ಉದಯರಶ್ಮಿ ದಿನಪತ್ರಿಕೆ
ವಿಜಯಪುರ: ಕರ್ನಾಟಕ ಅಲ್ಪಸಂಖ್ಯಾತರ ಅಭಿವೃದ್ಧಿ ನಿಗಮದ ವತಿಯಿಂದ ೨೦೨೬-೨೭ನೇ ಸಾಲಿನ ಅರಿವು ರಿನ್ಯೂವಲ್ ಸಾಲ ಯೋಜನೆಯಡಿ ಅರ್ಜಿ ಸಲ್ಲಿಸುವ ಅವಧಿಯನ್ನು ನವೆಂಬರ್ ೧೫ರವರೆಗೆ ವಿಸ್ತರಿಸಲಾಗಿದೆ.
ಕೆಇಎ ನಡೆಸುವ ಸಿಇಟಿ, ನೀಟ್, ಡಿ-ಸಿಇಟಿ ಹಾಗೂ ಪಿಜಿ-ಸಿಇಟಿ ಮೂಲಕ ಪದವಿ ಮತ್ತು ಸ್ನಾತಕೋತ್ತರ ಕೋರ್ಸ್ಗಳಿಗೆ ಆಯ್ಕೆಯಾದ ಅಲ್ಪಸಂಖ್ಯಾತ ವಿದ್ಯಾರ್ಥಿಗಳು ಆನ್ಲೈನ್ ಮೂಲಕ ಅರ್ಜಿ ಸಲ್ಲಿಸಬಹುದು.
ಹೆಚ್ಚಿನ ಮಾಹಿತಿಗಾಗಿ ವಿಜಯಪುರ ಜಿಲ್ಲಾ ಕಚೇರಿಯ ದೂರವಾಣಿ ಸಂಖ್ಯೆ ೦೮೩೫೨-೨೭೮೩೪೪, ೮೨೭೭೯೪೪೨೦೯ ಅನ್ನು ಸಂಪರ್ಕಿಸಬಹುದು ಎಂದು ಕರ್ನಾಟಕ ಅಲ್ಪಸಂಖ್ಯಾತರ ಅಭಿವೃದ್ಧಿ ಜಿಲ್ಲಾ ವ್ಯವಸ್ಥಾಪಕರ ಪ್ರಕಟಣೆ ತಿಳಿಸಿದೆ.
