Close Menu
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ

Subscribe to Updates

Get the latest creative news from FooBar about art, design and business.

What's Hot

ಡಿ.ಎಂ.ಮಕಾಂದಾರ ಗೆ ಸಮಾಜ ಸೇವಾ ರತ್ನ ಪ್ರಶಸ್ತಿ

ಚವಡಿಹಾಳದ ಶಾಂತಪ್ಪ ದಶವಂತರಿಗೆ ಗೌರವ ಸನ್ಮಾನ

ಶಿಕ್ಷಣ-ಉದ್ಯೋಗದಲ್ಲಿ ಅನ್ಯಾಯ ತಡೆಗಟ್ಟಲು 371(ಜೆ) ಮೀಸಲಾತಿ ಒದಗಿಸಿ

Facebook X (Twitter) Instagram
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
Facebook X (Twitter) Instagram YouTube WhatsApp
udayarashminews.comudayarashminews.com
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
udayarashminews.comudayarashminews.com
Home»(ರಾಜ್ಯ ) ಜಿಲ್ಲೆ»ಕೂಲಿಕಾರ್ಮಿಕರಿಗೆ ಸೌಲಭ್ಯ ಕಲ್ಪಿಸಿ :ಸಿಇಒ ಆನಂದ ಪ್ರಕಾಶ ಮೀನಾ
(ರಾಜ್ಯ ) ಜಿಲ್ಲೆ

ಕೂಲಿಕಾರ್ಮಿಕರಿಗೆ ಸೌಲಭ್ಯ ಕಲ್ಪಿಸಿ :ಸಿಇಒ ಆನಂದ ಪ್ರಕಾಶ ಮೀನಾ

By No Comments1 Min Read
Facebook Twitter Pinterest LinkedIn Telegram WhatsApp
Share
Facebook Twitter LinkedIn Email Telegram WhatsApp

ಕಾಖಂಡಕಿ ಗ್ರಾಪಂ ವ್ಯಾಪ್ತಿಯ ಕೆರೆ ಪುನಶ್ಚೇತನ ಕಾಮಗಾರಿ ಸ್ಥಳಕ್ಕೆ ಭೇಟಿ | ಕೂಲಿಕಾರ್ಮಿಕರೊಂದಿಗೆ ಸಂವಾದ

ಉದಯರಶ್ಮಿ ದಿನಪತ್ರಿಕೆ

ವಿಜಯಪುರ: ಕೂಲಿಕಾರ್ಮಿಕರಿಗೆ ಸಮರ್ಪಕ ಮೂಲಭೂತ ಸೌಲಭ್ಯ ಕಲ್ಪಿಸುವುದರ ಜೊತೆಗೆ, ವಸತಿ ನಿಲಯದ ವಿದ್ಯಾರ್ಥಿಗಳಿಗೆ ಗುಣಮಟ್ಟದ ಶಿಕ್ಷಣ, ಪೌಷ್ಟಿಕ ಆಹಾರ ಹಾಗೂ ಉತ್ತಮ ಕಲಿಕಾ ವಾತಾವರಣ ಒದಗಿಸಲು ಆದ್ಯತೆ ನೀಡಬೇಕು ಎಂದು ಜಿಲ್ಲಾ ಪಂಚಾಯತಿಯ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಆನಂದ ಪ್ರಕಾಶ ಮೀನಾ ಅವರು ಅಧಿಕಾರಿಗಳಿಗೆ ಸೂಚಿಸಿದರು.
ಬಬಲೇಶ್ವರ ತಾಲೂಕಿಗೆ ಭೇಟಿ ನೀಡಿದ ಅವರು, ಕಾಖಂಡಕಿ ಗ್ರಾಮದಲ್ಲಿ ಪ್ರಗತಿಯಲ್ಲಿರುವ ಕೆರೆ ಪುನಶ್ಚೇತನ ಕಾಮಗಾರಿ ಹಾಗೂ ಡಾ. ಬಿ.ಆರ್.ಅಂಬೇಡ್ಕರ್ ಸರ್ಕಾರಿ ಮೆಟ್ರಿಕ್ ಪೂರ್ವ ಬಾಲಕರ ವಸತಿ ನಿಲಯಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದರು.
ಕಾಖಂಡಕಿ ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ನಡೆಯುತ್ತಿರುವ ಕೆರೆ ಪುನಶ್ಚೇತನ ಕಾಮಗಾರಿಯ ಸ್ಥಳಕ್ಕೆ ಭೇಟಿ ನೀಡಿದ ಸಿಇಒ ಅವರು, ಕಾಮಗಾರಿಯ ಪ್ರಗತಿ, ಅಂದಾಜು ವೆಚ್ಚ ಹಾಗೂ ಅನುಷ್ಠಾನದ ವಿವರಗಳನ್ನು ಅಧಿಕಾರಿಗಳಿಂದ ಪಡೆದುಕೊಂಡರು.
ಸ್ಥಳದಲ್ಲಿ ಕಾರ್ಯನಿರ್ವಹಿಸುತ್ತಿದ್ದ ಕೂಲಿಕಾರ್ಮಿಕರೊಂದಿಗೆ ಸಂವಾದ ನಡೆಸಿ, ಕೂಲಿ ಪಾವತಿ, ಕೆಲಸದ ವಾತಾವರಣ ಹಾಗೂ ಅವರಿಗೆ ಲಭ್ಯವಿರುವ ಮೂಲಭೂತ ಸೌಲಭ್ಯಗಳ ಕುರಿತು ಮಾಹಿತಿ ಪಡೆದರು.
ಕೂಲಿಕಾರ್ಮಿಕರಿಗೆ ಸಮರ್ಪಕ ಕುಡಿಯುವ ನೀರಿನ ವ್ಯವಸ್ಥೆ ಕಲ್ಪಿಸಬೇಕು. ಕೆಲಸ ನಿರ್ವಹಿಸಿದವರಿಗೆ ನಿಗದಿತ ಕೂಲಿ ಹಣ ಸಂದಾಯವಾಗಿರುವುದನ್ನು ಖಚಿತಪಡಿಸಿಕೊಳ್ಳಬೇಕು. ತಾಂತ್ರಿಕ ಕಾರಣಗಳಿಂದ ವೇತನ ಪಾವತಿಯಾಗದ ಪ್ರಕರಣಗಳನ್ನು ಗುರುತಿಸಿ, ಅವುಗಳ ಪಟ್ಟಿಯನ್ನು ಪರಿಶೀಲಿಸಿ ಅಗತ್ಯ ಕ್ರಮ ಕೈಗೊಳ್ಳಬೇಕು ಎಂದು ಸೂಚಿಸಿದರು.
ಹೆಚ್ಚಿನ ಕೂಲಿಕಾರ್ಮಿಕರಿಗೆ ಉದ್ಯೋಗಾವಕಾಶ ಕಲ್ಪಿಸುವ ಮೂಲಕ ಕಾಮಗಾರಿಯ ಪ್ರಗತಿಯನ್ನು ವೇಗಗೊಳಿಸುವಂತೆಯೂ ನಿರ್ದೇಶನ ನೀಡಿದರು.
ಬಳಿಕ ಡಾ. ಬಿ.ಆರ್. ಅಂಬೇಡ್ಕರ್ ಸರ್ಕಾರಿ ಮೆಟ್ರಿಕ್ ಪೂರ್ವ ಬಾಲಕರ ವಸತಿ ನಿಲಯಕ್ಕೆ ಭೇಟಿ ನೀಡಿ ಪರಿಶೀಲಿಸಿದರು.
ಈ ಸಂದರ್ಭದಲ್ಲಿ ಸಹಾಯಕ ನಿರ್ದೇಶಕ ವಿ.ಎಸ್. ಹಿರೇಮಠ, ತಾಂತ್ರಿಕ ಸಿಬ್ಬಂದಿ ಮಹೇಶ ಇಂಗಳೇಶ್ವರ, ಮೋನಿಕಾ ಪೋಳ, ಶಾಂತು ಇಂಡಿ, ಸೂರ್ಯಕಾಂತ ಜತ್ತಿ, ಗಣೇಶ ಕೋಲಕಾರ, ಸರೋಜಿನಿ ಬಿದರಿ, ದಸಗೀರ ಹೊರಗೀನಮನಿ, ಭಾಗ್ಯ ಬಿರಾದಾರ, ಗೀತಾ ಜೋಗುರ ಹಾಗೂ ಲಲಿತಾ ಗೌಡಪ್ಪ ಗೋಳ ಸೇರಿದಂತೆ ಸಂಬಂಧಿಸಿದ ಅಧಿಕಾರಿಗಳು ಮತ್ತು ಸಿಬ್ಬಂದಿ ಉಪಸ್ಥಿತರಿದ್ದರು.

BIJAPUR NEWS bjp congress patil public public news udaya rashmi Udayarashmi today newspaper udayarashminews.com
Share. Facebook Twitter Pinterest Email Telegram WhatsApp
  • Website

Related Posts

ಡಿ.ಎಂ.ಮಕಾಂದಾರ ಗೆ ಸಮಾಜ ಸೇವಾ ರತ್ನ ಪ್ರಶಸ್ತಿ

ಚವಡಿಹಾಳದ ಶಾಂತಪ್ಪ ದಶವಂತರಿಗೆ ಗೌರವ ಸನ್ಮಾನ

ಶಿಕ್ಷಣ-ಉದ್ಯೋಗದಲ್ಲಿ ಅನ್ಯಾಯ ತಡೆಗಟ್ಟಲು 371(ಜೆ) ಮೀಸಲಾತಿ ಒದಗಿಸಿ

ನ.೧೨ ರಂದು ಜಿಲ್ಲಾಮಟ್ಟದ ಯುವಜನೋತ್ಸವ

Add A Comment
Leave A Reply Cancel Reply

Categories
  • (ರಾಜ್ಯ ) ಜಿಲ್ಲೆ
  • Helldivers
  • Typora
  • Uncategorized
  • Wemod
  • ಆರೋಗ್ಯ
  • ಇತರೆ
  • ಕಾವ್ಯರಶ್ಮಿ
  • ಚಿಂತನ
  • ದಿನಪತ್ರಿಕೆ
  • ಪುಸ್ತಕ ಪರಿಚಯ
  • ಪ್ರೇಮಲೋಕ
  • ಭಾವರಶ್ಮಿ
  • ರಾಷ್ಚ್ರ
  • ವಿಜಯಪುರ
  • ವಿದ್ಯಾರ್ಥಿ ನಿಧಿ
  • ವಿಶೇಷ ಲೇಖನ
  • ಸಾಹಿತ್ಯ
  • ಸಿನಿಮಾ
  • ಹೊತ್ತಿಗೆ ಹೊರಣ
Recent Posts
  • ಡಿ.ಎಂ.ಮಕಾಂದಾರ ಗೆ ಸಮಾಜ ಸೇವಾ ರತ್ನ ಪ್ರಶಸ್ತಿ
    In (ರಾಜ್ಯ ) ಜಿಲ್ಲೆ
  • ಚವಡಿಹಾಳದ ಶಾಂತಪ್ಪ ದಶವಂತರಿಗೆ ಗೌರವ ಸನ್ಮಾನ
    In (ರಾಜ್ಯ ) ಜಿಲ್ಲೆ
  • ಶಿಕ್ಷಣ-ಉದ್ಯೋಗದಲ್ಲಿ ಅನ್ಯಾಯ ತಡೆಗಟ್ಟಲು 371(ಜೆ) ಮೀಸಲಾತಿ ಒದಗಿಸಿ
    In (ರಾಜ್ಯ ) ಜಿಲ್ಲೆ
  • ನ.೧೨ ರಂದು ಜಿಲ್ಲಾಮಟ್ಟದ ಯುವಜನೋತ್ಸವ
    In (ರಾಜ್ಯ ) ಜಿಲ್ಲೆ
  • ಹುಲಜಂತಿ ಶ್ರೀ ಮಾಳಿಂಗರಾಯ ಜಾತ್ರೆಗೆ ವಿಶೇಷ ಸಾರಿಗೆ ವ್ಯವಸ್ಥೆ
    In (ರಾಜ್ಯ ) ಜಿಲ್ಲೆ
  • ಕೌಶಲ್ಯ ತರಬೇತಿಗೆ ಅರ್ಜಿ ಆಹ್ವಾನ
    In (ರಾಜ್ಯ ) ಜಿಲ್ಲೆ
  • ಜ.೨೫ ರಿಂದ ಮನೆ ಮನೆಗೆ ಗಣತಿ ಕಾರ್ಯ ಆರಂಭ :ಫೆ.೨೮ರೊಳಗೆ ಪೂರ್ಣ
    In (ರಾಜ್ಯ ) ಜಿಲ್ಲೆ
  • ಧೂಳಖೇಡ ಗ್ರಾಮದಲ್ಲಿ ಗ್ರಾಮ ಒನ್ ಪ್ರ‍್ಯಾಂಚೈಸಿಗೆ ಅರ್ಜಿ ಆಹ್ವಾನ
    In (ರಾಜ್ಯ ) ಜಿಲ್ಲೆ
  • ಕೂಲಿಕಾರ್ಮಿಕರಿಗೆ ಸೌಲಭ್ಯ ಕಲ್ಪಿಸಿ :ಸಿಇಒ ಆನಂದ ಪ್ರಕಾಶ ಮೀನಾ
    In (ರಾಜ್ಯ ) ಜಿಲ್ಲೆ
  • ಕನ್ನಡ ಭಾಷೆ ಜೀವನದ ಕನ್ನಡಿಯಾಗಬೇಕು :ಪ್ರೊ.ಕುಂಟೋಜಿ
    In (ರಾಜ್ಯ ) ಜಿಲ್ಲೆ
Editors Picks
Top Reviews
udayarashminews.com
Facebook X (Twitter) Instagram Pinterest Vimeo YouTube
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
© 2026 udayarashminews.com. Designed by udayarashmi news .

Type above and press Enter to search. Press Esc to cancel.