ಉದಯರಶ್ಮಿ ದಿನಪತ್ರಿಕೆ
ವಿಜಯಪುರ: ೨೦೨೬-೨೭ನೇ ಸಾಲಿಗೆ ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯ ವತಿಯಿಂದ ಅಲ್ಪಸಂಖ್ಯಾತ ಸಮುದಾಯದ ವಿದ್ಯಾರ್ಥಿಗಳಿಗೆ ಕೌಶಲ್ಯಾಭಿವೃದ್ಧಿ ತರಬೇತಿ ನೀಡಲು ಅರ್ಜಿ ಆಹ್ವಾನಿಸಲಾಗಿದೆ. ಮುಸ್ಲಿಂ, ಕ್ರಿಶ್ಚಿಯನ್, ಜೈನ್, ಸಿಖ್, ಬೌದ್ಧ ಹಾಗೂ ಪಾರ್ಸಿ ಸಮುದಾಯದ ವಿದ್ಯಾರ್ಥಿಗಳಿಗೆ ವಿಶ್ವೇಶ್ವರಯ್ಯ ತಾಂತ್ರಿಕ ವಿಶ್ವವಿದ್ಯಾಲಯದ ಮೂಲಕ ತರಬೇತಿ ನೀಡಲಾಗುತ್ತಿದ್ದು,ಅರ್ಹ ಅಭ್ಯರ್ಥಿಗಳು ಆನ್ಲೈನ್ ಮೂಲಕ ಅರ್ಜಿ ಸಲ್ಲಿಸಬಹುದಾಗಿದೆ. ನ.೧೦ರೊಳಗಾಗಿ ಅರ್ಜಿ ಸಲ್ಲಿಸಲು ಕೊನೆಯ ದಿನವಾಗಿದೆ. ಅಭ್ಯರ್ಥಿಗಳು hಣಣಠಿs://miಟಿoಡಿiಣಥಿ-sಞiಟಟ-ಜಿoಡಿm.veಡಿಛಿeಟ.ಚಿಠಿಠಿ/ ವೆಬ್ಸೈಟ್ ಮೂಲಕ ಅರ್ಜಿ ಸಲ್ಲಿಸಬಹುದಾಗಿದೆ.
ಹೆಚ್ಚಿನ ಮಾಹಿತಿಗಾಗಿ ನಗರದ ಜಿಲ್ಲಾ ಅಲ್ಪಸಂಖ್ಯಾತರ ಕಚೇರಿ ೦೮೩೫೨-೨೯೫೫೨೩ ಅಥವಾ ವಿಜಯಪುರ ತಾಲೂಕು ಅಲ್ಪಸಂಖ್ಯಾತರ ಮಾಹಿತಿ ಕೇಂದ್ರ ೮೧೨೩೭೧೦೭೬೬, ಬಸವನಬಾಗೇವಾಡಿ ೯೯೭೨೩೪೦೭೨೧, ಮುದ್ದೇಬಿಹಾಳ ೮೭೨೨೪೪೫೫೫೨, ಇಂಡಿ ೯೯೦೦೧೦೯೭೫೯ ಹಾಗೂ ಸಿಂದಗಿ ೯೦೩೫೫೫೮೬೦೯ ತಾಲೂಕು ಅಲ್ಪಸಂಖ್ಯಾತರ ಮಾಹಿತಿ ಕೇಂದ್ರಗಳನ್ನು ಸಂಪರ್ಕಿಸಬಹುದು. ಎಂದು ಅಲ್ಪಸಂಖ್ಯಾತರ ಕಲ್ಯಾಣ ಜಿಲ್ಲಾ ಅಧಿಕಾರಿಗಳ ಪ್ರಕಟಣೆ ತಿಳಿಸಿದೆ.
