಾಪಂ ಕಾರ್ಯನಿರ್ವಾಹಕ ಅಧಿಕಾರಿ ಅನೀಲ ಹಳ್ಳಿ, ಸಮಾಜ ಕಲ್ಯಾಣ ಇಲಾಖೆ ಅಧಿಕಾರಿ ಭವಾನಿ ಪಾಟೀಲ, ಕ್ಷೇತ್ರ ಶಿಕ್ಷಣಾಧಿಕಾರಿ ಟಿ.ಎಸ್.ಆಲಗೂರ, ನಗರಸಭೆ ಪೌರಾಯುಕ್ತ ರವಿ ಶಿರಗುಪ್ಪಿ, ಅಶೋಕ ತೆಲ್ಲೂರ, ಇದ್ದರು.
ಇದೇ ಸಂದರ್ಭದಲ್ಲಿ ಅರವಿಂದ ಡೋಣೂರ, ಕಂದಾಯ ನಿರೀಕ್ಷಕ ಆಯ್.ಎ.ಮಕಾಂದಾರ, ಎಡಿಎಲ್‌ಆರ್ ಶಾಂತಪ್ಪ ಅಗಸಬಾಳ, ಕೃಷಿ ಅಧಿಕಾರಿ ಪ್ರಶಾಂತ ಸಾಣಿ, ಶರಣು ಲಂಗೋಟಿ ಸೇರಿದಂತೆ ಕಾರ್ಯಕ್ರಮದಲ್ಲಿ ವಿವಿಧ ಶಾಲೆಯ ಶಿಕ್ಷಕರು, ವಿವಿಧ ಇಲಾಖೆಯ ಅಧಿಕಾರಿಗಳು ಹಾಗೂ ವಿದ್ಯಾರ್ಥಿಗಳು ಇದ್ದರು.
ಎಂ.ಆರ್.ಡೋಣಿ ಕಾರ್ಯಕ್ರಮ ನಿರ್ವಹಿಸಿದರು.

BIJAPUR NEWS bjp congress patil public public news udaya rashmi Udayarashmi today newspaper udayarashminews.com
Share. Facebook Twitter Pinterest Email Telegram WhatsApp
  • Website

Related Posts

ನಾಡಿನ ಜಲಹಕ್ಕುಗಳೊಂದಿಗೆ ಖಂಡಿತ ರಾಜಿ ಇಲ್ಲ

ಮಹಾತ್ಮ ಗಾಂಧೀಜಿ ಚಿಂತನೆಗಳು ಇಂದಿಗೂ ಪ್ರಸ್ತುತ

ರಾಮಾಯಣ ಮಾನವನ ಬದುಕಿಗೆ ದಾರಿದೀಪ :ಬಸನಗೌಡ

ದೇವರಹಿಪ್ಪರಗಿ: ವಿವಿಧೆಡೆ ಕರ್ನಾಟಕ ರಾಜ್ಯೋತ್ಸವ ಸಂಭ್ರಮ

Add A Comment
Leave A Reply Cancel Reply

Categories
  • (ರಾಜ್ಯ ) ಜಿಲ್ಲೆ
  • Helldivers
  • Typora
  • Uncategorized
  • Wemod
  • ಆರೋಗ್ಯ
  • ಇತರೆ
  • ಕಾವ್ಯರಶ್ಮಿ
  • ಚಿಂತನ
  • ದಿನಪತ್ರಿಕೆ
  • ಪುಸ್ತಕ ಪರಿಚಯ
  • ಪ್ರೇಮಲೋಕ
  • ಭಾವರಶ್ಮಿ
  • ರಾಷ್ಚ್ರ
  • ವಿಜಯಪುರ
  • ವಿದ್ಯಾರ್ಥಿ ನಿಧಿ
  • ವಿಶೇಷ ಲೇಖನ
  • ಸಾಹಿತ್ಯ
  • ಸಿನಿಮಾ
  • ಹೊತ್ತಿಗೆ ಹೊರಣ
Recent Posts
  • ನಾಡಿನ ಜಲಹಕ್ಕುಗಳೊಂದಿಗೆ ಖಂಡಿತ ರಾಜಿ ಇಲ್ಲ
    In (ರಾಜ್ಯ ) ಜಿಲ್ಲೆ
  • ಮಹಾತ್ಮ ಗಾಂಧೀಜಿ ಚಿಂತನೆಗಳು ಇಂದಿಗೂ ಪ್ರಸ್ತುತ
    In (ರಾಜ್ಯ ) ಜಿಲ್ಲೆ
  • ರಾಮಾಯಣ ಮಾನವನ ಬದುಕಿಗೆ ದಾರಿದೀಪ :ಬಸನಗೌಡ
    In (ರಾಜ್ಯ ) ಜಿಲ್ಲೆ
  • ದೇವರಹಿಪ್ಪರಗಿ: ವಿವಿಧೆಡೆ ಕರ್ನಾಟಕ ರಾಜ್ಯೋತ್ಸವ ಸಂಭ್ರಮ
    In (ರಾಜ್ಯ ) ಜಿಲ್ಲೆ
  • ಕಬ್ಬಿಗೆ ಬೆಂಬಲ ಬೆಲೆಗೆ ಆಗ್ರಹಿಸಿ ಹಿರೇಮಸಳಿ ಬಂದ್
    In (ರಾಜ್ಯ ) ಜಿಲ್ಲೆ
  • ದೈನಂದಿನ ಬದುಕಿನಲ್ಲಿ ಕನ್ನಡ ಭಾಷೆ ಬಳಕೆಗೆ ಆದ್ಯತೆ ನೀಡಿ
    In (ರಾಜ್ಯ ) ಜಿಲ್ಲೆ
  • ನ.೪ರಂದು ವಿದ್ಯುತ್ ಪೂರೈಕೆಯಲ್ಲಿ ವ್ಯತ್ಯಯ
    In (ರಾಜ್ಯ ) ಜಿಲ್ಲೆ
  • ವಿಶೇಷಚೇತನರ ಕ್ಷೇತ್ರದಲ್ಲಿ ಸಾಧನೆ ಮಾಡಿದ ವ್ಯಕ್ತಿ, ಸಂಸ್ಥೆ ಹಾಗೂ ವಿಶೇಷ ಶಿಕ್ಷಕರಿಗೆ ರಾಜ್ಯ ಪ್ರಶಸ್ತಿ: ಅರ್ಜಿ ಆಹ್ವಾನ
    In (ರಾಜ್ಯ ) ಜಿಲ್ಲೆ
  • ರಾಜ್ಯೋತ್ಸವದ ಸಂಭ್ರಮಕ್ಕೆ ಚಿಣ್ಣರ ಸಾಂಸ್ಕೃತಿಕ ವೈಭವದ ಮೆರುಗು
    In (ರಾಜ್ಯ ) ಜಿಲ್ಲೆ
  • ನಮ್ಮ ನಾಡಿನ ಪರಂಪರೆ ಉಳಿಸಿ-ಬೆಳೆಸುವುದು ನಮ್ಮೆಲ್ಲರ ಕರ್ತವ್ಯ
    In (ರಾಜ್ಯ ) ಜಿಲ್ಲೆ
Editors Picks
Top Reviews
udayarashminews.com
Facebook X (Twitter) Instagram Pinterest Vimeo YouTube
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
© 2026 udayarashminews.com. Designed by udayarashmi news .

Type above and press Enter to search. Press Esc to cancel.