Close Menu
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ

Subscribe to Updates

Get the latest creative news from FooBar about art, design and business.

What's Hot

ಕನ್ನಡ ಅಂಕಿಗಳ ಬಳಕೆಯಿಂದ ಭಾಷೆ ಉಳಿಸಿ :ಪ.ಗು.ಸಿದ್ದಾಪುರ

ಕನ್ನಡ ಕೇವಲ ಭಾಷೆಯಲ್ಲ ನಮ್ಮ ಬದುಕು-ಸಂಸ್ಕೃತಿ-ಸ್ವಾಭಿಮಾನ

ಅಕ್ರಮ ಕಂಟ್ರಿ ಪಿಸ್ತೂಲ್ ವಶ :ಇಬ್ಬರ ಬಂಧನ

Facebook X (Twitter) Instagram
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
Facebook X (Twitter) Instagram YouTube WhatsApp
udayarashminews.comudayarashminews.com
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
udayarashminews.comudayarashminews.com
Home»(ರಾಜ್ಯ ) ಜಿಲ್ಲೆ»ಚಡಚಣ ಬಂದ್‌ಗೆ ಸಂಪೂರ್ಣ ಬೆಂಬಲ; ಪಟ್ಟಣ ಸ್ತಬ್ಧ!
(ರಾಜ್ಯ ) ಜಿಲ್ಲೆ

ಚಡಚಣ ಬಂದ್‌ಗೆ ಸಂಪೂರ್ಣ ಬೆಂಬಲ; ಪಟ್ಟಣ ಸ್ತಬ್ಧ!

By No Comments2 Mins Read
Facebook Twitter Pinterest LinkedIn Telegram WhatsApp
Share
Facebook Twitter LinkedIn Email Telegram WhatsApp

ಕಬ್ಬಿಗೆ ₹5,500 ದರ ನಿಗದಿಗೆ ಆಗ್ರಹಿಸಿ ರಾಜ್ಯ ಹೆದ್ದಾರಿ ತಡೆದು ರೈತರ ಪ್ರತಿಭಟನೆ | ₹5,500 ದರ ನೀಡದಿದ್ದರೆ ಹೋರಾಟ ತೀವ್ರ | ರೈತರ ಎಚ್ಚರಿಕೆ

ಚಡಚಣ: ಕಬ್ಬಿಗೆ ಪ್ರತಿ ಟನ್‌ಗೆ ಕನಿಷ್ಠ ₹5,500 ದರ ನಿಗದಿಪಡಿಸಬೇಕು ಹಾಗೂ ರೈತರ ವಿವಿಧ ಬೇಡಿಕೆಗಳನ್ನು ಈಡೇರಿಸಬೇಕೆಂದು ಆಗ್ರಹಿಸಿ ಕರ್ನಾಟಕ ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆ ಕರೆ ನೀಡಿದ್ದ ಕರ್ನಾಟಕ ಬಂದ್‌ಗೆ ಚಡಚಣ ಪಟ್ಟಣ ಸೇರಿದಂತೆ ತಾಲೂಕಿನಾದ್ಯಂತ ಉತ್ತಮ ಬೆಂಬಲ ವ್ಯಕ್ತವಾಯಿತು. ರೈತರು ರಾಜ್ಯ ಹೆದ್ದಾರಿ ತಡೆದು ಪ್ರತಿಭಟನೆ ನಡೆಸುವ ಮೂಲಕ ಸರ್ಕಾರದ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದರು.
ಪಟ್ಟಣದ ಲಿಂಗಸುಗೂರು-ಶಿರಾಡೋಣ ರಾಜ್ಯ ಹೆದ್ದಾರಿಯಲ್ಲಿ ರಸ್ತೆ ತಡೆ ನಡೆಸಿದ ರೈತರು, ಕಬ್ಬಿಗೆ ನ್ಯಾಯಯುತ ಬೆಲೆ ನೀಡುವಂತೆ ಘೋಷಣೆ ಕೂಗಿದರು.
ಈ ಸಂದರ್ಭದಲ್ಲಿ ಹಿರಿಯ ರೈತ ಮುಖಂಡ ಮುರುಗೇಂದ್ರ ಸಿಂಪಿ ಮಾತನಾಡಿ, ಪ್ರಸಕ್ತ ವರ್ಷ ಕೃಷಿ ವೆಚ್ಚ ಗಣನೀಯವಾಗಿ ಹೆಚ್ಚಾಗಿದೆ. ರಸಗೊಬ್ಬರ, ಬಿತ್ತನೆ ಬೀಜ, ಕೂಲಿ ಸೇರಿದಂತೆ ಕೃಷಿಗೆ ಬೇಕಾದ ಪ್ರತಿಯೊಂದು ವಸ್ತುವಿನ ಬೆಲೆಯೂ ಏರಿಕೆಯಾಗಿದೆ. ಆದರೆ ರೈತರು ಬೆಳೆದ ಬೆಳೆಗಳಿಗೆ ಮಾತ್ರ ಸಮರ್ಪಕ ಬೆಲೆ ದೊರೆಯುತ್ತಿಲ್ಲ. ಹೀಗಿರುವಾಗ ಹಿಂದಿನ ವರ್ಷಗಳ ದರವನ್ನು ಮುಂದುವರಿಸುವುದು ರೈತರಿಗೆ ಅನ್ಯಾಯ ಮಾಡಿದಂತಾಗುತ್ತದೆ. ಕಬ್ಬಿಗೆ ಕನಿಷ್ಠ ₹5,500 ದರ ನೀಡುವ ಮೂಲಕ ಸರ್ಕಾರ ರೈತರ ನೆರವಿಗೆ ಬರಬೇಕು ಎಂದು ಆಗ್ರಹಿಸಿದರು.
ಬರ ಪರಿಹಾರವಾಗಿ ಸರ್ಕಾರ ನೀಡುತ್ತಿರುವ ₹2,500 ರೈತರಿಗೆ ಮಾಡಿದ ಅವಮಾನವಾಗಿದೆ. ಪರಿಹಾರ ಪಡೆಯಲು 17 ಷರತ್ತುಗಳನ್ನು ವಿಧಿಸಿರುವುದರಿಂದ ರೈತರು ಕಚೇರಿಗಳಿಗೆ ಅಲೆದಾಡುವ ಪರಿಸ್ಥಿತಿ ನಿರ್ಮಾಣವಾಗಿದೆ. ಪರಿಹಾರ ನೀಡುವ ಬದಲು ದಾಖಲೆಗಳ ನೆಪದಲ್ಲಿ ರೈತರನ್ನು ಸತಾಯಿಸಲಾಗುತ್ತಿದೆ. ಸರ್ಕಾರಕ್ಕೆ ನಿಜವಾಗಿಯೂ ರೈತರ ಬಗ್ಗೆ ಕಾಳಜಿ ಇದ್ದರೆ ಷರತ್ತುಗಳನ್ನು ಸರಳಗೊಳಿಸಿ ಸೂಕ್ತ ಪರಿಹಾರ ನೀಡಬೇಕು ಎಂದು ಒತ್ತಾಯಿಸಿದರು.
ರೈತ ಮುಖಂಡ ಮಹಾದೇವ ಹಿರೇಕುರಬರ ಮಾತನಾಡಿದರು.
ಪ್ರತಿಭಟನೆಯ ಹಿನ್ನೆಲೆಯಲ್ಲಿ ಲಿಂಗಸುಗೂರು-ಶಿರಾಡೋಣ ರಾಜ್ಯ ಹೆದ್ದಾರಿಯನ್ನು ಸುಮಾರು ಗಂಟೆಗಳ ಕಾಲ ಬಂದ್ ಮಾಡಲಾಯಿತು. ಪಟ್ಟಣದ ಅಂಗಡಿ-ಮುಂಗಟ್ಟುಗಳನ್ನು ಬಂದ್ ಮಾಡಿಸಿ, ಸಾರಿಗೆ ಸಂಚಾರ ಸ್ಥಗಿತಗೊಳಿಸಲಾಯಿತು. ಅಲ್ಲದೆ, ಪಂಢರಪುರಕ್ಕೆ ಸಂಪರ್ಕ ಕಲ್ಪಿಸುವ ರಾಷ್ಟ್ರೀಯ ಹೆದ್ದಾರಿಯನ್ನು ಬಸವೇಶ್ವರ ವೃತ್ತದಲ್ಲಿ ಸುಮಾರು ನಾಲ್ಕೈದು ಗಂಟೆಗಳ ಕಾಲ ತಡೆದು ರೈತರು ಪ್ರತಿಭಟನೆ ನಡೆಸಿದರು. ಇದರಿಂದ ಪ್ರಯಾಣಿಕರು ಹಾಗೂ ವಾಹನ ಸವಾರರು ತೀವ್ರ ತೊಂದರೆ ಅನುಭವಿಸಿದರು.
ಕರ್ನಾಟಕ ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆಯ ಅಧ್ಯಕ್ಷ ಚೂನಪ್ಪ ಪೂಜಾರಿ ಮತ್ತು ಶ್ರೀಕಾಂತ ಗುರೂಜಿ ಅವರ ನೇತೃತ್ವದಲ್ಲಿ ಕರೆ ನೀಡಲಾಗಿದ್ದ ಕರ್ನಾಟಕ ಬಂದ್‌ಗೆ ಚಡಚಣ ಪಟ್ಟಣ ಮತ್ತು ಸುತ್ತಮುತ್ತಲಿನ ಗ್ರಾಮಗಳಲ್ಲಿ ರೈತರು, ವ್ಯಾಪಾರಸ್ಥರು ಹಾಗೂ ವಿವಿಧ ಜನಪರ ಸಂಘ-ಸಂಸ್ಥೆಗಳು ಬೆಂಬಲ ಸೂಚಿಸಿದವು.
ಹೋರಾಟದಲ್ಲಿ ಮಹಾದೇವ ಕರ್ಲಮಳ, ಗೇನಪ್ಪ ಬಿರಾದಾರ, ರಮೇಶ ನಾವಿ, ಕಾಶಿರಾಯ ಕಾಮಗೊಂಡ, ಭೀಮಶಂಕರ ಉಮರಾಣಿ, ಪ್ರಕಾಶ ಬತಗುಣಕಿ, ಶಕೀಲ್ ಕಾಟಿಕ್ ಸೇರಿದಂತೆ ಸುತ್ತಮುತ್ತಲಿನ ಗ್ರಾಮಗಳ ರೈತ ಮುಖಂಡರು ಹಾಗೂ ನೂರಾರು ರೈತರು ಭಾಗವಹಿಸಿದ್ದರು.

BIJAPUR NEWS bjp congress patil public public news udaya rashmi Udayarashmi today newspaper udayarashminews.com
Share. Facebook Twitter Pinterest Email Telegram WhatsApp
  • Website

Related Posts

ಕನ್ನಡ ಅಂಕಿಗಳ ಬಳಕೆಯಿಂದ ಭಾಷೆ ಉಳಿಸಿ :ಪ.ಗು.ಸಿದ್ದಾಪುರ

ಕನ್ನಡ ಕೇವಲ ಭಾಷೆಯಲ್ಲ ನಮ್ಮ ಬದುಕು-ಸಂಸ್ಕೃತಿ-ಸ್ವಾಭಿಮಾನ

ಅಕ್ರಮ ಕಂಟ್ರಿ ಪಿಸ್ತೂಲ್ ವಶ :ಇಬ್ಬರ ಬಂಧನ

ಹಸಿರು ವಿಜಯಪುರದಿಂದ ಜನರ ಭವಿಷ್ಯ ಉಜ್ವಲವಾಗಲಿದೆ

Add A Comment
Leave A Reply Cancel Reply

Categories
  • (ರಾಜ್ಯ ) ಜಿಲ್ಲೆ
  • Helldivers
  • Typora
  • Uncategorized
  • Wemod
  • ಆರೋಗ್ಯ
  • ಇತರೆ
  • ಕಾವ್ಯರಶ್ಮಿ
  • ಚಿಂತನ
  • ದಿನಪತ್ರಿಕೆ
  • ಪುಸ್ತಕ ಪರಿಚಯ
  • ಪ್ರೇಮಲೋಕ
  • ಭಾವರಶ್ಮಿ
  • ರಾಷ್ಚ್ರ
  • ವಿಜಯಪುರ
  • ವಿದ್ಯಾರ್ಥಿ ನಿಧಿ
  • ವಿಶೇಷ ಲೇಖನ
  • ಸಾಹಿತ್ಯ
  • ಸಿನಿಮಾ
  • ಹೊತ್ತಿಗೆ ಹೊರಣ
Recent Posts
  • ಕನ್ನಡ ಅಂಕಿಗಳ ಬಳಕೆಯಿಂದ ಭಾಷೆ ಉಳಿಸಿ :ಪ.ಗು.ಸಿದ್ದಾಪುರ
    In (ರಾಜ್ಯ ) ಜಿಲ್ಲೆ
  • ಕನ್ನಡ ಕೇವಲ ಭಾಷೆಯಲ್ಲ ನಮ್ಮ ಬದುಕು-ಸಂಸ್ಕೃತಿ-ಸ್ವಾಭಿಮಾನ
    In (ರಾಜ್ಯ ) ಜಿಲ್ಲೆ
  • ಅಕ್ರಮ ಕಂಟ್ರಿ ಪಿಸ್ತೂಲ್ ವಶ :ಇಬ್ಬರ ಬಂಧನ
    In (ರಾಜ್ಯ ) ಜಿಲ್ಲೆ
  • ಹಸಿರು ವಿಜಯಪುರದಿಂದ ಜನರ ಭವಿಷ್ಯ ಉಜ್ವಲವಾಗಲಿದೆ
    In (ರಾಜ್ಯ ) ಜಿಲ್ಲೆ
  • ಚಡಚಣ ಬಂದ್‌ಗೆ ಸಂಪೂರ್ಣ ಬೆಂಬಲ; ಪಟ್ಟಣ ಸ್ತಬ್ಧ!
    In (ರಾಜ್ಯ ) ಜಿಲ್ಲೆ
  • ದಾಖಲೆ ಬರೆದ ವಿಜಯಪುರ ಪೊಲೀಸರು; ಸಂತ್ರಸ್ತರಿಗೆ ಸ್ವತ್ತು ಹಸ್ತಾಂತರ
    In (ರಾಜ್ಯ ) ಜಿಲ್ಲೆ
  • ನನಗೂ ಡಿಜಿಟಲ್ ಅರೆಸ್ಟ್ ಮಾಡಲು ಮುಂದಾಗಿದ್ದರು!
    In (ರಾಜ್ಯ ) ಜಿಲ್ಲೆ
  • ನಾಡಿನ ಜಲಹಕ್ಕುಗಳೊಂದಿಗೆ ಖಂಡಿತ ರಾಜಿ ಇಲ್ಲ
    In (ರಾಜ್ಯ ) ಜಿಲ್ಲೆ
  • ಮಹಾತ್ಮ ಗಾಂಧೀಜಿ ಚಿಂತನೆಗಳು ಇಂದಿಗೂ ಪ್ರಸ್ತುತ
    In (ರಾಜ್ಯ ) ಜಿಲ್ಲೆ
  • ರಾಮಾಯಣ ಮಾನವನ ಬದುಕಿಗೆ ದಾರಿದೀಪ :ಬಸನಗೌಡ
    In (ರಾಜ್ಯ ) ಜಿಲ್ಲೆ
Editors Picks
Top Reviews
udayarashminews.com
Facebook X (Twitter) Instagram Pinterest Vimeo YouTube
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
© 2026 udayarashminews.com. Designed by udayarashmi news .

Type above and press Enter to search. Press Esc to cancel.