Close Menu
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ

Subscribe to Updates

Get the latest creative news from FooBar about art, design and business.

What's Hot

ಉದಯರಶ್ಮಿ ಇಂದಿನ ದಿನಪತ್ರಿಕೆ ನವೆಂಬರ್ 08,2026

ವಿಜಯಪುರದಲ್ಲಿ ಮತ್ತೆ ಗುಂಡಿನ ಮೊರೆತ!

ಎಂಸಿಎ ಪ್ರವೇಶಕ್ಕೆ ಅರ್ಜಿ ಆಹ್ವಾನ

Facebook X (Twitter) Instagram
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
Facebook X (Twitter) Instagram YouTube WhatsApp
udayarashminews.comudayarashminews.com
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
udayarashminews.comudayarashminews.com
Home»(ರಾಜ್ಯ ) ಜಿಲ್ಲೆ»ಜನರ ಪಾಲಿಗೆ ವರದಾನವಾದ ಬಿ.ಎಲ್.ಡಿ.ಇ ಆಸ್ಪತ್ರೆ
(ರಾಜ್ಯ ) ಜಿಲ್ಲೆ

ಜನರ ಪಾಲಿಗೆ ವರದಾನವಾದ ಬಿ.ಎಲ್.ಡಿ.ಇ ಆಸ್ಪತ್ರೆ

By No Comments2 Mins Read
Facebook Twitter Pinterest LinkedIn Telegram WhatsApp
Share
Facebook Twitter LinkedIn Email Telegram WhatsApp

ಬಿ.ಎಲ್.ಡಿ.ಇ ಡೀಮ್ಡ್ ವಿಶ್ವವಿದ್ಯಾಲಯ ಕುಲಪತಿ ಡಾ. ಅರುಣ ಇನಾಮದಾರ ಹೇಳಿಕೆ

ಉದಯರಶ್ಮಿ ದಿನಪತ್ರಿಕೆ

ವಿಜಯಪುರ: ಸಜ್ಜನ ರಾಜಕಾರಣಿ ಮತ್ತು ಶಿಕ್ಷಣ ಪ್ರೇಮಿ ದಿ. ಬಿ. ಎಂ. ಪಾಟೀಲ ಅವರು 40 ವರ್ಷಗಳ ಹಿಂದೆ ಪ್ರಾರಂಭಿಸಿರುವ ಬಿ.ಎಲ್.ಡಿ.ಇ ಆಸ್ಪತ್ರೆ ವಿಜಯಪುರ ಮತ್ತು ಸುತ್ತಮುತ್ತಲಿನ ಜಿಲ್ಲೆಯ ಜನರ ಪಾಲಿಗೆ ವರದಾನವಾಗಿದೆ ಎಂದು ಬಿ. ಎಲ್.ಡಿ.ಇ ಡೀಮ್ಡ್ ವಿಶ್ವವಿದ್ಯಾಲಯ ಕುಲಪತಿ ಡಾ. ಅರುಣ ಚಂ. ಇನಾಮದಾರ ಹೇಳಿದ್ದಾರೆ.
ಬುಧವಾರ ನಗರದ ರಜಪೂತಗಲ್ಲಿಯಲ್ಲಿರುವ ಶ್ರೀ ಬಸವೇಶ್ವರ ಕನ್ನಡ ಪ್ರಾಥಮಿಕ ಮತ್ತು ಪ್ರೌಢಶಾಲೆಯಲ್ಲಿ ಮಾಜಿ ಸಚಿವ ದಿ. ಶ್ರೀ ಬಿ ಎಂ ಪಾಟೀಲ ಮತ್ತು ವಿಧಾನ ಪರಿಷತ ಶಾಸಕ ಹಾಗೂ ಬಿ.ಎಲ್.ಡಿ.ಇ ಸಂಸ್ಥೆಯ ಪ್ರಧಾನ ಕಾರ್ಯದರ್ಶಿ ಸುನೀಲಗೌಡ ಪಾಟೀಲ ಅವರ ಜನ್ಮದಿನದ ಅಂಗವಾಗಿ ಶ್ರೀ ಬಿ. ಎಂ. ಪಾಟೀಲ ವೈದ್ಯಕೀಯ ಆಸ್ಪತ್ರೆ ಮತ್ತು ಸಂಶೋಧನ ಕೇಂದ್ರ ಹಾಗೂ ಆರೋಗ್ಯ ಫಾರ್ಮಸಿ ವತಿಯಿಂದ ಆಯೋಜಿಸಲಾದ ಉಚಿತ ಆರೋಗ್ಯ ತಪಾಸಣೆ ಹಾಗೂ ಚಿಕಿತ್ಸೆ ಶಿಬಿರದಲ್ಲಿ ಪಾಲ್ಗೋಂಡು ಅವರು ಮಾತನಾಡಿದರು.
ರಾಜ್ಯ ಕಂಡ ಅತೀ ಸಜ್ಜನ ರಾಜಕಾರಣಿ ಮತ್ತು ಶಿಕ್ಷಣ ಪ್ರೇಮಿ ದಿ. ಬಿ ಎಂ ಪಾಟೀಲರು 40 ವರ್ಷಗಳ ಹಿಂದೆ ಪ್ರಾರಂಭಿಸಿದ ಬಿ.ಎಲ್.ಡಿ.ಇ ಆಸ್ಪತ್ರೆ ಇಂದು ಎಲ್ಲರಿಗೂ ಆರೋಗ್ಯ ಸೇವೆ ಒದಗಿಸುತ್ತಿದೆ. ಉಚಿತ ಆರೋಗ್ಯ ತಪಾಸಣೆ ಶಿಬಿರಗಳ ಮೂಲಕ ನಗರವಷ್ಟೇ ಅಲ್ಲ ಗ್ರಾಮೀಣ ಭಾಗದ ಜನರ ಪಾಲಿಗೂ ವರದಾನವಾಗಿದೆ. ಸಂಸ್ಥೆಯ ಪ್ರಧಾನ ಕಾರ್ಯದರ್ಶಿ ಮತ್ತು ವಿಧಾನ ಪರಿಷತ ಶಾಸಕ ಸುನೀಲಗೌಡ ಪಾಟೀಲ ಅವರು ಜನರ ಅಹವಾಲುಗಳಿಗೆ ಸ್ಪಂದಿಸುವ ಮೂಲಕ ಸಮಾಜ ಜನಪರ ಸೇವೆ ಮಾಡುತ್ತಿದ್ದಾರೆ. ಇಬ್ಬರೂ ಗಣ್ಯರ ಜನ್ಮದಿನದ ಅಂಗವಾಗಿ ಆಯೋಜಿಸಲಾಗಿರುವ ಇಂಥ ಆರೋಗ್ಯ ಶಿಬಿರಗಳನ್ನು ಶಿಬಿರಾರ್ಥಿಗಳು ಸದುಪಯೋಗ ಪಡೆದುಕೊಳ್ಳಬೇಕು ಎಂದು ಅವರು ಹೇಳಿದರು.
ದಿ. ಬಿ. ಎಂ. ಪಾಟೀಲ ಅವರ ಪುತ್ರಿ ಕಲ್ಪನಾ ಮಹೇಶಗೌಡ ಪಾಟೀಲ ಆರೋಗ್ಯ ಶಿಬಿರಕ್ಕೆ ಚಾಲನೆ ನೀಡಿದರು. ಬಿ.ಎಲ್.ಡಿ.ಇ ಆಸ್ಪತ್ರೆಯ ವೈದ್ಯಕೀಯ ಅಧೀಕ್ಷಕ ಡಾ. ಎಸ್. ಎನ್. ಬೆಂಟೂರ ಆಸ್ಪತ್ರೆಯಲ್ಲಿ ಸಿಗುವ ಉಚಿತ ಸೌಲಭ್ಯಗಳ ಕುರಿತು ಮಾಹಿತಿ ನೀಡಿದರು.
ಈ ಸಂದರ್ಭದಲ್ಲಿ ಬಿ.ಎಲ್.ಡಿ.ಇ ಡೀಮ್ಡ್ ವಿಶ್ವವಿದ್ಯಾಲಯದ ಸಮಕುಲಾಧಿಪತಿ ಡಾ. ವೈ. ಎಂ. ಜಯರಾಜ, ರಜಿಸ್ಟ್ರಾರ್ ಡಾ. ಆರ್. ವಿ. ಕುಲಕರ್ಣಿ, ಪ್ರಿನ್ಸಿಪಾಲ ಡಾ. ತೇಜಶ್ವಿನಿ ವಲ್ಲಭ, ಆಡಳಿತಾಧಿಕಾರಿ ವಿಲಾಸ ಬಗಲಿ, ಸಂಸ್ಥೆಯ ಕಾನೂನು ಸಹಸಲಹೆಗಾರ ಸೂರ್ಯಕಾಂತ ಬಿರಾದಾರ ಮುಂತಾದವರು ಉಪಸ್ಥಿತರಿದ್ದರು.
ಈ ಶಿಬಿರದಲ್ಲಿ ಒಟ್ಟು 220 ರೋಗಿಗಳು ಆರೋಗ್ಯ ತಪಾಸಣೆ ಮಾಡಿಸಿಕೊಂಡರು.

BIJAPUR NEWS bjp congress patil public public news udaya rashmi Udayarashmi today newspaper udayarashminews.com
Share. Facebook Twitter Pinterest Email Telegram WhatsApp
  • Website

Related Posts

ಉದಯರಶ್ಮಿ ಇಂದಿನ ದಿನಪತ್ರಿಕೆ ನವೆಂಬರ್ 08,2026

ವಿಜಯಪುರದಲ್ಲಿ ಮತ್ತೆ ಗುಂಡಿನ ಮೊರೆತ!

ಎಂಸಿಎ ಪ್ರವೇಶಕ್ಕೆ ಅರ್ಜಿ ಆಹ್ವಾನ

ಮಠಾಧೀಶರ ಒಕ್ಕೂಟದ ಚಿಂತನ ಮಂಥನ ಸಭೆ

Add A Comment
Leave A Reply Cancel Reply

Categories
  • (ರಾಜ್ಯ ) ಜಿಲ್ಲೆ
  • Helldivers
  • Typora
  • Uncategorized
  • Wemod
  • ಆರೋಗ್ಯ
  • ಇತರೆ
  • ಕಾವ್ಯರಶ್ಮಿ
  • ಚಿಂತನ
  • ದಿನಪತ್ರಿಕೆ
  • ಪುಸ್ತಕ ಪರಿಚಯ
  • ಪ್ರೇಮಲೋಕ
  • ಭಾವರಶ್ಮಿ
  • ರಾಷ್ಚ್ರ
  • ವಿಜಯಪುರ
  • ವಿದ್ಯಾರ್ಥಿ ನಿಧಿ
  • ವಿಶೇಷ ಲೇಖನ
  • ಸಾಹಿತ್ಯ
  • ಸಿನಿಮಾ
  • ಹೊತ್ತಿಗೆ ಹೊರಣ
Recent Posts
  • ಉದಯರಶ್ಮಿ ಇಂದಿನ ದಿನಪತ್ರಿಕೆ ನವೆಂಬರ್ 08,2026
    In ದಿನಪತ್ರಿಕೆ
  • ವಿಜಯಪುರದಲ್ಲಿ ಮತ್ತೆ ಗುಂಡಿನ ಮೊರೆತ!
    In (ರಾಜ್ಯ ) ಜಿಲ್ಲೆ
  • ಎಂಸಿಎ ಪ್ರವೇಶಕ್ಕೆ ಅರ್ಜಿ ಆಹ್ವಾನ
    In (ರಾಜ್ಯ ) ಜಿಲ್ಲೆ
  • ಮಠಾಧೀಶರ ಒಕ್ಕೂಟದ ಚಿಂತನ ಮಂಥನ ಸಭೆ
    In (ರಾಜ್ಯ ) ಜಿಲ್ಲೆ
  • ಪ್ರತಿಭಾ ಕಾರಂಜಿ: ಜಾಲಗೇರಿ ಶಾಲೆಯ ವಿದ್ಯಾರ್ಥಿಗಳ ಸಾಧನೆ
    In (ರಾಜ್ಯ ) ಜಿಲ್ಲೆ
  • ನ.೧೭ ಹಾಗೂ ೧೮ರಂದು ಕಲಾ ಪ್ರತಿಭೋತ್ಸವ ಅರ್ಜಿ ಸಲ್ಲಿಸುವ ಅವಧಿ ವಿಸ್ತರಣೆ
    In (ರಾಜ್ಯ ) ಜಿಲ್ಲೆ
  • ಬಸವನ ಬಾಗೇವಾಡಿ, ನಿಡಗುಂದಿ, ಕೊಲ್ಹಾರ ತಾಲ್ಲೂಕಿನ ಸ್ಥಿರಾಸ್ತಿಗಳ ಪರಿಷ್ಕೃತ ದರಪಟ್ಟಿ ಪ್ರಕಟನ.೨೮ರವರೆಗೆ ಆಕ್ಷೇಪಣೆ ಸಲ್ಲಿಕೆಗೆ ಅವಕಾಶ
    In (ರಾಜ್ಯ ) ಜಿಲ್ಲೆ
  • ರೋಹಿತ್ ಲಮಾಣಿ ಕಿತ್ತೂರು ರಾಣಿ ಚೆನ್ನಮ್ಮ ವಿವಿ ಬ್ಲೂ
    In (ರಾಜ್ಯ ) ಜಿಲ್ಲೆ
  • 371(ಜೆ) ಮೀಸಲಾತಿ ನೀಡಲು ಸರಕಾರ ಮುಂದಾಗಬೇಕು
    In (ರಾಜ್ಯ ) ಜಿಲ್ಲೆ
  • ಶಾಸಕ ಬಸನಗೌಡ ರ 6 ತಿಂಗಳ ವೇತನ ಸಿಎಂ ಪರಿಹಾರ ನಿಧಿಗೆ
    In (ರಾಜ್ಯ ) ಜಿಲ್ಲೆ
Editors Picks
Top Reviews
udayarashminews.com
Facebook X (Twitter) Instagram Pinterest Vimeo YouTube
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
© 2026 udayarashminews.com. Designed by udayarashmi news .

Type above and press Enter to search. Press Esc to cancel.