ಉದಯರಶ್ಮಿ ದಿನಪತ್ರಿಕೆ
ವಿಜಯಪುರ: ಕರ್ನಾಟಕ ರಾಜ್ಯ ಅಕ್ಕಮಹಾದೇವಿ ಮಹಿಳಾ ವಿಶ್ವವಿದ್ಯಾಲಯದ ಪತ್ರಿಕೋದ್ಯಮ ಮತ್ತು ಸಮೂಹ ಸಂವಹನ ವಿಭಾಗದ ವತಿಯಿಂದ ಸ್ನಾತಕ ವಿದ್ಯಾರ್ಥಿನಿಯರಿಗಾಗಿ ನ. ೬ರಂದು ಬೆಳಿಗ್ಗೆ ೧೦.೩೦ಕ್ಕೆ ಪತ್ರಿಕೋದ್ಯಮ ವಿಭಾಗದ ಸಭಾಂಗಣದಲ್ಲಿ ಒಂದು ದಿನದ ‘ದೂರದರ್ಶನ ನಿರೂಪಣೆ’ ಕಾರ್ಯಾಗಾರ ಹಮ್ಮಿಕೊಳ್ಳಲಾಗಿದೆ.
ಸ್ನಾತಕ ವಿಭಾಗದ ವಿಶೇಷ ಅಧಿಕಾರಿ ಪ್ರೊ. ಡಿ.ಎಂ. ಮದರಿ ಮುಖ್ಯ ಅತಿಥಿಗಳಾಗಿ ಭಾಗವಹಿಸಲಿದ್ದಾರೆ. ಪತ್ರಿಕೋದ್ಯಮ ಮತ್ತು ಸಮೂಹ ಸಂವಹನ ವಿಭಾಗದ ಪ್ರೊ. ಓಂಕಾರ ಕಾಕಡೆ ಅಧ್ಯಕ್ಷತೆ ವಹಿಸಲಿದ್ದು. ಸಂಪನ್ಮೂಲ ವ್ಯಕ್ತಿಗಳಾಗಿ ವಿಭಾಗದ ಸಹಾಯಕ ಪ್ರಾಧ್ಯಾಪಕ ಡಾ. ಸಂದೀಪ್ ಭಾಗವಹಿಸಲಿದ್ದಾರೆ.
ಕಾರ್ಯಗಾರದಲ್ಲಿ ಸ್ನಾತಕ ವಿಭಾಗದ ಸಮಾಜ ವಿಜ್ಞಾನ ಕೋರ್ಸ್ಗಳ ಸಂಯೋಜಕ ಡಾ. ಕಿರಣ್ ಜಿ.ಎನ್, ಸಂಶೋಧನಾ ವಿದ್ಯಾರ್ಥಿನಿಯರು, ಸ್ನಾತಕ ಮತ್ತು ಸ್ನಾತಕೋತ್ತರ ವಿದ್ಯಾರ್ಥಿನಿಯರು, ಬೋದಕೇತರ ಸಿಬ್ಬಂದಿ ವರ್ಗದವರು ಉಪಸ್ಥಿತರಿರಲಿದ್ದಾರೆ ಎಂದು ಕಾರ್ಯಾಗಾರದ ಸಂಯೋಜಕಿ ಡಾ. ತಹಮೀನಾ ನಿಗಾರ ಸುಲ್ತಾನಾ ಮಹಿಳಾ ವಿವಿಯ ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

