ಉದಯರಶ್ಮಿ ದಿನಪತ್ರಿಕೆ
ವಿಜಯಪುರ: ದೀಪಾವಳಿ ಹಬ್ಬದ ಹಿನ್ನೆಲೆಯಲ್ಲಿ ಬೆಂಗಳೂರಿನಿಂದ ವಿಜಯಪುರಕ್ಕೆ ಆಗಮಿಸುವ ಪ್ರಯಾಣಿಕರ ಅನುಕೂಲಕ್ಕಾಗಿ ಕಲ್ಯಾಣ ಕರ್ನಾಟಕ ರಸ್ತೆ ಸಾರಿಗೆ ನಿಗಮದ ವಿಜಯಪುರ ವಿಭಾಗದಿಂದ ನವೆಂಬರ್ ೫ರಿಂದ ೭ರವರೆಗೆ ಹೆಚ್ಚುವರಿ ವಿಶೇಷ ಬಸ್ಗಳನ್ನು ಕಾರ್ಯಾ
ಚರಣೆಗೊಳಿಸಲಾಗುತ್ತಿದೆ.
ಬೆಂಗಳೂರಿನಿಂದ ವಿಜಯಪುರ ಜಿಲ್ಲಾ ಕೇಂದ್ರ ಸೇರಿದಂತೆ ಜಿಲ್ಲೆಯ ತಾಲೂಕು ಕೇಂದ್ರಗಳಿಗೆ ನವೆಂಬರ್ ೫ರಂದು ೨೯, ನವೆಂಬರ್ ೬ರಂದು ೫೮ ಹಾಗೂ ನವೆಂಬರ್ ೭ರಂದು ೩೧ ಹೆಚ್ಚುವರಿ ಬಸ್ಗಳು ಕಾರ್ಯಾಚರಣೆ ಮಾಡಲಿವೆ. ಈಗಾಗಲೇ ಮುಂಗಡ ಟಿಕೆಟ್ ಕಾಯ್ದಿರಿಸುವ ವ್ಯವಸ್ಥೆ ಕಲ್ಪಿಸಲಾಗಿದ್ದು, ಪ್ರಯಾಣಿಕರು ಇದರ ಸದುಪಯೋಗ ಪಡೆದುಕೊಳ್ಳಬಹುದಾಗಿದೆ.
ಅದೇ ರೀತಿ ಬೆಂಗಳೂರಿಗೆ ಮರಳುವ ಪ್ರಯಾಣಿಕರ ಅನುಕೂಲಕ್ಕಾಗಿ ನವೆಂಬರ್ ೧೧ ಮತ್ತು ೧೨ರಂದು ಪ್ರಯಾಣಿಕರ ಬೇಡಿಕೆಗೆ ಅನುಗುಣವಾಗಿ ಹೆಚ್ಚುವರಿ ಬಸ್ಗಳನ್ನು ಕಾರ್ಯಾಚರಣೆ ಮಾಡಲಾಗುವುದು.
ಪ್ರಯಾಣಿಕರು ಈ ವಿಶೇಷ ಸಾರಿಗೆ ವ್ಯವಸ್ಥೆಯ ಸದುಪಯೋಗ ಪಡೆದುಕೊಳ್ಳುವಂತೆ ವಿಭಾಗೀಯ ನಿಯಂತ್ರಣಾಧಿಕಾರಿಗಳು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
