Close Menu
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ

Subscribe to Updates

Get the latest creative news from FooBar about art, design and business.

What's Hot

ಮಾಹಿತಿ ಇರದ ಸಿಎಂ ನೈತಿಕ ಹೊಣೆ ಹೊತ್ತು ರಾಜಿನಾಮೆ ನೀಡಲಿ

ಕನೇರಿ ಶ್ರೀಗಳ ವಿರುದ್ದ ಪಾಟೀಲ ಟೀಕಾ ಪ್ರಹಾರ

ಅಗ್ನಿತತ್ವ ಮತ್ತು ವಾಯು ತತ್ವ

Facebook X (Twitter) Instagram
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
Facebook X (Twitter) Instagram YouTube WhatsApp
udayarashminews.comudayarashminews.com
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
udayarashminews.comudayarashminews.com
Home»(ರಾಜ್ಯ ) ಜಿಲ್ಲೆ»ಮಾಹಿತಿ ಇರದ ಸಿಎಂ ನೈತಿಕ ಹೊಣೆ ಹೊತ್ತು ರಾಜಿನಾಮೆ ನೀಡಲಿ
(ರಾಜ್ಯ ) ಜಿಲ್ಲೆ

ಮಾಹಿತಿ ಇರದ ಸಿಎಂ ನೈತಿಕ ಹೊಣೆ ಹೊತ್ತು ರಾಜಿನಾಮೆ ನೀಡಲಿ

By No Comments2 Mins Read
Facebook Twitter Pinterest LinkedIn Telegram WhatsApp
Share
Facebook Twitter LinkedIn Email Telegram WhatsApp

ಕೃಷ್ಣಾ ನದಿ ನೀರು ಭೀಮಾ ನದಿಗೆ ತಿರುಗಿಸುವ ಯೋಜನೆ | ಬಿಜೆಪಿ ವಿಜಯಪುರ ಜಿಲ್ಲಾಧ್ಯಕ್ಷ ಗುರುಲಿಂಗಪ್ಪ ಅಂಗಡಿ ಆಗ್ರಹ

ಉದಯರಶ್ಮಿ ದಿನಪತ್ರಿಕೆ

ವಿಜಯಪುರ: ಮಹಾಬಲೇಶ್ವರ ಸಮೀಪ ಕೃಷ್ಣಾ ನದಿಯಿಂದ ೪೦ ಟಿಎಂಸಿ ಅಡಿ ಪ್ರವಾಹದ ನೀರನ್ನು ಭೀಮಾ ನದಿಯ ಉಜಣಿ ಜಲಾಶಯಕ್ಕೆ ವರ್ಗಾಯಿಸುವ ಯೋಜನೆ ಬಗ್ಗೆ ರಾಜ್ಯ ಸರ್ಕಾರಕ್ಕೆ ಗಮನಕ್ಕೆ ಇರದಿರುವುದು ನೋಡಿದರೆ ಸರ್ಕಾರದ ಬೇಜವಾಬ್ದಾರಿ ಹಾಗೂ ಗುಪ್ತಚರ ಇಲಾಖೆಯ ವೈಫಲ್ಯಕ್ಕೆ ಇದು ಸಾಕ್ಷಿ, ಈ ಮಹತ್ವದ ವಿಚಾರ ವಿಡಿಯೋ ಮೂಲಕ ಸರ್ಕಾರಕ್ಕೆ ತಿಳಿಯಬೇಕೆ ಎಂದು ಗಂಭೀರವಾಗಿ ಪ್ರಶ್ನಿಸಿರುವ ಬಿಜೆಪಿ ಜಿಲ್ಲಾಧ್ಯಕ್ಷ ಗುರುಲಿಂಗಪ್ಪ ಅಂಗಡಿ ಈ ವಿಷಯವಾಗಿ
ನಿರ್ಲಕ್ಷ್ಯ ತೋರಿದ ಹಿನ್ನೆಲೆಯಲ್ಲಿ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ನೈತಿಕ ಹೊಣೆ ಹೊತ್ತು ರಾಜಿನಾಮೆ ನೀಡಬೇಕು ಎಂದು ಒತ್ತಾಯಿಸಿದರು.
ಗುರುವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಇಷ್ಟೊಂದು ದೊಡ್ಡ ಯೋಜನೆ ಸರ್ಕಾರಕ್ಕೆ ತಿಳಿಯದಿರುವುದು ಸಣ್ಣ ವಿಷಯವಲ್ಲ, ವಿಡಿಯೋ ಮೂಲಕ ಇದು ಹೊರಬಂದಿದೆ ಎಂದರೆ ಸರ್ಕಾರ ಯಾವ ರೀತಿ ಆಡಳಿತ ನಡೆಸುತ್ತಿದೆ ಎಂಬುದಕ್ಕೆ ಸಾಕ್ಷಿ ಎಂದರು.
ಈ ವಿಚಾರ ಕೆಬಿಜೆಎನ್ನೆಲ್ ಅಧಿಕಾರಿಗಳಿಗೆ ತಿಳಿದಿರಲಿಲ್ಲವೇ? ರಾಜ್ಯದ ಗುಪ್ತಚರ ಇಲಾಖೆ ಏನು ಮಾಡುತ್ತಿದೆ? ಇಂತಹ ಗಂಭೀರ ವಿಷಯಗಳ ಬಗ್ಗೆ ಸರ್ಕಾರಕ್ಕೆ ಮೊದಲೇ ಮಾಹಿತಿ ಇರಲಿಲ್ಲವೇ? ರಾಜ್ಯದ ಹಿತಾಸಕ್ತಿಗೆ ಸಂಬಂಧಿಸಿದ ವಿಚಾರದಲ್ಲಿ ನಿರ್ಲಕ್ಷ್ಯ ವಹಿಸಿರುವುದಕ್ಕೆ ಹೊಣೆ ಹೊತ್ತು ಮುಖ್ಯಮಂತ್ರಿ ರಾಜೀನಾಮೆ ನೀಡಬೇಕು ಎಂದು ಅಂಗಡಿ ಆಗ್ರಹಿಸಿದರು.
ಮಹಾರಾಷ್ಟ್ರ ಸರ್ಕಾರ ಕರ್ನಾಟಕದ ಹಿತಾಸಕ್ತಿಯನ್ನು ಕಡೆಗಣಿಸದೆ ಯೋಜನೆ ರೂಪಿಸಬೇಕು. ಈ ವಿಚಾರವಾಗಿ ಪ್ರಧಾನಮಂತ್ರಿಗಳ ಬಳಿ ಸರ್ವಪಕ್ಷ ನಿಯೋಗ ಕರೆದೊಯ್ದು ರಾಜ್ಯ ಸರ್ಕಾರದ ನಿಲುವನ್ನು ಸ್ಪಷ್ಟಪಡಿಸಬೇಕು ಎಂದರು.
ಕೃಷ್ಣಾ ನದಿ ಜೀವನಾಡಿ, ಯಾಗಿದ್ದು, ಈ ವರ್ಷ ಮಳೆಯ ಕೊರತೆಯ ನಡುವೆಯೂ ಜಿಲ್ಲೆಯ ಜನರು ಕೃಷ್ಣಾ ನದಿಯ ನೀರಿನಿಂದ ಬದುಕು ಸಾಗಿಸುತ್ತಿದ್ದಾರೆ. ಹೀಗಾಗಿ ಜಿಲ್ಲಾ ಉಸ್ತುವಾರಿ ಸಚಿವರು ಈ ವಿಷಯವನ್ನು ಅತ್ಯಂತ ಗಂಭೀರವಾಗಿ ಪರಿಗಣಿಸಬೇಕು ಎಂದರು.
ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದ ನಂತರ ನಿರಂತರವಾಗಿ ಬೆಲೆ ಏರಿಕೆ ಮಾಡುವ ಮೂಲಕ ಜನಸಾಮಾನ್ಯರ ಬದುಕಿನ ಮೇಲೆ ಹೊರೆ ಹೇರುತ್ತಿದೆ. ಜನರ ಅಗತ್ಯ ವಸ್ತುಗಳ ಬೆಲೆ ಹೆಚ್ಚಿಸಿ ಬಡವರ ಕುತ್ತಿಗೆ ಮೇಲೆ ಕಾಲಿಟ್ಟು ಆಡಳಿತ ನಡೆಸುತ್ತಿದೆ ಎಂದುಅAಗಡಿ ಆರೋಪಿಸಿದರು.
ರಾಜ್ಯೋತ್ಸವದ ಶುಭ ಸಂದರ್ಭದಲ್ಲಿ ಬಡ ಮತ್ತು ಮಧ್ಯಮ ವರ್ಗದ ಜನರಿಗೆ ಬೆಲೆ ಏರಿಕೆಯ ಬರೆ ಎಳೆಯಲಾಗಿದೆ. ನಂದಿನಿ ಹಾಲು, ಮೊಸರಿನ ಬೆಲೆ ಏರಿಕೆ ಮಾಡಿ ನಾಲ್ಕೇ ದಿನಗಳಲ್ಲಿ ಸರ್ಕಾರಿ ಬಸ್ ಪ್ರಯಾಣ ದರವನ್ನೂ ಹೆಚ್ಚಿಸಲಾಗಿದೆ, ಬಸ್ ಪ್ರಯಾಣ ದರವನ್ನು ಶೇ.೨೩ರಷ್ಟು ಹಾಗೂ ಬಿಎಂಟಿಸಿ ಬಸ್ ದರವನ್ನು ಶೇ.೩೩ರಷ್ಟು ಹೆಚ್ಚಿಸುವ ಮೂಲಕ ಸರ್ಕಾರ ಜನರಿಗೆ ಅನ್ಯಾಯ ಮಾಡಿದೆ, ಕೂಡಲೇ ಬಸ್ ಪ್ರಯಾಣ ದರ ಏರಿಕೆ ನಿರ್ಧಾರವನ್ನು ಹಿಂಪಡೆಯಬೇಕು ಎಂದು ಒತ್ತಾಯಿಸಿದರು.
ಬಿಜೆಪಿ ಬೆಳಗಾವಿ ವಿಭಾಗದ ಸಂಚಾಲಕ ಬಸವರಾಜ ಯಂಕಂಚಿ ಮಾತನಾಡಿ, ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದಾಗಿನಿAದಲೂ ಸಾಮಾನ್ಯ ಜನರ ಮೇಲೆ ಒಂದರ ಮೇಲೆ ಒಂದರAತೆ ಬೆಲೆ ಏರಿಕೆಯ ಹೊರೆ ಹೇರುತ್ತಿದೆ. ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ಅವರ ನೇತೃತ್ವದಲ್ಲಿ ರಾಜ್ಯದ ವಿವಿಧ ಬಸ್ ನಿಲ್ದಾಣಗಳಲ್ಲಿ ಅಣಕು ಪ್ರದರ್ಶನಗಳ ಮೂಲಕ ಜನರಲ್ಲಿ ಬೆಲೆ ಏರಿಕೆ ಕುರಿತು ಜಾಗೃತಿ ಮೂಡಿಸಲಾಗುತ್ತಿದೆ ಎಂದರು.
ಪತ್ರಿಕಾಗೋಷ್ಠಿಯಲ್ಲಿ ಈರಣ್ಣ ರಾವೂರ, ಬಸವರಾಜ ಬಿರಾದಾರ, ಚಿದಾನಂದ ಚಲವಾದಿ ಮೊದಲಾದವರು ಉಪಸ್ಥಿತರಿದ್ದರು.

ಬೆಲೆ ಏರಿಕೆ ಉಡುಗೊರೆ

ಬಿಜೆಪಿ ಮುಖಂಡ ಉಮೇಶ ಕಾರಜೋಳ ಮಾತನಾಡಿ, ದೀಪಾವಳಿ ಹಬ್ಬದ ಸಂದರ್ಭದಲ್ಲಿ ರಾಜ್ಯ ಸರ್ಕಾರ ಜನರಿಗೆ ಎರಡು ಉಡುಗೊರೆಗಳನ್ನು ನೀಡಿದೆ. ಒಂದು ಬಸ್ ಪ್ರಯಾಣ ದರ ಏರಿಕೆ, ಮತ್ತೊಂದು ಹಾಲಿನ ದರ ಏರಿಕೆ. ನಂದಿನಿ ಹಾಲಿನ ಬೆಲೆ ಹೆಚ್ಚಿಸಿ ಆ ಹಣವನ್ನು ರೈತರಿಗೆ ನೀಡುವ ಬದಲು ಸರ್ಕಾರ ತನ್ನ ಖಜಾನೆಯಿಂದಲೇ ರೈತರಿಗೆ ನೆರವು ನೀಡಬೇಕಿತ್ತು. ಜನರ ಮೇಲೆ ಹೆಚ್ಚುವರಿ ಹೊರೆ ಹಾಕಿ ಸುಲಿಗೆ ಮಾಡುವುದು ಸರಿಯಲ್ಲ. ಇದೇ ರೀತಿ ಮುಂದುವರಿದರೆ ಮುಂಬರುವ ಜಿಲ್ಲಾ ಪಂಚಾಯಿತಿ, ತಾಲ್ಲೂಕು ಪಂಚಾಯಿತಿ ಸೇರಿದಂತೆ ಎಲ್ಲ ಚುನಾವಣೆಗಳಲ್ಲಿ ಜನರು ಕಾಂಗ್ರೆಸ್ ಪಕ್ಷವನ್ನು ಮನೆಗೆ ಕಳುಹಿಸಲಿದ್ದಾರೆ ಎಂದರು.

BIJAPUR NEWS congress public public news udaya rashmi Udayarashmi today newspaper udayarashminews.com
Share. Facebook Twitter Pinterest Email Telegram WhatsApp
  • Website

Related Posts

ಕನೇರಿ ಶ್ರೀಗಳ ವಿರುದ್ದ ಪಾಟೀಲ ಟೀಕಾ ಪ್ರಹಾರ

ಅಗ್ನಿತತ್ವ ಮತ್ತು ವಾಯು ತತ್ವ

ನಾವು ಅಡಪೆಚ್ಚುಗಳ ಭಾಜಪ ಮತ್ತು ಕೈ ಪಾಳೆಯದವರೇ..?

ಉದಯರಶ್ಮಿ ಇಂದಿನ ದಿನಪತ್ರಿಕೆ ನವೆಂಬರ್ 06,2026

Add A Comment
Leave A Reply Cancel Reply

Categories
  • (ರಾಜ್ಯ ) ಜಿಲ್ಲೆ
  • Helldivers
  • Typora
  • Uncategorized
  • Wemod
  • ಆರೋಗ್ಯ
  • ಇತರೆ
  • ಕಾವ್ಯರಶ್ಮಿ
  • ಚಿಂತನ
  • ದಿನಪತ್ರಿಕೆ
  • ಪುಸ್ತಕ ಪರಿಚಯ
  • ಪ್ರೇಮಲೋಕ
  • ಭಾವರಶ್ಮಿ
  • ರಾಷ್ಚ್ರ
  • ವಿಜಯಪುರ
  • ವಿದ್ಯಾರ್ಥಿ ನಿಧಿ
  • ವಿಶೇಷ ಲೇಖನ
  • ಸಾಹಿತ್ಯ
  • ಸಿನಿಮಾ
  • ಹೊತ್ತಿಗೆ ಹೊರಣ
Recent Posts
  • ಮಾಹಿತಿ ಇರದ ಸಿಎಂ ನೈತಿಕ ಹೊಣೆ ಹೊತ್ತು ರಾಜಿನಾಮೆ ನೀಡಲಿ
    In (ರಾಜ್ಯ ) ಜಿಲ್ಲೆ
  • ಕನೇರಿ ಶ್ರೀಗಳ ವಿರುದ್ದ ಪಾಟೀಲ ಟೀಕಾ ಪ್ರಹಾರ
    In (ರಾಜ್ಯ ) ಜಿಲ್ಲೆ
  • ಅಗ್ನಿತತ್ವ ಮತ್ತು ವಾಯು ತತ್ವ
    In ವಿಶೇಷ ಲೇಖನ
  • ನಾವು ಅಡಪೆಚ್ಚುಗಳ ಭಾಜಪ ಮತ್ತು ಕೈ ಪಾಳೆಯದವರೇ..?
    In ವಿಶೇಷ ಲೇಖನ
  • ಉದಯರಶ್ಮಿ ಇಂದಿನ ದಿನಪತ್ರಿಕೆ ನವೆಂಬರ್ 06,2026
    In ದಿನಪತ್ರಿಕೆ, ವಿಶೇಷ ಲೇಖನ
  • ಕೃಷಿ ಸಂಸ್ಕೃತಿ ಪುನಶ್ಚೇತನಕ್ಕೆ ಬಜೆಟ್‌ನ ಶೇ.10 ಮೀಸಲಿಡಿ
    In (ರಾಜ್ಯ ) ಜಿಲ್ಲೆ
  • ಪತ್ರಕರ್ತ ಖಾಜು ಸಿಂಗೆಗೋಳ ಗೆ ಸನ್ಮಾನ
    In (ರಾಜ್ಯ ) ಜಿಲ್ಲೆ
  • ರೈತರ ಸಾಲಮನ್ನಾ & ಉಚಿತ ಮೇವು ಒದಗಿಸಲು ಮನವಿ
    In (ರಾಜ್ಯ ) ಜಿಲ್ಲೆ
  • ರೈತ ನಾಯಕರ ಬಂಧನಕ್ಕೆ ವಿರೋಧ: ಹೆದ್ದಾರಿ ತಡೆದು ಪ್ರತಿಭಟನೆ
    In (ರಾಜ್ಯ ) ಜಿಲ್ಲೆ
  • ಅರಣ್ಯ ಭೂಮಿ ಆಕ್ರಮ ಮಂಜೂರಾತಿ ತನಿಖೆಗೆ ಎಸ್ಐಟಿ ರಚನೆ
    In (ರಾಜ್ಯ ) ಜಿಲ್ಲೆ
Editors Picks
Top Reviews
udayarashminews.com
Facebook X (Twitter) Instagram Pinterest Vimeo YouTube
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
© 2026 udayarashminews.com. Designed by udayarashmi news .

Type above and press Enter to search. Press Esc to cancel.