Close Menu
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ

Subscribe to Updates

Get the latest creative news from FooBar about art, design and business.

What's Hot

ರಸ್ತೆಗೆ ಚಾಚಿದ ಮುಳ್ಳು ಕಂಟಿಗಳಿಂದ ಸಂಚಾರಕ್ಕೆ ಸಂಚಕಾರ

ನ.೬ರಂದು ಬಿ.ಎಲ್.ಡಿ.ಇ ಸಂಸ್ಥೆ ಸಂಸ್ಥಾಪನಾ ದಿನ ಕಾರ್ಯಕ್ರಮ

ಕುಡಿವ ನೀರು ಪೂರೈಸದ ಅಧಿಕಾರಿಗೆ ತಾಪಂ ಇಒ ತರಾಟೆ!

Facebook X (Twitter) Instagram
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
Facebook X (Twitter) Instagram YouTube WhatsApp
udayarashminews.comudayarashminews.com
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
udayarashminews.comudayarashminews.com
Home»(ರಾಜ್ಯ ) ಜಿಲ್ಲೆ»ಮಕ್ಕಳ ಪ್ರತಿಭೆ ಅನಾವರಣಕ್ಕೆ ಪ್ರತಿಭಾ ಕಾರಂಜಿ ಸೂಕ್ತ ವೇದಿಕೆ
(ರಾಜ್ಯ ) ಜಿಲ್ಲೆ

ಮಕ್ಕಳ ಪ್ರತಿಭೆ ಅನಾವರಣಕ್ಕೆ ಪ್ರತಿಭಾ ಕಾರಂಜಿ ಸೂಕ್ತ ವೇದಿಕೆ

By No Comments1 Min Read
Facebook Twitter Pinterest LinkedIn Telegram WhatsApp
Share
Facebook Twitter LinkedIn Email Telegram WhatsApp

ಉದಯರಶ್ಮಿ ದಿನಪತ್ರಿಕೆ

ತಿಕೋಟಾ: ಮಕ್ಕಳಲ್ಲಿರುವ ಸುಪ್ತ ಪ್ರತಿಭೆಗಳನ್ನು ಗುರುತಿಸಿ, ಅವುಗಳನ್ನು ಅನಾವರಣಗೊಳಿಸಲು ಪ್ರತಿಭಾ ಕಾರಂಜಿ ಸೂಕ್ತ ವೇದಿಕೆಯಾಗಿದೆ ಎಂದು ಎಂ.ಬಿ. ಪಾಟೀಲ ಫೌಂಡೇಶನ್ ಕಾರ್ಯದರ್ಶಿ ಯಾಕುಬ ಜತ್ತಿ ಹೇಳಿದರು.
ತಾಲ್ಲೂಕಿನ ಘೋಣಸಗಿ ಗ್ರಾಮದ ಶ್ರೀ ಸತ್ಯಸಾಯಿಬಾಬಾ ಪ್ರೌಢಶಾಲೆಯಲ್ಲಿ ಬುಧವಾರ ನಡೆದ ಪ್ರತಿಭಾ ಕಾರಂಜಿ ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದರು.
ಮಕ್ಕಳನ್ನು ಮಾನಸಿಕವಾಗಿ ಸಿದ್ಧಗೊಳಿಸುವುದರ ಜೊತೆಗೆ ಅವರಲ್ಲಿರುವ ಪ್ರತಿಭೆಗೆ ಸೂಕ್ತ ಪ್ರೋತ್ಸಾಹ ಹಾಗೂ ಸಹಕಾರ ನೀಡುವ ವೇದಿಕೆ ಇದಾಗಿದೆ. ಮಕ್ಕಳ ಪ್ರತಿಭೆಯನ್ನು ಗುರುತಿಸಿ, ಅವರಿಗೆ ಉತ್ತಮ ಮಾರ್ಗದರ್ಶನ ನೀಡುತ್ತಿರುವ ಶಿಕ್ಷಕರ ಕಾರ್ಯ ಶ್ಲಾಘನೀಯ ಎಂದರು.
ಆರ್.ಎಚ್. ಭಜಂತ್ರಿ ಮಾತನಾಡಿ, ಪ್ರತಿಭಾ ಕಾರಂಜಿ ಕಾರ್ಯಕ್ರಮವು ಮಕ್ಕಳ ವ್ಯಕ್ತಿತ್ವ ವಿಕಸನ, ಬೌದ್ಧಿಕ ಬೆಳವಣಿಗೆ ಹಾಗೂ ಸರ್ವತೋಮುಖ ಪ್ರಗತಿಗೆ ಸಹಕಾರಿಯಾಗಿದೆ. ಮಕ್ಕಳಲ್ಲಿ ಸ್ಪರ್ಧಾತ್ಮಕ ಮನೋಭಾವ ಬೆಳೆಸಲು ಇಂತಹ ಕಾರ್ಯಕ್ರಮಗಳು ಸಹಕಾರಿ. ಪ್ರತಿಯೊಬ್ಬರೂ ತಮ್ಮ ನಡೆ-ನುಡಿ ಹಾಗೂ ಕರ್ತವ್ಯವನ್ನು ಗಮನದಲ್ಲಿಟ್ಟುಕೊಂಡು ಮುನ್ನಡೆಯಬೇಕು. ಮಗು, ಶಿಕ್ಷಕ ಮತ್ತು ಪೋಷಕರು ಒಟ್ಟಾಗಿ ಶ್ರಮಿಸಿದಾಗ ಮಾತ್ರ ಮಗುವಿನ ಸರ್ವತೋಮುಖ ಬೆಳವಣಿಗೆ ಸಾಧ್ಯ ಎಂದರು.
ಸಂಸ್ಥೆಯ ಮುಖ್ಯಗುರು ಎಂ.ಎಚ್. ಜಾಧವ ಮಾತನಾಡಿ, ಮಕ್ಕಳಲ್ಲಿರುವ ಪ್ರತಿಭೆಗಳನ್ನು ಅನಾವರಣಗೊಳಿಸಲು ಪ್ರತಿಭಾ ಕಾರಂಜಿ ಸೂಕ್ತ ವೇದಿಕೆಯಾಗಿದೆ. ಮಕ್ಕಳ ಪ್ರತಿಭೆ ಹೆಮ್ಮರವಾಗಿ ಬೆಳೆದು ಅವರ ಮುಂದಿನ ಜೀವನ ಉಜ್ವಲವಾಗಲಿ ಎಂದು ಆಶಿಸಿದರು.
ಸಿಆರ್ಪಿ ಕೆ.ಎಂ.ಗಳತಗಿ ಪ್ರಾಸ್ಥಾವಿಕವಾಗಿ ಮಾತನಾಡಿದರು.
ಕಾರ್ಯಕ್ರಮದಲ್ಲಿ ನೌಕರರ ಸಂಘದ ನಿರ್ದೇಶಕ ಎಸ್.ಎನ್. ಬಾಗಲಕೋಟ, ಎಸ್.ಎನ್. ಗಗನಮಾಲಿ, ಪೈಗಂಬರ್ ಜತ್ತಿ, ಸಂಜೀವ ರಾಠೋಡ, ಸಿದ್ದಪ್ಪ ಮುಚ್ಚಂಡಿ, ಅಮೋಘ ಮಾಳಿ, ಎಸ್.ಬಿ.ಮಾಳಿ, ಜಿ.ಬಿರಾದಾರ ಉಪಸ್ಥಿತರಿದ್ದರು.
ಎ.ಎಚ್. ಗಚ್ಚಿನಮಹಲ ಸ್ವಾಗತಿಸಿದರು. ಎನ್.ಎಲ್. ನಾಯಕ ನಿರೂಪಿಸಿದರು. ಆರ್.ಎಸ್. ಗಿರಿಗೌಡರ ವಂದಿಸಿದರು.

BIJAPUR NEWS bjp congress patil public public news udaya rashmi Udayarashmi today newspaper udayarashminews.com
Share. Facebook Twitter Pinterest Email Telegram WhatsApp
  • Website

Related Posts

ರಸ್ತೆಗೆ ಚಾಚಿದ ಮುಳ್ಳು ಕಂಟಿಗಳಿಂದ ಸಂಚಾರಕ್ಕೆ ಸಂಚಕಾರ

ನ.೬ರಂದು ಬಿ.ಎಲ್.ಡಿ.ಇ ಸಂಸ್ಥೆ ಸಂಸ್ಥಾಪನಾ ದಿನ ಕಾರ್ಯಕ್ರಮ

ಕುಡಿವ ನೀರು ಪೂರೈಸದ ಅಧಿಕಾರಿಗೆ ತಾಪಂ ಇಒ ತರಾಟೆ!

ಅರಿವು ರಿನ್ಯೂವಲ್ ಸಾಲ ಯೋಜನೆ ಅರ್ಜಿ ಸಲ್ಲಿಸುವ ಅವಧಿ ವಿಸ್ತರಣೆ

Add A Comment
Leave A Reply Cancel Reply

Categories
  • (ರಾಜ್ಯ ) ಜಿಲ್ಲೆ
  • Helldivers
  • Typora
  • Uncategorized
  • Wemod
  • ಆರೋಗ್ಯ
  • ಇತರೆ
  • ಕಾವ್ಯರಶ್ಮಿ
  • ಚಿಂತನ
  • ದಿನಪತ್ರಿಕೆ
  • ಪುಸ್ತಕ ಪರಿಚಯ
  • ಪ್ರೇಮಲೋಕ
  • ಭಾವರಶ್ಮಿ
  • ರಾಷ್ಚ್ರ
  • ವಿಜಯಪುರ
  • ವಿದ್ಯಾರ್ಥಿ ನಿಧಿ
  • ವಿಶೇಷ ಲೇಖನ
  • ಸಾಹಿತ್ಯ
  • ಸಿನಿಮಾ
  • ಹೊತ್ತಿಗೆ ಹೊರಣ
Recent Posts
  • ರಸ್ತೆಗೆ ಚಾಚಿದ ಮುಳ್ಳು ಕಂಟಿಗಳಿಂದ ಸಂಚಾರಕ್ಕೆ ಸಂಚಕಾರ
    In (ರಾಜ್ಯ ) ಜಿಲ್ಲೆ
  • ನ.೬ರಂದು ಬಿ.ಎಲ್.ಡಿ.ಇ ಸಂಸ್ಥೆ ಸಂಸ್ಥಾಪನಾ ದಿನ ಕಾರ್ಯಕ್ರಮ
    In (ರಾಜ್ಯ ) ಜಿಲ್ಲೆ
  • ಕುಡಿವ ನೀರು ಪೂರೈಸದ ಅಧಿಕಾರಿಗೆ ತಾಪಂ ಇಒ ತರಾಟೆ!
    In (ರಾಜ್ಯ ) ಜಿಲ್ಲೆ
  • ಮಕ್ಕಳ ಪ್ರತಿಭೆ ಅನಾವರಣಕ್ಕೆ ಪ್ರತಿಭಾ ಕಾರಂಜಿ ಸೂಕ್ತ ವೇದಿಕೆ
    In (ರಾಜ್ಯ ) ಜಿಲ್ಲೆ
  • ಅರಿವು ರಿನ್ಯೂವಲ್ ಸಾಲ ಯೋಜನೆ ಅರ್ಜಿ ಸಲ್ಲಿಸುವ ಅವಧಿ ವಿಸ್ತರಣೆ
    In (ರಾಜ್ಯ ) ಜಿಲ್ಲೆ
  • ಮೆಗಾ ಮಾರ್ಕೆಟ್ & ಕುಡಿವ ನೀರಿನ ಯೋಜನೆ ಕಾಲಮಿತಿಯಲ್ಲಿ ಪೂರ್ಣಗೊಳಿಸಿ
    In (ರಾಜ್ಯ ) ಜಿಲ್ಲೆ
  • ಪ್ರತಿಭಾ ಪುರಸ್ಕಾರ: ಅರ್ಜಿ ಆಹ್ವಾನ
    In (ರಾಜ್ಯ ) ಜಿಲ್ಲೆ
  • ನ.೬ರಂದು ವಿದ್ಯುತ್ ಪೂರೈಕೆಯಲ್ಲಿ ವ್ಯತ್ಯಯ
    In (ರಾಜ್ಯ ) ಜಿಲ್ಲೆ
  • ಅಲ್ಪಸಂಖ್ಯಾತ ಬಿ.ಎಡ್ ವಿದ್ಯಾರ್ಥಿಗಳಿಗೆ ವಿಶೇಷ ಪ್ರೋತ್ಸಾಹಧನಕ್ಕಾಗಿ ಅರ್ಜಿ ಆಹ್ವಾನ
    In (ರಾಜ್ಯ ) ಜಿಲ್ಲೆ
  • ದೀಪಾವಳಿ: ಬೆಂಗಳೂರಿನಿಂದ ಹೆಚ್ಚುವರಿ ಸಾರಿಗೆ ಕಾರ್ಯಾಚರಣೆ
    In (ರಾಜ್ಯ ) ಜಿಲ್ಲೆ
Editors Picks
Top Reviews
udayarashminews.com
Facebook X (Twitter) Instagram Pinterest Vimeo YouTube
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
© 2026 udayarashminews.com. Designed by udayarashmi news .

Type above and press Enter to search. Press Esc to cancel.