ಉದಯರಶ್ಮಿ ದಿನಪತ್ರಿಕೆ
ವಿಜಯಪುರ: ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯ ವತಿಯಿಂದ ೨೦೨೬-೨೭ನೇ ಸಾಲಿನ ಮೌಲಾನಾ ಅಬುಲ್ ಕಲಾಂ ಆಜಾದ್ ಪ್ರತಿಭಾ ಪುರಸ್ಕಾರಕ್ಕೆ ಅರ್ಹ ವಿದ್ಯಾರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ.
೨೦೨೫-೨೬ನೇ ಸಾಲಿನ ಎಸ್ಎಸ್ಎಲ್ಸಿ ಮತ್ತು ಪಿಯುಸಿ ವಾರ್ಷಿಕ ಪರೀಕ್ಷೆಗಳಲ್ಲಿ ಮೊದಲ ಪ್ರಯತ್ನದಲ್ಲಿಯೇ ಶೇ.೯೦ಕ್ಕಿಂತ ಹೆಚ್ಚು ಅಂಕ ಪಡೆದ ಮುಸ್ಲಿಂ, ಕ್ರಿಶ್ಚಿಯನ್, ಜೈನ, ಸಿಖ್, ಪಾರ್ಸಿ ಹಾಗೂ ಬೌದ್ಧ ಸಮುದಾಯದ ವಿದ್ಯಾರ್ಥಿಗಳು ಅರ್ಜಿ ಸಲ್ಲಿಸಬಹುದು. ಆಸಕ್ತರು ನ.೩೦ರೊಳಗಾಗಿ ಆನ್ಲೈನ್ನಲ್ಲಿ ಅರ್ಜಿ ಸಲ್ಲಿಸಬಹುದಾಗಿದೆ.
ಹೆಚ್ಚಿನ ಮಾಹಿತಿಗಾಗಿ ಜಿಲ್ಲಾ ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆ, ವಿಜಯಪುರ ದೂ.ಸಂಖ್ಯೆ ೦೮೩೫೨-೨೯೫೫೨೩, ಜಿಲ್ಲಾ ಮಾಹಿತಿ ಕೇಂದ್ರ, ವಿಜಯಪುರ ದೂ.ಸಂಖ್ಯೆ ೮೧೨೩೭೧೦೭೬೬, ತಾಲ್ಲೂಕು ಮಾಹಿತಿ ಕೇಂದ್ರಗಳಾದ ಮುದ್ದೇಬಿಹಾಳ ದೂ. ಸಂಖ್ಯೆ ೮೭೨೨೪೪೫೫೫೨ ಬಸವನ ಬಾಗೇವಾಡಿ ದೂರವಾಣಿ ಸಂಖ್ಯೆ,೯೯೭೨೩೪೦೭೨೧, ಸಿಂದಗಿ ೯೦೩೫೫೫೮೬೦೯ ಹಾಗೂ ಇಂಡಿ ೯೯೦೦೧೦೯೭೫೯ ಸಂಪರ್ಕಿಸಬಹುದು ಎಂದು ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯ ಪ್ರಕಟಣೆ ತಿಳಿಸಿದೆ.
