ಉದಯರಶ್ಮಿ ದಿನಪತ್ರಿಕೆ
ಚಡಚಣ: ಪತ್ರಿಕೋದ್ಯಮ ಕ್ಷೇತ್ರದಲ್ಲಿ ತಮ್ಮದೇ ಆದ ಸಾಧನೆ ಹಾಗೂ ಸೇವೆಯ ಮೂಲಕ ವಿಜಯಪುರ ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿಗೆ ಭಾಜನರಾದ ಕನ್ನಡ ದಿನಪತ್ರಿಕೆಯ ವರದಿಗಾರರು ಹಾಗೂ ‘ಪೂರ್ವಿ ಉದಯ’ ದಿನಪತ್ರಿಕೆಯ ಸಂಪಾದಕರಾದ ಖಾಜು ಸಿಂಗೆಗೋಳ ಅವರನ್ನು ಇಂಡಿ ಪತ್ರಿಕಾಭವನದಲ್ಲಿ ಆತ್ಮೀಯವಾಗಿ ಸನ್ಮಾನಿಸಿ, ಗೌರವಿಸಿ ಅಭಿನಂದಿಸಲಾಯಿತು.
ಪತ್ರಿಕೋದ್ಯಮ ಕ್ಷೇತ್ರದಲ್ಲಿ ಅವರ ಸಾಧನೆ ಮತ್ತು ಸೇವೆಯನ್ನು ಗುರುತಿಸಿ ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿ ಲಭಿಸಿರುವುದು ಸಂತಸದ ಸಂಗತಿಯಾಗಿದ್ದು, ಮುಂದಿನ ದಿನಗಳಲ್ಲಿಯೂ ಪತ್ರಿಕಾ ಕ್ಷೇತ್ರದಲ್ಲಿ ಇನ್ನಷ್ಟು ಸಾಧನೆ ಮಾಡುವಂತಾಗಲಿ ಎಂದು ಈ ಸಂದರ್ಭದಲ್ಲಿ ಶುಭ ಹಾರೈಸಲಾಯಿತು.
ಈ ಸಂದರ್ಭದಲ್ಲಿ ಇಂಡಿ ತಾಲೂಕು ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿ ಅಧ್ಯಕ್ಷ ಪ್ರಶಾಂತ ಕಾಳೆ, ಅಕ್ಕಮಹಾದೇವಿ ಮಹಿಳಾ ವಿಶ್ವವಿದ್ಯಾಲಯದ ಸಿಂಡಿಕೇಟ್ ಸದಸ್ಯ ಶಿವಯೋಗಪ್ಪ ಮಾಡ್ಯಾಳ, ಮಲ್ಲಿಕಾರ್ಜುನ ನಡುಗಡ್ಡಿ, ರಂಜಾನ್ ವಾಲಿಕಾರ, ರಾಜು ಪಡನೂರ, ಜಿಯಾ ಉಲ್ ಹಕ್ ಬೇನೂರ, ಸುನೀಲ ಯಂಟಮನ ಉಪಸ್ಥಿತರಿದ್ದರು.

