ಬಿ.ಎಲ್.ಡಿ.ಇ ಸಂಸ್ಥೆಯ ಎಸ್.ಬಿ ಕಲಾ ಮತ್ತು ಕೆ.ಸಿ.ಪಿ ವಿಜ್ಞಾನ ಮಹಾವಿದ್ಯಾಲಯದಲ್ಲಿ ಕನ್ನಡ ರಾಜ್ಯೋತ್ಸವ ಆಚರಣೆ
ಉದಯರಶ್ಮಿ ದಿನಪತ್ರಿಕೆ
ವಿಜಯಪುರ: ನಗರದ ಬಿ.ಎಲ್.ಡಿ.ಇ. ಸಂಸ್ಥೆಯ ಎಸ್.ಬಿ. ಕಲಾ ಮತ್ತು ಕೆ.ಸಿ.ಪಿ. ವಿಜ್ಞಾನ ಮಹಾವಿದ್ಯಾಲಯದಲ್ಲಿ ಆಂತರಿಕ ಗುಣಮಟ್ಟ ಭರವಸೆ ಕೋಶ (ಐಕ್ಯೂಎಸಿ) ಹಾಗೂ ಕನ್ನಡ ವಿಭಾಗದ ಸಂಯುಕ್ತಾಶ್ರಯದಲ್ಲಿ ೭೧ನೇ ಕನ್ನಡ ರಾಜ್ಯೋತ್ಸವವನ್ನು ವಿಜೃಂಭಣೆಯಿಂದ ಆಚರಿಸಲಾಯಿತು.
ಕಾಲೇಜಿನ ಪ್ರಾಚಾರ್ಯ ಡಾ.ಶ್ರೀನಿವಾಸ್ ಎ.ಟಿ ಮಾತನಾಡಿ, ಕನ್ನಡ ಎಂಬುದು ಕೇವಲ ಭಾಷೆಯಲ್ಲ, ಅದು ನಮ್ಮ ಬದುಕು, ಸಂಸ್ಕೃತಿ ಮತ್ತು ಅಸ್ಮಿತೆ. ಪ್ರತಿಯೊಬ್ಬರು ಕನ್ನಡವನ್ನು ತಾಯಿಯಂತೆ ಪ್ರೀತಿಸಬೇಕು, ಗೌರವಿಸಬೇಕು ಎಂದು ಹೇಳಿದರು.
ಡಾ.ಉಷಾದೇವಿ ಹಿರೇಮಠ ಮಾತನಾಡಿ, ಕನ್ನಡ ಭಾಷೆ ನಮ್ಮ ಶ್ರೀಮಂತ ಪರಂಪರೆಯ ಪ್ರತೀಕ. ಕರ್ನಾಟಕ ಏಕೀಕರಣಕ್ಕಾಗಿ ತ್ಯಾಗ ಮಾಡಿದ ಮಹನೀಯರನ್ನು ಸ್ಮರಿಸುವ ದಿನವೇ ರಾಜ್ಯೋತ್ಸವ. ನೆಲ, ಜಲ, ಭಾಷೆ, ಸಂಸ್ಕೃತಿಯನ್ನು ಉಳಿಸಿ ಬೆಳೆಸುವುದು ನಮ್ಮೆಲ್ಲರ ಜವಾಬ್ದಾರಿ. ಕನ್ನಡ ನಮ್ಮ ತಾಯಿ, ಉಸಿರು. ಅದನ್ನು ಆರಾಧಿಸೋಣ ಎಂದು ಕರೆ ನೀಡಿದರು.
ಈ ಸಂದರ್ಭದಲ್ಲಿ ದೈಹಿಕ ನಿರ್ದೇಶಕ ಪ್ರೊ. ಎಸ್. ಎ. ಪಾಟೀಲ, ಪಿಯುಸಿ ಪ್ರಾಚಾರ್ಯ ಪ್ರೊ. ಸಿ. ಬಿ. ಪಾಟೀಲ, ಕಛೇರಿ ಅಧೀಕ್ಷಕ ಶಶಿಧರ ಹೇರಲಗಿ, ಡಾ. ಅನಿಲ ನಾಯಕ ಸೇರಿದಂತೆ ಎಲ್ಲ ವಿಭಾಗಗಳ ಮುಖ್ಯಸ್ಥರು, ಪ್ರಾಧ್ಯಾಪಕರು, ವಿದ್ಯಾರ್ಥಿಗಳು ಉಪಸ್ಥಿತರಿದ್ದರು

