Close Menu
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ

Subscribe to Updates

Get the latest creative news from FooBar about art, design and business.

What's Hot

ಎರೆಹುಳು ಗೊಬ್ಬರ ಉತ್ಪಾದನೆಗೆ ಆದ್ಯತೆ ನೀಡಿ :ಡಿಸಿ

ಉದಯರಶ್ಮಿ ಇಂದಿನ ದಿನಪತ್ರಿಕೆ ನವೆಂಬರ್ 05,2026

ರಸ್ತೆಗೆ ಚಾಚಿದ ಮುಳ್ಳು ಕಂಟಿಗಳಿಂದ ಸಂಚಾರಕ್ಕೆ ಸಂಚಕಾರ

Facebook X (Twitter) Instagram
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
Facebook X (Twitter) Instagram YouTube WhatsApp
udayarashminews.comudayarashminews.com
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
udayarashminews.comudayarashminews.com
Home»(ರಾಜ್ಯ ) ಜಿಲ್ಲೆ»ಎರೆಹುಳು ಗೊಬ್ಬರ ಉತ್ಪಾದನೆಗೆ ಆದ್ಯತೆ ನೀಡಿ :ಡಿಸಿ
(ರಾಜ್ಯ ) ಜಿಲ್ಲೆ

ಎರೆಹುಳು ಗೊಬ್ಬರ ಉತ್ಪಾದನೆಗೆ ಆದ್ಯತೆ ನೀಡಿ :ಡಿಸಿ

By No Comments1 Min Read
Facebook Twitter Pinterest LinkedIn Telegram WhatsApp
Share
Facebook Twitter LinkedIn Email Telegram WhatsApp

ಬಸವನಬಾಗೇವಾಡಿ ಘನತ್ಯಾಜ್ಯ ವಿಲೇವಾರಿ ಘಟಕಕ್ಕೆ ಜಿಲ್ಲಾಧಿಕಾರಿ ಡಾ.ಆನಂದ್ ಕೆ ಭೇಟಿ, ಪರಿಶೀಲನೆ

ಉದಯರಶ್ಮಿ ದಿನಪತ್ರಿಕೆ

ವಿಜಯಪುರ: ಬಸವನಬಾಗೇವಾಡಿ ಪಟ್ಟಣದ ಇವಣಗಿ ರಸ್ತೆಯಲ್ಲಿರುವ ಘನತ್ಯಾಜ್ಯ ವಿಲೇವಾರಿ ಘಟಕಕ್ಕೆ ಬುಧವಾರ ಜಿಲ್ಲಾಧಿಕಾರಿ ಡಾ. ಆನಂದ ಕೆ. ಅವರು ಭೇಟಿ ನೀಡಿ, ಘಟಕದ ಕಾರ್ಯನಿರ್ವಹಣೆ ಹಾಗೂ ಸ್ವಚ್ಛತಾ ವ್ಯವಸ್ಥೆಯನ್ನು ಪರಿಶೀಲಿಸಿದರು.
ಈ ಸಂದರ್ಭದಲ್ಲಿ ಘಟಕದಲ್ಲಿ ಉತ್ಪಾದಿಸಲಾಗುತ್ತಿರುವ ಎರೆಹುಳು ಗೊಬ್ಬರ ತಯಾರಿಕಾ ಪ್ರಕ್ರಿಯೆಯನ್ನು ವೀಕ್ಷಿಸಿದ ಜಿಲ್ಲಾಧಿಕಾರಿಗಳು, ರೈತರಿಗೆ ಕೈಗೆಟುಕುವ ದರದಲ್ಲಿ ಗುಣಮಟ್ಟದ ಗೊಬ್ಬರ ಲಭ್ಯವಾಗುವಂತೆ ಉತ್ಪಾದನೆ ಮತ್ತು ಮಾರಾಟಕ್ಕೆ ಕ್ರಮ ಕೈಗೊಳ್ಳಬೇಕು. ಗೊಬ್ಬರವನ್ನು ಕೃಷಿ ಚಟುವಟಿಕೆಗಳಿಗೆ ಪರಿಣಾಮಕಾರಿಯಾಗಿ ಬಳಸುವ ಕುರಿತು ರೈತರಿಗೆ ಮಾಹಿತಿ ನೀಡಬೇಕು ಎಂದು ಸಂಬಂಧಿಸಿದ ಅಧಿಕಾರಿಗಳಿಗೆ ಸೂಚಿಸಿದರು.
ಘಟಕದಲ್ಲಿ ಸಂಗ್ರಹವಾಗುವ ಒಣ ತ್ಯಾಜ್ಯವನ್ನು ವೈಜ್ಞಾನಿಕವಾಗಿ ಪ್ರತ್ಯೇಕಿಸಿ, ವ್ಯವಸ್ಥಿತವಾಗಿ ವಿಂಗಡಿಸಬೇಕು. ಮರುಬಳಕೆಗೆ ಯೋಗ್ಯವಾದ ವಸ್ತುಗಳನ್ನು ವಿಲೇವಾರಿ ಮಾಡಲು ಹೆಚ್ಚಿನ ಕಂಪನಿಗಳೊAದಿಗೆ ಒಡಂಬಡಿಕೆ ಮಾಡಿಕೊಂಡು ಕ್ರಮ ಕೈಗೊಳ್ಳಬೇಕು ಎಂದು ತಿಳಿಸಿದರು.
ಘಟಕದ ಆವರಣವನ್ನು ಸ್ವಚ್ಛವಾಗಿಟ್ಟುಕೊಂಡು ವಿವಿಧ ಗಿಡಮರಗಳನ್ನು ಬೆಳೆಸಿರುವುದಕ್ಕೆ ಜಿಲ್ಲಾಧಿಕಾರಿಗಳು ಮೆಚ್ಚುಗೆ ವ್ಯಕ್ತಪಡಿಸಿದರು. ಘಟಕದ ಲಭ್ಯವಿರುವ ಜಾಗದಲ್ಲಿ ಹಣ್ಣಿನ ಹಾಗೂ ಹೂವಿನ ಗಿಡಗಳನ್ನು ಬೆಳೆಸಿ, ಉದ್ಯಾನವನದ ಮಾದರಿಯಲ್ಲಿ ಹಸಿರು ಪರಿಸರ ನಿರ್ಮಿಸಿರುವ ಕಾರ್ಯವನ್ನು ಶ್ಲಾಘಿಸಿದರು. ಇದೇ ಮಾದರಿಯಲ್ಲಿ ಘಟಕದ ಉಳಿದ ಪ್ರದೇಶವನ್ನೂ ಅಭಿವೃದ್ಧಿಪಡಿಸುವಂತೆ ಸಲಹೆ ನೀಡಿದರು.
ಮನೆಮನೆಗೆ ತೆರಳಿ ಕಸ ಸಂಗ್ರಹಿಸುವ ಸಂದರ್ಭದಲ್ಲಿ ಹಸಿ ಮತ್ತು ಒಣ ತ್ಯಾಜ್ಯವನ್ನು ಮೂಲದಲ್ಲಿಯೇ ಪ್ರತ್ಯೇಕಿಸುವುದನ್ನು ಕಡ್ಡಾಯವಾಗಿ ಅನುಷ್ಠಾನಗೊಳಿಸಬೇಕು. ಪ್ರತಿಯೊಂದು ಮನೆಗೂ ಪ್ರತಿದಿನ ಕಸ ಸಂಗ್ರಹಣಾ ವಾಹನ ತೆರಳಬೇಕು. ಪಟ್ಟಣದ ರಸ್ತೆ ಬದಿಗಳಲ್ಲಿ ಹಾಗೂ ಸಾರ್ವಜನಿಕ ಸ್ಥಳಗಳಲ್ಲಿ ಕಸ ಸಂಗ್ರಹವಾಗದAತೆ ಮತ್ತು ಕಸದ ಒಂದೆಡೆ (ಬ್ಲ್ಯಾಕ್ ಸ್ಪಾಟ್) ಸಂಗ್ರಹವಾಗದAತೆ ನಿರಂತರ ನಿಗಾ ವಹಿಸಬೇಕು ಎಂದು ಅಧಿಕಾರಿಗಳಿಗೆ ಕಟ್ಟುನಿಟ್ಟಿನ ಸೂಚನೆ ನೀಡಿದರು.
ಈ ಸಂದರ್ಭದಲ್ಲಿ ವಿಜಯಪುರ ವಿಭಾಗಾಧಿಕಾರಿ ಜುಫಿಶಾನ್ ಹಕ್, ನಗರಾಭಿವೃದ್ಧಿ ಕೋಶದ ಯೋಜನಾ ನಿರ್ದೇಶಕ ಬದ್ರುದ್ದಿನ್ ಸೌದಾಗರ್, ಪುರಸಭೆ ಮುಖ್ಯಾಧಿಕಾರಿ ಶಬ್ಬೀರ್ ರೇವೂರಕರ, ಆರೋಗ್ಯ ನಿರೀಕ್ಷಕರಾದ ವಂದಲ್ ಹಾಗೂ ಹಿರೇಮಠ, ಕಿರಿಯ ಅಭಿಯಂತರರಾದ ಸಂತೋಷ್ ಮತ್ತು ಜಂಬಗಿ ಮಹಾದೇವ್ ಉಪಸ್ಥಿತರಿದ್ದರು.

BIJAPUR NEWS bjp congress patil public public news udaya rashmi Udayarashmi today newspaper udayarashminews.com
Share. Facebook Twitter Pinterest Email Telegram WhatsApp
  • Website

Related Posts

ಉದಯರಶ್ಮಿ ಇಂದಿನ ದಿನಪತ್ರಿಕೆ ನವೆಂಬರ್ 05,2026

ರಸ್ತೆಗೆ ಚಾಚಿದ ಮುಳ್ಳು ಕಂಟಿಗಳಿಂದ ಸಂಚಾರಕ್ಕೆ ಸಂಚಕಾರ

ನ.೬ರಂದು ಬಿ.ಎಲ್.ಡಿ.ಇ ಸಂಸ್ಥೆ ಸಂಸ್ಥಾಪನಾ ದಿನ ಕಾರ್ಯಕ್ರಮ

ಕುಡಿವ ನೀರು ಪೂರೈಸದ ಅಧಿಕಾರಿಗೆ ತಾಪಂ ಇಒ ತರಾಟೆ!

Add A Comment
Leave A Reply Cancel Reply

Categories
  • (ರಾಜ್ಯ ) ಜಿಲ್ಲೆ
  • Helldivers
  • Typora
  • Uncategorized
  • Wemod
  • ಆರೋಗ್ಯ
  • ಇತರೆ
  • ಕಾವ್ಯರಶ್ಮಿ
  • ಚಿಂತನ
  • ದಿನಪತ್ರಿಕೆ
  • ಪುಸ್ತಕ ಪರಿಚಯ
  • ಪ್ರೇಮಲೋಕ
  • ಭಾವರಶ್ಮಿ
  • ರಾಷ್ಚ್ರ
  • ವಿಜಯಪುರ
  • ವಿದ್ಯಾರ್ಥಿ ನಿಧಿ
  • ವಿಶೇಷ ಲೇಖನ
  • ಸಾಹಿತ್ಯ
  • ಸಿನಿಮಾ
  • ಹೊತ್ತಿಗೆ ಹೊರಣ
Recent Posts
  • ಎರೆಹುಳು ಗೊಬ್ಬರ ಉತ್ಪಾದನೆಗೆ ಆದ್ಯತೆ ನೀಡಿ :ಡಿಸಿ
    In (ರಾಜ್ಯ ) ಜಿಲ್ಲೆ
  • ಉದಯರಶ್ಮಿ ಇಂದಿನ ದಿನಪತ್ರಿಕೆ ನವೆಂಬರ್ 05,2026
    In ದಿನಪತ್ರಿಕೆ
  • ರಸ್ತೆಗೆ ಚಾಚಿದ ಮುಳ್ಳು ಕಂಟಿಗಳಿಂದ ಸಂಚಾರಕ್ಕೆ ಸಂಚಕಾರ
    In (ರಾಜ್ಯ ) ಜಿಲ್ಲೆ
  • ನ.೬ರಂದು ಬಿ.ಎಲ್.ಡಿ.ಇ ಸಂಸ್ಥೆ ಸಂಸ್ಥಾಪನಾ ದಿನ ಕಾರ್ಯಕ್ರಮ
    In (ರಾಜ್ಯ ) ಜಿಲ್ಲೆ
  • ಕುಡಿವ ನೀರು ಪೂರೈಸದ ಅಧಿಕಾರಿಗೆ ತಾಪಂ ಇಒ ತರಾಟೆ!
    In (ರಾಜ್ಯ ) ಜಿಲ್ಲೆ
  • ಮಕ್ಕಳ ಪ್ರತಿಭೆ ಅನಾವರಣಕ್ಕೆ ಪ್ರತಿಭಾ ಕಾರಂಜಿ ಸೂಕ್ತ ವೇದಿಕೆ
    In (ರಾಜ್ಯ ) ಜಿಲ್ಲೆ
  • ಅರಿವು ರಿನ್ಯೂವಲ್ ಸಾಲ ಯೋಜನೆ ಅರ್ಜಿ ಸಲ್ಲಿಸುವ ಅವಧಿ ವಿಸ್ತರಣೆ
    In (ರಾಜ್ಯ ) ಜಿಲ್ಲೆ
  • ಮೆಗಾ ಮಾರ್ಕೆಟ್ & ಕುಡಿವ ನೀರಿನ ಯೋಜನೆ ಕಾಲಮಿತಿಯಲ್ಲಿ ಪೂರ್ಣಗೊಳಿಸಿ
    In (ರಾಜ್ಯ ) ಜಿಲ್ಲೆ
  • ಪ್ರತಿಭಾ ಪುರಸ್ಕಾರ: ಅರ್ಜಿ ಆಹ್ವಾನ
    In (ರಾಜ್ಯ ) ಜಿಲ್ಲೆ
  • ನ.೬ರಂದು ವಿದ್ಯುತ್ ಪೂರೈಕೆಯಲ್ಲಿ ವ್ಯತ್ಯಯ
    In (ರಾಜ್ಯ ) ಜಿಲ್ಲೆ
Editors Picks
Top Reviews
udayarashminews.com
Facebook X (Twitter) Instagram Pinterest Vimeo YouTube
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
© 2026 udayarashminews.com. Designed by udayarashmi news .

Type above and press Enter to search. Press Esc to cancel.