Close Menu
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ

Subscribe to Updates

Get the latest creative news from FooBar about art, design and business.

What's Hot

ಕನ್ನಡ ಅಂಕಿಗಳ ಬಳಕೆಯಿಂದ ಭಾಷೆ ಉಳಿಸಿ :ಪ.ಗು.ಸಿದ್ದಾಪುರ

ಕನ್ನಡ ಕೇವಲ ಭಾಷೆಯಲ್ಲ ನಮ್ಮ ಬದುಕು-ಸಂಸ್ಕೃತಿ-ಸ್ವಾಭಿಮಾನ

ಅಕ್ರಮ ಕಂಟ್ರಿ ಪಿಸ್ತೂಲ್ ವಶ :ಇಬ್ಬರ ಬಂಧನ

Facebook X (Twitter) Instagram
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
Facebook X (Twitter) Instagram YouTube WhatsApp
udayarashminews.comudayarashminews.com
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
udayarashminews.comudayarashminews.com
Home»(ರಾಜ್ಯ ) ಜಿಲ್ಲೆ»ಕನ್ನಡ ಅಂಕಿಗಳ ಬಳಕೆಯಿಂದ ಭಾಷೆ ಉಳಿಸಿ :ಪ.ಗು.ಸಿದ್ದಾಪುರ
(ರಾಜ್ಯ ) ಜಿಲ್ಲೆ

ಕನ್ನಡ ಅಂಕಿಗಳ ಬಳಕೆಯಿಂದ ಭಾಷೆ ಉಳಿಸಿ :ಪ.ಗು.ಸಿದ್ದಾಪುರ

By No Comments2 Mins Read
Facebook Twitter Pinterest LinkedIn Telegram WhatsApp
Share
Facebook Twitter LinkedIn Email Telegram WhatsApp

ಕೊಲ್ಹಾರದಲ್ಲಿ ತಾಲೂಕು ಆಡಳಿತದಿಂದ ಆಯೋಜಿಸಿದ್ದ ೭೧ನೇ ಕನ್ನಡ ರಾಜ್ಯೋತ್ಸವ ಕಾರ್ಯಕ್ರಮ

ಉದಯರಶ್ಮಿ ದಿನಪತ್ರಿಕೆ

ಕೊಲ್ಹಾರ: ಕನ್ನಡ ನಾಡು, ನುಡಿ, ಭಾಷೆ ಹಾಗೂ ಸಂಸ್ಕೃತಿಯ ರಕ್ಷಣೆ ಪ್ರತಿಯೊಬ್ಬ ಕನ್ನಡಿಗನ ಆದ್ಯ ಕರ್ತವ್ಯವಾಗಿದ್ದು, ಕನ್ನಡದ ಅಸ್ಮಿತೆಯನ್ನು ಉಳಿಸಿ ಬೆಳೆಸಲು ಎಲ್ಲರೂ ಕೈಜೋಡಿಸಬೇಕು ಎಂದು ತಹಶೀಲ್ದಾರ್ ಸಂತೋಷ ಮ್ಯಾಗೇರಿ ಹೇಳಿದರು.
ಪಟ್ಟಣದ ಎಂ.ಪಿ.ಎಸ್. ಶಾಲಾ ಮೈದಾನದ ಸಭಾಂಗಣದಲ್ಲಿ ಭಾನುವಾರ ತಾಲೂಕು ಆಡಳಿತ ವತಿಯಿಂದ ಆಯೋಜಿಸಿದ್ದ ೭೧ನೇ ಕನ್ನಡ ರಾಜ್ಯೋತ್ಸವ ಕಾರ್ಯಕ್ರಮದಲ್ಲಿ ಅವರು ಪ್ರಾಸ್ತಾವಿಕವಾಗಿ ಮಾತನಾಡಿದರು.
ಅಖಂಡ ಕರ್ನಾಟಕ ನಿರ್ಮಾಣಕ್ಕಾಗಿ ಶ್ರಮಿಸಿದ ಹೋರಾಟಗಾರರ ತ್ಯಾಗ, ಪರಿಶ್ರಮ ಹಾಗೂ ಕನ್ನಡ ನಾಡಿನ ಇತಿಹಾಸವನ್ನು ಸ್ಮರಿಸುವುದರ ಜೊತೆಗೆ ಮುಂದಿನ ಪೀಳಿಗೆಗೆ ಕನ್ನಡದ ಶ್ರೀಮಂತ ಪರಂಪರೆಯನ್ನು ಪರಿಚಯಿಸುವ ಜವಾಬ್ದಾರಿ ನಮ್ಮೆಲ್ಲರ ಮೇಲಿದೆ ಎಂದರು.
ಮುಖ್ಯ ಉಪನ್ಯಾಸ ನೀಡಿದ ಮಕ್ಕಳ ಸಾಹಿತಿ, ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತ ಪ.ಗು. ಸಿದ್ದಾಪುರ ಮಾತನಾಡಿ, ಕನ್ನಡ ರಾಜ್ಯೋತ್ಸವ ಕನ್ನಡಿಗರ ಹೆಮ್ಮೆಯ ಹಬ್ಬವಾಗಿದೆ. ಕನ್ನಡ ಭಾಷೆಯ ಉಳಿವಿಗಾಗಿ ಕನ್ನಡ ಅಂಕಿಗಳನ್ನು ದೈನಂದಿನ ವ್ಯವಹಾರಗಳಲ್ಲಿ ಹೆಚ್ಚಾಗಿ ಬಳಸಬೇಕು. ಅಖಂಡ ಕರ್ನಾಟಕ ನಿರ್ಮಾಣದಲ್ಲಿ ಕವಿಗಳು, ಸಾಹಿತಿಗಳು, ಹೋರಾಟಗಾರರು ಹಾಗೂ ರಾಜಕೀಯ ನಾಯಕರ ಒಗ್ಗಟ್ಟು ಮಹತ್ವದ ಪಾತ್ರ ವಹಿಸಿದೆ. ಅವರ ಪರಿಶ್ರಮದ ಫಲವಾಗಿ ಸುಂದರ ಕರ್ನಾಟಕ ನಿರ್ಮಾಣವಾಗಿದೆ. ಕನ್ನಡಿಗರು ಭಾಷಾಭಿಮಾನವನ್ನು ಕೇವಲ ರಾಜ್ಯೋತ್ಸವಕ್ಕೆ ಸೀಮಿತಗೊಳಿಸದೆ ನಿತ್ಯ ಜೀವನದಲ್ಲಿ ಅಳವಡಿಸಿಕೊಳ್ಳಬೇಕು ಎಂದು ಕರೆ ನೀಡಿದರು.
ಪಟ್ಟಣ ಪಂಚಾಯಿತಿ ಅಧ್ಯಕ್ಷ ದಸ್ತಗೀರ ಕಲಾದಗಿ ಮಾತನಾಡಿ, ಪಟ್ಟಣದ ಎಲ್ಲ ಅಂಗಡಿ-ಮುಂಗಟ್ಟುಗಳ ನಾಮಫಲಕಗಳನ್ನು ಕನ್ನಡದಲ್ಲಿಯೇ ಅಳವಡಿಸುವ ಮೂಲಕ ಕನ್ನಡ ಭಾಷೆಯ ಉಳಿವಿಗೆ ಪಟ್ಟಣ ಪಂಚಾಯಿತಿ ಬದ್ಧವಾಗಿದೆ ಎಂದರು.
ಸನ್ಮಾನ: ಎಸ್‌ಎಸ್‌ಎಲ್‌ಸಿ ಹಾಗೂ ದ್ವಿತೀಯ ಪಿಯುಸಿ ಪರೀಕ್ಷೆಯಲ್ಲಿ ಕನ್ನಡ ವಿಷಯದಲ್ಲಿ ಹೆಚ್ಚು ಅಂಕ ಗಳಿಸಿದ ವಿದ್ಯಾರ್ಥಿಗಳನ್ನು ಸನ್ಮಾನಿಸಲಾಯಿತು. ನೂತನ ಸರ್ಕಾರಿ ನೌಕರರ ಸಂಘದ ಅಧ್ಯಕ್ಷ ಕೆ.ಎಸ್. ಬಾಲಗೊಂಡ, ಹೆಸ್ಕಾಂ ಅಧಿಕಾರಿ ಬಾಪು ಇಳಗೇರ, ಕೆಎಸ್‌ಆರ್‌ಟಿಸಿ ಅಧಿಕಾರಿ ಸುರೇಶ ಚಲವಾದಿ ಹಾಗೂ ನಾಡು-ನುಡಿಗಾಗಿ ಶ್ರಮಿಸುತ್ತಿರುವ ಕರವೇ ಅಧ್ಯಕ್ಷ ರವಿ ಗೊಳಸಂಗಿ ಅವರನ್ನು ಗೌರವಿಸಲಾಯಿತು.
ಕಾರ್ಯಕ್ರಮದಲ್ಲಿ ಪಟ್ಟಣ ಪಂಚಾಯಿತಿ ಉಪಾಧ್ಯಕ್ಷೆ ರಾಜಮಾ ನದಾಫ, ತಾ.ಪಂ. ಕಾರ್ಯನಿರ್ವಹಣಾಧಿಕಾರಿ ಸುನೀಲ ಮದ್ದಿನ, ಪಂಚ ಗ್ಯಾರಂಟಿ ಸಮಿತಿ ಅಧ್ಯಕ್ಷ ಸಂತೋಷ ಗಣಾಚಾರಿ, ಮಾಜಿ ಪಟ್ಟಣ ಪಂಚಾಯಿತಿ ಅಧ್ಯಕ್ಷ ಸಿ.ಎಸ್. ಗಿಡ್ಡಪ್ಪಗೋಳ, ಪಿಎಸ್‌ಐ ಅಶೋಕ ನಾಯ್ಕ, ಲಕ್ಷ್ಮೀ ತಲ್ಲೂರ, ಎಂ.ಕೆ. ಪುರೋಹಿತ, ವೆಂಕಟೇಶ ವಾಲಿಕಾರ, ವ್ಹಿ.ಎಚ್. ಪುರೋಹಿತ, ಮನು ಪತ್ತಾರ, ಡೂಣೂರ ಸರ್, ಶಿವಶರಣ ತಡಲಗಿ, ಸಂಗಮೇಶ ಜಂಗಮಶೆಟ್ಟಿ ಸೇರಿದಂತೆ ಪಟ್ಟಣ ಪಂಚಾಯಿತಿ ಸದಸ್ಯರು, ಕನ್ನಡಪರ ಸಂಘಟನೆಗಳ ಪದಾಧಿಕಾರಿಗಳು, ಶಿಕ್ಷಕರು, ವಿದ್ಯಾರ್ಥಿಗಳು ಹಾಗೂ ನಾಗರಿಕರು ಉಪಸ್ಥಿತರಿದ್ದರು.
ಎಸ್.ಎ. ಪಾಟೀಲ ನಿರೂಪಿಸಿದರು. ಎಸ್.ಟಿ. ಯಡಹಳ್ಳಿ ಸ್ವಾಗತಿಸಿದರು. ವ್ಹಿ.ಜಿ. ಕುಲಕರ್ಣಿ ವಂದಿಸಿದರು.

ಆಕರ್ಷಕ ಮೆರವಣಿಗೆ

ಕನ್ನಡ ರಾಜ್ಯೋತ್ಸವದ ಅಂಗವಾಗಿ ಪಟ್ಟಣದ ಆಟೋ ಚಾಲಕರು ತಮ್ಮ ಆಟೋಗಳಲ್ಲಿ ಕನ್ನಡ ನಾಡಿನ ರಾಜ-ಮಹಾರಾಜರು, ಕವಿಗಳು, ಸಂತರು, ವಚನಕಾರರು ಹಾಗೂ ತಾಯಿ ಭುವನೇಶ್ವರಿ ದೇವಿಯ ಭಾವಚಿತ್ರಗಳನ್ನು ಅಳವಡಿಸಿ ಪ್ರಮುಖ ಬೀದಿಗಳಲ್ಲಿ ಮೆರವಣಿಗೆ ನಡೆಸಿದರು. ವಿವಿಧ ಕಲಾ ತಂಡಗಳ ಪ್ರದರ್ಶನ ಹಾಗೂ ವಿದ್ಯಾರ್ಥಿಗಳ ಪ್ರಭಾತ್‌ಫೇರಿ ಕಾರ್ಯಕ್ರಮಕ್ಕೆ ಮತ್ತಷ್ಟು ಮೆರುಗು ನೀಡಿದವು.

BIJAPUR NEWS bjp congress patil public public news udaya rashmi Udayarashmi today newspaper udayarashminews.com
Share. Facebook Twitter Pinterest Email Telegram WhatsApp
  • Website

Related Posts

ಕನ್ನಡ ಕೇವಲ ಭಾಷೆಯಲ್ಲ ನಮ್ಮ ಬದುಕು-ಸಂಸ್ಕೃತಿ-ಸ್ವಾಭಿಮಾನ

ಅಕ್ರಮ ಕಂಟ್ರಿ ಪಿಸ್ತೂಲ್ ವಶ :ಇಬ್ಬರ ಬಂಧನ

ಹಸಿರು ವಿಜಯಪುರದಿಂದ ಜನರ ಭವಿಷ್ಯ ಉಜ್ವಲವಾಗಲಿದೆ

ಚಡಚಣ ಬಂದ್‌ಗೆ ಸಂಪೂರ್ಣ ಬೆಂಬಲ; ಪಟ್ಟಣ ಸ್ತಬ್ಧ!

Add A Comment
Leave A Reply Cancel Reply

Categories
  • (ರಾಜ್ಯ ) ಜಿಲ್ಲೆ
  • Helldivers
  • Typora
  • Uncategorized
  • Wemod
  • ಆರೋಗ್ಯ
  • ಇತರೆ
  • ಕಾವ್ಯರಶ್ಮಿ
  • ಚಿಂತನ
  • ದಿನಪತ್ರಿಕೆ
  • ಪುಸ್ತಕ ಪರಿಚಯ
  • ಪ್ರೇಮಲೋಕ
  • ಭಾವರಶ್ಮಿ
  • ರಾಷ್ಚ್ರ
  • ವಿಜಯಪುರ
  • ವಿದ್ಯಾರ್ಥಿ ನಿಧಿ
  • ವಿಶೇಷ ಲೇಖನ
  • ಸಾಹಿತ್ಯ
  • ಸಿನಿಮಾ
  • ಹೊತ್ತಿಗೆ ಹೊರಣ
Recent Posts
  • ಕನ್ನಡ ಅಂಕಿಗಳ ಬಳಕೆಯಿಂದ ಭಾಷೆ ಉಳಿಸಿ :ಪ.ಗು.ಸಿದ್ದಾಪುರ
    In (ರಾಜ್ಯ ) ಜಿಲ್ಲೆ
  • ಕನ್ನಡ ಕೇವಲ ಭಾಷೆಯಲ್ಲ ನಮ್ಮ ಬದುಕು-ಸಂಸ್ಕೃತಿ-ಸ್ವಾಭಿಮಾನ
    In (ರಾಜ್ಯ ) ಜಿಲ್ಲೆ
  • ಅಕ್ರಮ ಕಂಟ್ರಿ ಪಿಸ್ತೂಲ್ ವಶ :ಇಬ್ಬರ ಬಂಧನ
    In (ರಾಜ್ಯ ) ಜಿಲ್ಲೆ
  • ಹಸಿರು ವಿಜಯಪುರದಿಂದ ಜನರ ಭವಿಷ್ಯ ಉಜ್ವಲವಾಗಲಿದೆ
    In (ರಾಜ್ಯ ) ಜಿಲ್ಲೆ
  • ಚಡಚಣ ಬಂದ್‌ಗೆ ಸಂಪೂರ್ಣ ಬೆಂಬಲ; ಪಟ್ಟಣ ಸ್ತಬ್ಧ!
    In (ರಾಜ್ಯ ) ಜಿಲ್ಲೆ
  • ದಾಖಲೆ ಬರೆದ ವಿಜಯಪುರ ಪೊಲೀಸರು; ಸಂತ್ರಸ್ತರಿಗೆ ಸ್ವತ್ತು ಹಸ್ತಾಂತರ
    In (ರಾಜ್ಯ ) ಜಿಲ್ಲೆ
  • ನನಗೂ ಡಿಜಿಟಲ್ ಅರೆಸ್ಟ್ ಮಾಡಲು ಮುಂದಾಗಿದ್ದರು!
    In (ರಾಜ್ಯ ) ಜಿಲ್ಲೆ
  • ನಾಡಿನ ಜಲಹಕ್ಕುಗಳೊಂದಿಗೆ ಖಂಡಿತ ರಾಜಿ ಇಲ್ಲ
    In (ರಾಜ್ಯ ) ಜಿಲ್ಲೆ
  • ಮಹಾತ್ಮ ಗಾಂಧೀಜಿ ಚಿಂತನೆಗಳು ಇಂದಿಗೂ ಪ್ರಸ್ತುತ
    In (ರಾಜ್ಯ ) ಜಿಲ್ಲೆ
  • ರಾಮಾಯಣ ಮಾನವನ ಬದುಕಿಗೆ ದಾರಿದೀಪ :ಬಸನಗೌಡ
    In (ರಾಜ್ಯ ) ಜಿಲ್ಲೆ
Editors Picks
Top Reviews
udayarashminews.com
Facebook X (Twitter) Instagram Pinterest Vimeo YouTube
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
© 2026 udayarashminews.com. Designed by udayarashmi news .

Type above and press Enter to search. Press Esc to cancel.