Close Menu
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ

Subscribe to Updates

Get the latest creative news from FooBar about art, design and business.

What's Hot

ಡಿ.ಎಂ.ಮಕಾಂದಾರ ಗೆ ಸಮಾಜ ಸೇವಾ ರತ್ನ ಪ್ರಶಸ್ತಿ

ಚವಡಿಹಾಳದ ಶಾಂತಪ್ಪ ದಶವಂತರಿಗೆ ಗೌರವ ಸನ್ಮಾನ

ಶಿಕ್ಷಣ-ಉದ್ಯೋಗದಲ್ಲಿ ಅನ್ಯಾಯ ತಡೆಗಟ್ಟಲು 371(ಜೆ) ಮೀಸಲಾತಿ ಒದಗಿಸಿ

Facebook X (Twitter) Instagram
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
Facebook X (Twitter) Instagram YouTube WhatsApp
udayarashminews.comudayarashminews.com
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
udayarashminews.comudayarashminews.com
Home»(ರಾಜ್ಯ ) ಜಿಲ್ಲೆ»ಜ.೨೫ ರಿಂದ ಮನೆ ಮನೆಗೆ ಗಣತಿ ಕಾರ್ಯ ಆರಂಭ :ಫೆ.೨೮ರೊಳಗೆ ಪೂರ್ಣ
(ರಾಜ್ಯ ) ಜಿಲ್ಲೆ

ಜ.೨೫ ರಿಂದ ಮನೆ ಮನೆಗೆ ಗಣತಿ ಕಾರ್ಯ ಆರಂಭ :ಫೆ.೨೮ರೊಳಗೆ ಪೂರ್ಣ

By No Comments2 Mins Read
Facebook Twitter Pinterest LinkedIn Telegram WhatsApp
Share
Facebook Twitter LinkedIn Email Telegram WhatsApp

ಜನಗಣತಿ-೨೦೨೭ರ ಮನೆಗಳ ಪಟ್ಟಿ ಮತ್ತು ಜನಸಂಖ್ಯಾ ಗಣತಿ ನಿಖರವಾಗಿ ನಿರ್ವಹಿಸಲು ಜಿಲ್ಲಾಧಿಕಾರಿ ಡಾ. ಆನಂದ ಕೆ. ಸೂಚನೆ

ಉದಯರಶ್ಮಿ ದಿನಪತ್ರಿಕೆ

ವಿಜಯಪುರ: ಮುಂದಿನ ಹತ್ತು ವರ್ಷಗಳ ಸರ್ಕಾರದ ಯೋಜನೆಗಳು, ಬಜೆಟ್ ಹಂಚಿಕೆ, ಎಸ್‌ಸಿಪಿ ಮತ್ತು ಟಿಎಸ್‌ಪಿ ಅನುದಾನ ಹಾಗೂ ಕ್ಷೇತ್ರಗಳ ಪುನರ್ವಿಂಗಡಣೆ ಸೇರಿದಂತೆ ಹಲವು ಪ್ರಮುಖ ನಿರ್ಧಾರಗಳಿಗೆ ಜನಗಣತಿಯ ಮಾಹಿತಿ ಆಧಾರವಾಗಲಿದೆ. ಆದ್ದರಿಂದ ಭಾರತದ ಜನಗಣತಿ-೨೦೨೭ರ ಮನೆಗಳ ಪಟ್ಟಿ ಮತ್ತು ಜನಸಂಖ್ಯಾ ಗಣತಿ ಕಾರ್ಯವನ್ನು ಯಾವುದೇ ತಪ್ಪುಗಳಿಲ್ಲದಂತೆ ನಿಖರವಾಗಿ ನಿರ್ವಹಿಸಬೇಕು ಎಂದು ಜಿಲ್ಲಾಧಿಕಾರಿ ಡಾ. ಆನಂದ ಕೆ. ಸೂಚಿಸಿದರು.
ನಗರದ ಜಿಲ್ಲಾ ಪಂಚಾಯಿತಿ ಸಭಾಂಗಣದಲ್ಲಿ ಮಂಗಳವಾರ ಭಾರತದ ಜನಗಣತಿ-೨೦೨೭ರ ಎರಡನೇ ಹಂತದ ಜನಸಂಖ್ಯಾ ಗಣತಿಗೆ ಸಂಬಂಧಿಸಿದಂತೆ ಜಿಲ್ಲೆಯ ನಗರ ಹಾಗೂ ಗ್ರಾಮೀಣ ಪ್ರದೇಶಗಳ ಚಾರ್ಜ್ ಅಧಿಕಾರಿಗಳು, ಸಹಾಯಕ ಚಾರ್ಜ್ ಅಧಿಕಾರಿಗಳು, ವಿಷಯ ನಿರ್ವಾಹಕರು ಮತ್ತು ತಾಂತ್ರಿಕ ನಿರ್ವಾಹಕರಿಗೆ ಹಮ್ಮಿಕೊಂಡಿದ್ದ ತರಬೇತಿ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು. ಜನಗಣತಿಯು ಹತ್ತು ವರ್ಷಗಳಿಗೊಮ್ಮೆ ನಡೆಯುವ ಪ್ರಮುಖ ಕಾರ್ಯವಾಗಿದೆ. ಇದರಲ್ಲಿ ಸಂಗ್ರಹಿಸುವ ಮಾಹಿತಿಯ ಆಧಾರದ ಮೇಲೆ ಮುಂದಿನ ಹತ್ತು ವರ್ಷಗಳ ಅಭಿವೃದ್ಧಿ, ಆರ್ಥಿಕ ಮತ್ತು ಸಾಮಾಜಿಕ ಯೋಜನೆಗಳನ್ನು ರೂಪಿಸಲಾಗುತ್ತದೆ. ಹೀಗಾಗಿ ಪ್ರತಿಯೊಂದು ಮನೆ, ಕುಟುಂಬ ಹಾಗೂ ವ್ಯಕ್ತಿಯ ಮಾಹಿತಿಯನ್ನು ಸರಿಯಾಗಿ ದಾಖಲಿಸಬೇಕು. ಯಾವುದೇ ಮನೆ ಅಥವಾ ವ್ಯಕ್ತಿ ಗಣತಿಯಿಂದ ಹೊರಗುಳಿಯದಂತೆ ಅಧಿಕಾರಿಗಳು ಗಮನಹರಿಸಬೇಕು ಎಂದರು.
ಜನಗಣತಿ ಕಾರ್ಯ ಸುಗಮವಾಗಿ ನಡೆಯಲು ಮೊದಲು ಮುಖ್ಯ ತರಬೇತಿದಾರರಿಗೆ, ನಂತರ ತಾಲೂಕು ಮಟ್ಟದ ತರಬೇತಿದಾರರಿಗೆ ಹಾಗೂ ಅಂತಿಮವಾಗಿ ಗಣತಿದಾರರು ಮತ್ತು ಮೇಲ್ವಿಚಾರಕರಿಗೆ ಹಂತ ಹಂತವಾಗಿ ತರಬೇತಿ ನೀಡಲಾಗುತ್ತದೆ. ಗಣತಿದಾರರು ಒಟ್ಟು ೪೦ ಪ್ರಶ್ನೆಗಳಿಗೆ ಸಂಬಂಧಿಸಿದ ಮಾಹಿತಿಯನ್ನು ಹೇಗೆ ಸಂಗ್ರಹಿಸಬೇಕು ಹಾಗೂ ಗಣತಿದಾರರ ಕೈಪಿಡಿಯಲ್ಲಿರುವ ಸೂಚನೆಗಳನ್ನು ಹೇಗೆ ಪಾಲಿಸಬೇಕು ಎಂಬುದರ ಕುರಿತು ತರಬೇತಿ ನೀಡಲಾಗುತ್ತಿದೆ. ತರಬೇತಿಯಲ್ಲಿ ತಿಳಿಸುವ ಎಲ್ಲ ಅಂಶಗಳನ್ನು ಸರಿಯಾಗಿ ಅರ್ಥಮಾಡಿಕೊಂಡು ಜವಾಬ್ದಾರಿಯಿಂದ ಕೆಲಸ ನಿರ್ವಹಿಸಬೇಕು ಎಂದು ತಿಳಿಸಿದರು.
ನಿಗದಿತ ಅವಧಿಯಲ್ಲಿ ಗಣತಿ ಪೂರ್ಣಗೊಳಿಸಿ: ಹಿಂದಿನ ಜನಗಣತಿ ಸಂದರ್ಭದಲ್ಲಿ ಮನೆಗಳ ಸಂಖ್ಯೆ ಗುರುತಿಸುವುದು, ನಂಬರ್ ಹಾಕುವುದು ಹಾಗೂ ಗುರುತು ಮಾಡುವ ಕಾರ್ಯಕ್ಕೆ ಆರಂಭದ ಕೆಲವು ದಿನಗಳು ವ್ಯಯವಾಗಿದ್ದವು. ಇದರಿಂದ ಗಣತಿ ಕಾರ್ಯದ ಪ್ರಗತಿಗೆ ತೊಂದರೆಯಾಗಿತ್ತು. ಈ ಬಾರಿ ಅಂತಹ ಸಮಸ್ಯೆ ಆಗದಂತೆ ಮುಂಚಿತವಾಗಿ ಸಿದ್ಧತೆ ಮಾಡಿಕೊಳ್ಳಬೇಕು ಎಂದು ಸೂಚಿಸಿದರು. ಜನವರಿ ೧೦ರಿಂದ ೨೪ರವರೆಗೆ ಸ್ವಯಂ ಗಣತಿಗೆ ಅವಕಾಶವಿರುತ್ತದೆ. ಜನವರಿ ೨೧ರಿಂದಲೇ ಗಣತಿದಾರರು ಮತ್ತು ಮೇಲ್ವಿಚಾರಕರು ತಮ್ಮ ವ್ಯಾಪ್ತಿಯ ಮನೆಗಳಿಗೆ ಭೇಟಿ ನೀಡಿ ಮನೆಗಳ ಸಂಖ್ಯೆ, ಗಡಿ ಹಾಗೂ ತಮ್ಮ ಕಾರ್ಯವ್ಯಾಪ್ತಿಯನ್ನು ಖಚಿತಪಡಿಸಿಕೊಳ್ಳಬೇಕು. ಗಣತಿದಾರರಿಗೆ ನೇಮಕಾತಿ ಆದೇಶ ಮತ್ತು ಗುರುತಿನ ಚೀಟಿ ನೀಡಬೇಕು. ಅವರಿಗೆ ನಿಗದಿಪಡಿಸಿದ ನಕ್ಷೆಯಲ್ಲಿರುವ ಎಲ್ಲ ಮನೆಗಳಿಗೆ ಮುಂಚಿತವಾಗಿ ಭೇಟಿ ನೀಡಿ ಮನೆಗಳನ್ನು ಗುರುತಿಸಿ, ಸಂಖ್ಯೆ ಹಾಕುವ ಕಾರ್ಯ ಪೂರ್ಣಗೊಳಿಸಬೇಕು. ಜನವರಿ ೨೫ರಿಂದ ಫೆಬ್ರವರಿ ೨೮ರವರೆಗೆ ಮನೆಗಳ ಪಟ್ಟಿ ಮತ್ತು ಜನಗಣತಿ ಕಾರ್ಯವನ್ನು ಪೂರ್ಣಗೊಳಿಸಬೇಕು. ಜನವರಿ ೨೫ರಿಂದಲೇ ಮಾಹಿತಿ ದಾಖಲಿಸುವ ಕಾರ್ಯ ಆರಂಭವಾಗುವಂತೆ ಅಗತ್ಯ ಸಿದ್ಧತೆ ಮಾಡಿಕೊಳ್ಳಬೇಕು ಎಂದು ತಿಳಿಸಿದರು.
ಕಾರ್ಯಕ್ರಮದಲ್ಲಿ ಅಪರ ಜಿಲ್ಲಾಧಿಕಾರಿ ಡಾ. ಔದ್ರಾಮ, ವಿಜಯಪುರ ಉಪವಿಭಾಗಾಧಿಕಾರಿ ಜುಫಿಶಾನ್ ಹಕ್, ಮಹಾನಗರ ಪಾಲಿಕೆ ಆಯುಕ್ತ ವಿಜಯ ಮೆಕ್ಕಳಕಿ ಸೇರಿದಂತೆ ವಿವಿಧ ಅಧಿಕಾರಿಗಳು ಉಪಸ್ಥಿತರಿದ್ದರು. ತರಬೇತಿದಾರ ವಿನೇಶ ಅವರು ಜನಗಣತಿ ಕಾರ್ಯದ ವಿಧಾನ, ಮಾಹಿತಿ ಸಂಗ್ರಹ, ಮೊಬೈಲ್ ಆ್ಯಪ್ ಬಳಕೆ ಹಾಗೂ ಗಣತಿದಾರರು ಮತ್ತು ಮೇಲ್ವಿಚಾರಕರ ಜವಾಬ್ದಾರಿಗಳ ಕುರಿತು ತರಬೇತಿ ನೀಡಿದರು.

BIJAPUR NEWS bjp congress public public news udaya rashmi Udayarashmi today newspaper udayarashminews.com
Share. Facebook Twitter Pinterest Email Telegram WhatsApp
  • Website

Related Posts

ಡಿ.ಎಂ.ಮಕಾಂದಾರ ಗೆ ಸಮಾಜ ಸೇವಾ ರತ್ನ ಪ್ರಶಸ್ತಿ

ಚವಡಿಹಾಳದ ಶಾಂತಪ್ಪ ದಶವಂತರಿಗೆ ಗೌರವ ಸನ್ಮಾನ

ಶಿಕ್ಷಣ-ಉದ್ಯೋಗದಲ್ಲಿ ಅನ್ಯಾಯ ತಡೆಗಟ್ಟಲು 371(ಜೆ) ಮೀಸಲಾತಿ ಒದಗಿಸಿ

ನ.೧೨ ರಂದು ಜಿಲ್ಲಾಮಟ್ಟದ ಯುವಜನೋತ್ಸವ

Add A Comment
Leave A Reply Cancel Reply

Categories
  • (ರಾಜ್ಯ ) ಜಿಲ್ಲೆ
  • Helldivers
  • Typora
  • Uncategorized
  • Wemod
  • ಆರೋಗ್ಯ
  • ಇತರೆ
  • ಕಾವ್ಯರಶ್ಮಿ
  • ಚಿಂತನ
  • ದಿನಪತ್ರಿಕೆ
  • ಪುಸ್ತಕ ಪರಿಚಯ
  • ಪ್ರೇಮಲೋಕ
  • ಭಾವರಶ್ಮಿ
  • ರಾಷ್ಚ್ರ
  • ವಿಜಯಪುರ
  • ವಿದ್ಯಾರ್ಥಿ ನಿಧಿ
  • ವಿಶೇಷ ಲೇಖನ
  • ಸಾಹಿತ್ಯ
  • ಸಿನಿಮಾ
  • ಹೊತ್ತಿಗೆ ಹೊರಣ
Recent Posts
  • ಡಿ.ಎಂ.ಮಕಾಂದಾರ ಗೆ ಸಮಾಜ ಸೇವಾ ರತ್ನ ಪ್ರಶಸ್ತಿ
    In (ರಾಜ್ಯ ) ಜಿಲ್ಲೆ
  • ಚವಡಿಹಾಳದ ಶಾಂತಪ್ಪ ದಶವಂತರಿಗೆ ಗೌರವ ಸನ್ಮಾನ
    In (ರಾಜ್ಯ ) ಜಿಲ್ಲೆ
  • ಶಿಕ್ಷಣ-ಉದ್ಯೋಗದಲ್ಲಿ ಅನ್ಯಾಯ ತಡೆಗಟ್ಟಲು 371(ಜೆ) ಮೀಸಲಾತಿ ಒದಗಿಸಿ
    In (ರಾಜ್ಯ ) ಜಿಲ್ಲೆ
  • ನ.೧೨ ರಂದು ಜಿಲ್ಲಾಮಟ್ಟದ ಯುವಜನೋತ್ಸವ
    In (ರಾಜ್ಯ ) ಜಿಲ್ಲೆ
  • ಹುಲಜಂತಿ ಶ್ರೀ ಮಾಳಿಂಗರಾಯ ಜಾತ್ರೆಗೆ ವಿಶೇಷ ಸಾರಿಗೆ ವ್ಯವಸ್ಥೆ
    In (ರಾಜ್ಯ ) ಜಿಲ್ಲೆ
  • ಕೌಶಲ್ಯ ತರಬೇತಿಗೆ ಅರ್ಜಿ ಆಹ್ವಾನ
    In (ರಾಜ್ಯ ) ಜಿಲ್ಲೆ
  • ಜ.೨೫ ರಿಂದ ಮನೆ ಮನೆಗೆ ಗಣತಿ ಕಾರ್ಯ ಆರಂಭ :ಫೆ.೨೮ರೊಳಗೆ ಪೂರ್ಣ
    In (ರಾಜ್ಯ ) ಜಿಲ್ಲೆ
  • ಧೂಳಖೇಡ ಗ್ರಾಮದಲ್ಲಿ ಗ್ರಾಮ ಒನ್ ಪ್ರ‍್ಯಾಂಚೈಸಿಗೆ ಅರ್ಜಿ ಆಹ್ವಾನ
    In (ರಾಜ್ಯ ) ಜಿಲ್ಲೆ
  • ಕೂಲಿಕಾರ್ಮಿಕರಿಗೆ ಸೌಲಭ್ಯ ಕಲ್ಪಿಸಿ :ಸಿಇಒ ಆನಂದ ಪ್ರಕಾಶ ಮೀನಾ
    In (ರಾಜ್ಯ ) ಜಿಲ್ಲೆ
  • ಕನ್ನಡ ಭಾಷೆ ಜೀವನದ ಕನ್ನಡಿಯಾಗಬೇಕು :ಪ್ರೊ.ಕುಂಟೋಜಿ
    In (ರಾಜ್ಯ ) ಜಿಲ್ಲೆ
Editors Picks
Top Reviews
udayarashminews.com
Facebook X (Twitter) Instagram Pinterest Vimeo YouTube
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
© 2026 udayarashminews.com. Designed by udayarashmi news .

Type above and press Enter to search. Press Esc to cancel.