ವಿಜಯಪುರ: ಕರ್ನಾಟಕ ಲೋಕಸೇವಾ ಆಯೋಗ ಅಧಿಸೂಚಿಸಿರುವ ರಾಜ್ಯ ಲೆಕ್ಕ ಪರಿಶೋಧನೆ ಮತ್ತು ಲೆಕ್ಕ ಪತ್ರ ಇಲಾಖೆಯಲ್ಲಿನ ಗ್ರೂಪ್ ಸಿ ಹುದ್ದೆಗಳಿಗೆ ಜಿಲ್ಲೆಯಲ್ಲಿ ನವೆಂಬರ್ ೪ ಮತ್ತು ೫ ರಂದು ಕನ್ನಡ ಭಾಷಾ-ಸ್ಪರ್ಧಾತ್ಮಕ ಪರೀಕ್ಷೆಗಳು ಜರುಗಲಿದ್ದು, ಸುವ್ಯವಸ್ಥಿತ ಪರೀಕ್ಷೆ ನಡೆಸುವ ದೃಷ್ಟಿಯಿಂದ ಮುಂಜಾಗ್ರತವಾಗಿ ಪರೀಕ್ಷಾ ಕೇಂದ್ರದ ೨೦೦ ಮೀ. ವ್ಯಾಪ್ತಿಯಲ್ಲಿ ಕಲಂ ೧೪೪ರನ್ವಯ ಬೆಳಿಗ್ಗೆ ೯ ರಿಂದ ಪರೀಕ್ಷೆ ಮುಕ್ತಾಯವಾಗುವರೆಗೆ ನಿಷೇಧಾಜ್ಞೆ ಜಾರಿಗೊಳಿಸಿ ಜಿಲ್ಲಾ ದಂಡಾಧಿಕಾರಿಗಳಾದ ಜಿಲ್ಲಾಧಿಕಾರಿ ಟಿ.ಭೂಬಾಲನ್ ಅವರು ಆದೇಶ ಹೊರಡಿಸಿದ್ದಾರೆ.
ಪರೀಕ್ಷಾ ಕೇಂದ್ರದ ಸಮೀಪದಲ್ಲಿರುವ ಝರಾಕ್ಸ್ ಅಂಗಡಿಗಳು, ಕಂಪ್ಯೂಟರ್ ಸೆಂಟರ್‌ಗಳು, ಇಂಟರ್‌ನೆಟ್, ಸೈಬರ್ ಕೆಫೆಗಳು, ಕೋಚಿಂಗ್ ಕೇಂದ್ರಗಳು ಪರೀಕ್ಷೆ ಅವಧಿಯಲ್ಲಿ ತೆರೆಯದಂತೆ ಆದೇಶಿಸಲಾಗಿದೆ.
Related Posts
Add A Comment