ವಿಜಯಪುರ: ಜಿಲ್ಲಾಡಳಿತದ ವತಿಯಿಂದ ಇದೇ ನವೆಂಬರ್ ೧೧ ರಂದು ಒನಕೆ ಓಬವ್ವ ಜಯಂತಿ ಕಾರ್ಯಕ್ರಮ ಅರ್ಥಪೂರ್ಣವಾಗಿ ಹಮ್ಮಿಕೊಳ್ಳಲು ನಿರ್ಧರಿಸಲಾಯಿತು.
ಶುಕ್ರವಾರ ನಗರದ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಅಪರ ಜಿಲ್ಲಾಧಿಕಾರಿ ಮಹಾದೇವ ಮುರಗಿ ಅವರ ಅಧ್ಯಕ್ಷತೆಯಲ್ಲಿ ಜರುಗಿದ ಪೂರ್ವಸಿದ್ಧತಾ ಸಭೆಯಲ್ಲಿ ಈ ನಿರ್ಣಯ ಕೈಗೊಂಡು, ಅಂದು ಬೆಳಿಗ್ಗೆ ೯ ಗಂಟೆಗೆ ನಗರದ ಶ್ರೀ ಸಿದ್ದೇಶ್ವರ ದೇವಸ್ಥಾನದಿಂದ ಭಾವಚಿತ್ರ ಮೆರವಣಿಗೆಗೆ ಚಾಲನೆ, ನಗರದ ಕಂದಗಲ್ ಶ್ರೀ ಹನುಮಂತರಾಯ ರಂಗಮಂದಿರದಲ್ಲಿ ಜಯಂತಿ ವೇದಿಕೆ ಕಾರ್ಯಕ್ರಮ ಹಮ್ಮಿಕೊಳ್ಳಲು ನಿರ್ಧರಿಸಿ, ವೇದಿಕೆ ಕಾರ್ಯಕ್ರಮಕ್ಕೆ ಶಿಷ್ಠಾಚಾರದಂತೆ ಜನಪ್ರತಿನಿಧಿಗಳು, ಗಣ್ಯರಿಗೆ ಆಹ್ವಾನ, ಆಮಂತ್ರಣ ಪತ್ರಿಕೆ, ವೇದಿಕೆ ಅಲಂಕಾರ, ಸ್ವಚ್ಛತೆ, ಆಸನ ವ್ಯವಸ್ಥೆ ಸೇರಿದಂತೆ ಎಲ್ಲ ಅಗತ್ಯ ಸಿದ್ಧತೆಗಳನ್ನು ಕೈಗೊಳ್ಳುವಂತೆ ಸಂಬಂಧಿಸಿದ ಅಧಿಕಾರಿಗಳಿಗೆ ಸೂಚಿಸಲಾಯಿತು.
ಜಯಂತಿ ಕಾರ್ಯಕ್ರಮದಲ್ಲಿ ವಿವಿಧ ಸಂಘ-ಸಂಸ್ಥೆಗಳು ಸೇರಿದಂತೆ ಹೆಚ್ಚಿನ ಸಂಖ್ಯೆಯಲ್ಲಿ ಸಾರ್ವಜನಿಕರು ಭಾಗವಹಿಸುವಂತೆ ನೋಡಿಕೊಂಡು ಅರ್ಥಪೂರ್ಣ ಆಚರಣೆಗೆ ನಿರ್ಧರಿಸಲಾಯಿತು.
ಸಭೆಯಲ್ಲಿ ಜಿಲ್ಲಾ ಪಂಚಾಯತ್ ಯೋಜನಾ ನಿರ್ದೇಶಕ ಸಿ.ಬಿ.ದೇವರಮನಿ, ಮುಖಂಡರಾದ ಅಭಿಷೇಕ ಚಕ್ರವರ್ತಿ, ರಾಜಶೇಖರ ಕುದರಿ, ಭೀಮರಾಯ ಜಿಗಜಿಣಗಿ, ವಾಯ್.ಎಚ್.ವಿಜಯಕರ, ವಿದ್ಯಾವತಿ ಅಂಕಲಗಿ, ಸೋಮನಗೌಡ ಕಲ್ಲೂರ, ಗಿರೀಶ ಕುಲಕರ್ಣಿ ಸೇರಿದಂತೆ ವಿವಿಧ ಇಲಾಖೆ ಅಧಿಕಾರಿಗಳು ಉಪಸ್ಥಿತರಿದ್ದರು. ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಹಾಯಕ ನಿರ್ದೇಶಕ ಕರಣ್‌ಕುಮಾರ ಸ್ವಾಗತಿಸಿ ವಂದಿಸಿದರು.
Related Posts
Add A Comment