ಉದಯರಶ್ಮಿ ದಿನಪತ್ರಿಕೆ
ವಿಜಯಪುರ: ನಗರದ ಬಿ.ಎಲ್.ಡಿ.ಇ ಸಂಸ್ಥೆಯ ಸಂಸ್ಥಾಪನಾ ದಿನ ಕಾರ್ಯಕ್ರಮ ನವೆಂಬರ್ 6 ರಂದು ಶುಕ್ರವಾರ ಶ್ರೀ ಬಿ. ಎಂ. ಪಾಟೀಲ ವೈದ್ಯಕೀಯ ಮಹಾವಿದ್ಯಾಲಯದ ಗ್ರಂಥಾಲಯ ಸಭಾಂಗಣದಲ್ಲಿ ನಡೆಯಲಿದೆ.
ಅಂದು ಬೆಳಿಗ್ಗೆ 11 ಗಂಟೆಗೆ ನಡೆಯಲಿರುವ ಕಾರ್ಯಕ್ರಮದಲ್ಲಿ ಆಲಮೇಲ ವಿರಕ್ತಮಠದ ಶ್ರೀ. ಮಲ್ಲಿಕಾರ್ಜುನ ಮಹಾಸ್ವಾಮಿಗಳು ಸಾನಿಧ್ಯ ವಹಿಸಲಿದ್ದಾರೆ. ಬಿ.ಎಲ್.ಡಿ.ಇ ಸಂಸ್ಥೆಯ ಪ್ರಧಾನ ಕಾರ್ಯದರ್ಶಿ ಮತ್ತು ವಿಧಾನ ಪರಿಷತ ಶಾಸಕ ಸುನೀಲಗೌಡ ಪಾಟೀಲ ಅಧ್ಯಕ್ಷತೆ ವಹಿಸಲಿದ್ದಾರೆ.
ಈ ಸಮಾರಂಭದಲ್ಲಿ ನಾನಾ ಕ್ಷೇತ್ರಗಳಲ್ಲಿ ಸಾಧನೆ ಮಾಡಿರುವ ಬಿ.ಎಲ್.ಡಿ.ಇ. ಸಂಸ್ಥೆಯ ಪ್ರತಿಭಾವಂತ ಸಿಬ್ಬಂದಿ ಮತ್ತು ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ ನೀಡಿ ಗೌರವಿಸಲಾಗುವುದು.
ಈ ಸಂದರ್ಭದಲ್ಲಿ ಸಂಸ್ಥೆಯ ಆಡಳಿತ ಮಂಡಳಿಯ ಸದಸ್ಯ ಡಾ. ಎ. ಬಿ. ಪಾಟೀಲ ಅವರು, ಜಿ. ಕೆ. ಪಾಟೀಲ ಉಪಸ್ಥಿತರಿರಲಿದ್ದಾರೆ ಎಂದು ಬಿ.ಎಲ್.ಡಿ.ಇ ಸಂಸ್ಥೆಯ ಎ.ವಿ.ಎಸ್ ಆಯುರ್ವೇದ ಕಾಲೇಜು, ಆಸ್ಪತ್ರೆ ಮತ್ತು ಸಂಶೋಧನ ಕೇಂದ್ರದ ಪ್ರಾಚಾರ್ಯ ಡಾ. ಅಶೋಕ ಪಾಟೀಲ ಮಾಧ್ಯಮ ಪ್ರಕಟಣೆಯಲ್ಲಿ ಮಾಹಿತಿ ನೀಡಿದ್ದಾರೆ.
