Close Menu
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ

Subscribe to Updates

Get the latest creative news from FooBar about art, design and business.

What's Hot

ಡಿ.ಎಂ.ಮಕಾಂದಾರ ಗೆ ಸಮಾಜ ಸೇವಾ ರತ್ನ ಪ್ರಶಸ್ತಿ

ಚವಡಿಹಾಳದ ಶಾಂತಪ್ಪ ದಶವಂತರಿಗೆ ಗೌರವ ಸನ್ಮಾನ

ಶಿಕ್ಷಣ-ಉದ್ಯೋಗದಲ್ಲಿ ಅನ್ಯಾಯ ತಡೆಗಟ್ಟಲು 371(ಜೆ) ಮೀಸಲಾತಿ ಒದಗಿಸಿ

Facebook X (Twitter) Instagram
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
Facebook X (Twitter) Instagram YouTube WhatsApp
udayarashminews.comudayarashminews.com
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
udayarashminews.comudayarashminews.com
Home»(ರಾಜ್ಯ ) ಜಿಲ್ಲೆ»ಚವಡಿಹಾಳದ ಶಾಂತಪ್ಪ ದಶವಂತರಿಗೆ ಗೌರವ ಸನ್ಮಾನ
(ರಾಜ್ಯ ) ಜಿಲ್ಲೆ

ಚವಡಿಹಾಳದ ಶಾಂತಪ್ಪ ದಶವಂತರಿಗೆ ಗೌರವ ಸನ್ಮಾನ

By No Comments1 Min Read
Facebook Twitter Pinterest LinkedIn Telegram WhatsApp
Share
Facebook Twitter LinkedIn Email Telegram WhatsApp

ಸಾವಿರಾರು ಬಡ ವಿದ್ಯಾರ್ಥಿಗಳ ಬದುಕಿಗೆ ಅಕ್ಷರದ ಬೆಳಕು ನೀಡಿದ ಜ್ಞಾನದಾಸೋಹಿ | ಶೈಕ್ಷಣಿಕ ಸೇವೆಗೆ ರಾಜ್ಯೋತ್ಸವ ಪ್ರಶಸ್ತಿ

ಉದಯರಶ್ಮಿ ದಿನಪತ್ರಿಕೆ

ಚಡಚಣ: ಶೈಕ್ಷಣಿಕವಾಗಿ ಹಿಂದುಳಿದಿರುವ ಇಂಡಿ ತಾಲೂಕಿನ ಚವಡಿಹಾಳ ಗ್ರಾಮದ ಶಿಕ್ಷಣ ಕ್ಷೇತ್ರದಲ್ಲಿ ತಮ್ಮದೇ ಆದ ಛಾಪು ಮೂಡಿಸಿ, ಸಾವಿರಾರು ಬಡ ವಿದ್ಯಾರ್ಥಿಗಳಿಗೆ ಅಕ್ಷರದ ಬೆಳಕು ನೀಡುತ್ತಿರುವ ಜ್ಞಾನದಾಸೋಹಿ ಶಾಂತಪ್ಪ ಪಂಚಪ್ಪ ದಶವಂತರಿಗೆ 2026ನೇ ಸಾಲಿನ ಕರ್ನಾಟಕ ರಾಜ್ಯೋತ್ಸವ ಪ್ರಶಸ್ತಿ ಲಭಿಸಿರುವುದು ಈ ಭಾಗದ ಜನತೆಗೆ ಹೆಮ್ಮೆಯ ಸಂಗತಿಯಾಗಿದೆ. ಶೈಕ್ಷಣಿಕವಾಗಿ ಹಿಂದುಳಿದ ಪ್ರದೇಶಕ್ಕೆ ದೊರೆತ ಗೌರವದ ಕಳಶವಾಗಿದೆ ಎಂದು ಬ್ಲಾಕ್ ಕಾಂಗ್ರೆಸ್ ಯುವ ಘಟಕದ ಅಧ್ಯಕ್ಷ ಸತೀಶಗೌಡ ಹತ್ತಿ ಹೇಳಿದರು.
ಪ್ರಶಸ್ತಿ ಪುರಸ್ಕೃತ ಶಾಂತಪ್ಪ ದಶವಂತರನ್ನು ಸನ್ಮಾನಿಸಿ ಮಾತನಾಡಿದ ಅವರು, ಗ್ರಾಮೀಣ ಭಾಗದ ಬಡ ವಿದ್ಯಾರ್ಥಿಗಳ ಶೈಕ್ಷಣಿಕ ಪ್ರಗತಿಗಾಗಿ ಶ್ರಮಿಸುತ್ತಿರುವ ಅವರ ಸೇವೆ ಇಂದಿನ ಯುವಜನತೆಗೆ ಮಾದರಿಯಾಗಿದೆ. ಸಂಸ್ಥೆಯಲ್ಲಿ ಕಲಿಯುತ್ತಿರುವ ಪ್ರತಿಯೊಬ್ಬ ವಿದ್ಯಾರ್ಥಿಯೂ ಶಾಂತಪ್ಪ ದಶವಂತರ ಸಾಧನೆ ಮತ್ತು ಸೇವಾ ಮನೋಭಾವವನ್ನು ಆದರ್ಶವಾಗಿಟ್ಟುಕೊಂಡು, ಉತ್ತಮ ಶಿಕ್ಷಣ ಪಡೆದು ಭವಿಷ್ಯದಲ್ಲಿ ಇಂತಹ ಗೌರವಗಳಿಗೆ ಭಾಜನರಾಗಬೇಕು ಎಂದು ಕರೆ ನೀಡಿದರು.
ಎನ್‌ಎಸ್‌ಯುಐ ತಾಲೂಕು ಘಟಕದ ಅಧ್ಯಕ್ಷ ಸುನೀಲ ಅತನೂರ ಮಾತನಾಡಿ, ಈ ಭಾಗದ ಅನೇಕ ಯುವಜನರಿಗೆ ಶಾಂತಪ್ಪ ದಶವಂತರು ಪ್ರೇರಣೆಯಾಗಿದ್ದಾರೆ. ಎಲ್ಲರನ್ನೂ ಕುಟುಂಬದ ಸದಸ್ಯರಂತೆ ಕಾಣುವ ಅವರ ಗುಣ ವಿಶೇಷವಾಗಿದೆ. ವಿದ್ಯಾರ್ಥಿಗಳು ಮತ್ತು ಪಾಲಕರನ್ನು ಅನ್ನದಾತರಂತೆ ಗೌರವಿಸುವ ಅವರ ವಿಶಾಲ ಮನೋಭಾವವೇ ಅವರನ್ನು ಈ ಎತ್ತರಕ್ಕೆ ಬೆಳೆಸಿದೆ. ಶಿಕ್ಷಣ ಕ್ಷೇತ್ರಕ್ಕೆ ಅವರು ಸಲ್ಲಿಸಿರುವ ಸೇವೆ ಸದಾ ಸ್ಮರಣೀಯ ಎಂದು ಅಭಿಪ್ರಾಯಪಟ್ಟರು.
ಸನ್ಮಾನ ಕಾರ್ಯಕ್ರಮದಲ್ಲಿ ಯುವ ಮುಖಂಡ ವಿನೋದ ಶಹಾಪುರ, ಎನ್‌ಎಸ್‌ಯುಐ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಗಂಗಾಧರ ಗುಳೇದ, ಜಟ್ಟೆಪ್ಪ ಹುಲ್ಲೂರ, ಸಂತೋಷ ರವಳಿ, ಸಚಿನ ಹೊಸಮನಿ, ಅಕ್ಬರ ಖಾನೆ, ಈಶ್ವರ ಸಜ್ಜನ, ಆನಂದ ಆಲಮೇಲೆ, ಸಂಸ್ಥೆಯ ಕಾರ್ಯದರ್ಶಿ ಶಿವಾನಂದ ದಶವಂತ, ಸಿಬ್ಬಂದಿ ವರ್ಗ ಹಾಗೂ ವಿದ್ಯಾರ್ಥಿಗಳು ಉಪಸ್ಥಿತರಿದ್ದರು.

BIJAPUR NEWS bjp congress patil public public news udaya rashmi Udayarashmi today newspaper udayarashminews.com
Share. Facebook Twitter Pinterest Email Telegram WhatsApp
  • Website

Related Posts

ಡಿ.ಎಂ.ಮಕಾಂದಾರ ಗೆ ಸಮಾಜ ಸೇವಾ ರತ್ನ ಪ್ರಶಸ್ತಿ

ಶಿಕ್ಷಣ-ಉದ್ಯೋಗದಲ್ಲಿ ಅನ್ಯಾಯ ತಡೆಗಟ್ಟಲು 371(ಜೆ) ಮೀಸಲಾತಿ ಒದಗಿಸಿ

ನ.೧೨ ರಂದು ಜಿಲ್ಲಾಮಟ್ಟದ ಯುವಜನೋತ್ಸವ

ಹುಲಜಂತಿ ಶ್ರೀ ಮಾಳಿಂಗರಾಯ ಜಾತ್ರೆಗೆ ವಿಶೇಷ ಸಾರಿಗೆ ವ್ಯವಸ್ಥೆ

Add A Comment
Leave A Reply Cancel Reply

Categories
  • (ರಾಜ್ಯ ) ಜಿಲ್ಲೆ
  • Helldivers
  • Typora
  • Uncategorized
  • Wemod
  • ಆರೋಗ್ಯ
  • ಇತರೆ
  • ಕಾವ್ಯರಶ್ಮಿ
  • ಚಿಂತನ
  • ದಿನಪತ್ರಿಕೆ
  • ಪುಸ್ತಕ ಪರಿಚಯ
  • ಪ್ರೇಮಲೋಕ
  • ಭಾವರಶ್ಮಿ
  • ರಾಷ್ಚ್ರ
  • ವಿಜಯಪುರ
  • ವಿದ್ಯಾರ್ಥಿ ನಿಧಿ
  • ವಿಶೇಷ ಲೇಖನ
  • ಸಾಹಿತ್ಯ
  • ಸಿನಿಮಾ
  • ಹೊತ್ತಿಗೆ ಹೊರಣ
Recent Posts
  • ಡಿ.ಎಂ.ಮಕಾಂದಾರ ಗೆ ಸಮಾಜ ಸೇವಾ ರತ್ನ ಪ್ರಶಸ್ತಿ
    In (ರಾಜ್ಯ ) ಜಿಲ್ಲೆ
  • ಚವಡಿಹಾಳದ ಶಾಂತಪ್ಪ ದಶವಂತರಿಗೆ ಗೌರವ ಸನ್ಮಾನ
    In (ರಾಜ್ಯ ) ಜಿಲ್ಲೆ
  • ಶಿಕ್ಷಣ-ಉದ್ಯೋಗದಲ್ಲಿ ಅನ್ಯಾಯ ತಡೆಗಟ್ಟಲು 371(ಜೆ) ಮೀಸಲಾತಿ ಒದಗಿಸಿ
    In (ರಾಜ್ಯ ) ಜಿಲ್ಲೆ
  • ನ.೧೨ ರಂದು ಜಿಲ್ಲಾಮಟ್ಟದ ಯುವಜನೋತ್ಸವ
    In (ರಾಜ್ಯ ) ಜಿಲ್ಲೆ
  • ಹುಲಜಂತಿ ಶ್ರೀ ಮಾಳಿಂಗರಾಯ ಜಾತ್ರೆಗೆ ವಿಶೇಷ ಸಾರಿಗೆ ವ್ಯವಸ್ಥೆ
    In (ರಾಜ್ಯ ) ಜಿಲ್ಲೆ
  • ಕೌಶಲ್ಯ ತರಬೇತಿಗೆ ಅರ್ಜಿ ಆಹ್ವಾನ
    In (ರಾಜ್ಯ ) ಜಿಲ್ಲೆ
  • ಜ.೨೫ ರಿಂದ ಮನೆ ಮನೆಗೆ ಗಣತಿ ಕಾರ್ಯ ಆರಂಭ :ಫೆ.೨೮ರೊಳಗೆ ಪೂರ್ಣ
    In (ರಾಜ್ಯ ) ಜಿಲ್ಲೆ
  • ಧೂಳಖೇಡ ಗ್ರಾಮದಲ್ಲಿ ಗ್ರಾಮ ಒನ್ ಪ್ರ‍್ಯಾಂಚೈಸಿಗೆ ಅರ್ಜಿ ಆಹ್ವಾನ
    In (ರಾಜ್ಯ ) ಜಿಲ್ಲೆ
  • ಕೂಲಿಕಾರ್ಮಿಕರಿಗೆ ಸೌಲಭ್ಯ ಕಲ್ಪಿಸಿ :ಸಿಇಒ ಆನಂದ ಪ್ರಕಾಶ ಮೀನಾ
    In (ರಾಜ್ಯ ) ಜಿಲ್ಲೆ
  • ಕನ್ನಡ ಭಾಷೆ ಜೀವನದ ಕನ್ನಡಿಯಾಗಬೇಕು :ಪ್ರೊ.ಕುಂಟೋಜಿ
    In (ರಾಜ್ಯ ) ಜಿಲ್ಲೆ
Editors Picks
Top Reviews
udayarashminews.com
Facebook X (Twitter) Instagram Pinterest Vimeo YouTube
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
© 2026 udayarashminews.com. Designed by udayarashmi news .

Type above and press Enter to search. Press Esc to cancel.