ಉದಯರಶ್ಮಿ ದಿನಪತ್ರಿಕೆ
ವಿಜಯಪುರ: ೨೦೨೬-೨೭ನೇ ಸಾಲಿನ ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯ ವತಿಯಿಂದ ಬಿ.ಎಡ್. ಕೋರ್ಸಿನಲ್ಲಿ ವ್ಯಾಸಂಗ ಮಾಡುತ್ತಿರುವ ಅಲ್ಪಸಂಖ್ಯಾತರ ಸಮುದಾಯದ ವಿದ್ಯಾರ್ಥಿಗಳಿಗೆ ವಿಶೇಷ ಪ್ರೋತ್ಸಾಹಧನಕ್ಕಾಗಿ ಅರ್ಜಿ ಆಹ್ವಾನಿಸಲಾಗಿದೆ.
ನ್ಯಾಷನಲ್ ಕೌನ್ಸಿಲ್ ಫಾರ್ ಟೀಚರ್ ಎಜುಕೇಶನ್ ನಿಂದ ಮಾನ್ಯತೆ ಪಡೆದಿರುವ ಸರ್ಕಾರಿ, ಅರೆ ಸರ್ಕಾರಿ ಹಾಗೂ ಖಾಸಗಿ ಬಿ.ಎಡ್. ಕಾಲೇಜುಗಳಲ್ಲಿ ೨೦೨೬-೨೭ನೇ ಸಾಲಿಗೆ ಪ್ರವೇಶ ಪಡೆದು ವ್ಯಾಸಂಗ ಮಾಡುತ್ತಿರುವ ಮುಸ್ಲಿಂ, ಕ್ರಿಶ್ಚಿಯನ್, ಜೈನ್, ಸಿಖ್, ಬೌದ್ಧ ಹಾಗೂ ಪಾರ್ಸಿ ಸಮುದಾಯದ ವಿದ್ಯಾರ್ಥಿಗಳು ಅರ್ಜಿ ಸಲ್ಲಿಸಬಹುದು.
ಅರ್ಜಿ ಸಲ್ಲಿಸಲು ನವೆಂಬರ್ ೪ರಿಂದ ಆರಂಭವಾಗಿ ನ.೩೦ರ ಸಂಜೆ ೫.೩೦ರವರೆಗೆ ಅವಕಾಶ ಕಲ್ಪಿಸಲಾಗಿದೆ. ಜಿಲ್ಲಾ ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯ ಕಚೇರಿಯಲ್ಲಿ ಅರ್ಜಿ ನಮೂನೆ ಪಡೆದು, ಅಗತ್ಯ ಮಾಹಿತಿಗಳನ್ನು ಭರ್ತಿ ಮಾಡಿ, ಸಂಬಂಧಿಸಿದ ದಾಖಲೆಗಳನ್ನು ಲಗತ್ತಿಸಿ ಸಲ್ಲಿಸಬೇಕು.
ಹೆಚ್ಚಿನ ಮಾಹಿತಿಗಾಗಿ ಜಿಲ್ಲಾ ಮತ್ತು ತಾಲೂಕು ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆ ಕಚೇರಿ ಅಥವಾ ದೂರವಾಣಿ ಸಂಖ್ಯೆಗೆ ೦೮೩೫೨-೨೯೫೫೨೩, ತಾಲೂಕು ಅಲ್ಪಸಂಖ್ಯಾತರ ಮಾಹಿತಿ ಕೇಂದ್ರಗಳಾದ, ವಿಜಯಪುರ ೮೧೨೩೭೧೦೭೬೬, ಬಸವನಬಾಗೇವಾಡಿ: ೯೯೭೨೩೪೦೭೨೧, ಮುದ್ದೇಬಿಹಾಳ:೮೭೨೨೪೪೫೫೫೨, ಇಂಡಿ: ೯೯೦೦೧೦೯೭೫೯ ಹಾಗೂ ಸಿಂದಗಿ:೯೦೩೫೫೫೮೬೦೯ ಸಂಪರ್ಕಿಸಬಹುದು ಎಂದು ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯ ಜಿಲ್ಲಾ ಅಧಿಕಾರಿಗಳ ಪ್ರಕಟಣೆ ತಿಳಿಸಿದೆ.
