Close Menu
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ

Subscribe to Updates

Get the latest creative news from FooBar about art, design and business.

What's Hot

ಉದಯರಶ್ಮಿ ಇಂದಿನ ದಿನಪತ್ರಿಕೆ ನವೆಂಬರ್ 07,2026

ರಾಜ್ಯ ಉಪಾಧ್ಯಕ್ಷರಾಗಿ ರಾವಸಾಬ ಐಹೊಳೆ ನೇಮಕ

ಕುಖ್ಯಾತ ರೌಡಿ ಮಾಳಪ್ಪ ದೇವಕತೆ ಬಂಧನ ಅವಧಿ ವಿಸ್ತರಣೆ

Facebook X (Twitter) Instagram
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
Facebook X (Twitter) Instagram YouTube WhatsApp
udayarashminews.comudayarashminews.com
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
udayarashminews.comudayarashminews.com
Home»(ರಾಜ್ಯ ) ಜಿಲ್ಲೆ»ದತ್ತಾತ್ರೇಯ ದೇವಾಲಯದ ಸ್ತಬ್ಧಚಿತ್ರಕ್ಕೆ ಪ್ರಥಮ ಸ್ಥಾನ
(ರಾಜ್ಯ ) ಜಿಲ್ಲೆ

ದತ್ತಾತ್ರೇಯ ದೇವಾಲಯದ ಸ್ತಬ್ಧಚಿತ್ರಕ್ಕೆ ಪ್ರಥಮ ಸ್ಥಾನ

By No Comments1 Min Read
Facebook Twitter Pinterest LinkedIn Telegram WhatsApp
Share
Facebook Twitter LinkedIn Email Telegram WhatsApp

ಕನ್ನಡ ರಾಜ್ಯೋತ್ಸವ ಮೆರವಣಿಗೆಯಲ್ಲಿ ೧೨ನೇ ಶತಮಾನದ ಕಲ್ಯಾಣಿ ಚಾಲುಕ್ಯರ ಕಾಲದ ಚಟ್ಟರಕಿ ದೇವಾಲಯದ ಪರಂಪರೆ, ವೈಶಿಷ್ಟ್ಯಕ್ಕೆ ಜನಮೆಚ್ಚುಗೆ

ಉದಯರಶ್ಮಿ ದಿನಪತ್ರಿಕೆ

ವಿಜಯಪುರ: ಕನ್ನಡ ರಾಜ್ಯೋತ್ಸವದ ಅಂಗವಾಗಿ ನವೆಂಬರ್ ೧ರಂದು ಜಿಲ್ಲಾಡಳಿತದ ವತಿಯಿಂದ ಆಯೋಜಿಸಿದ್ದ ಸ್ತಬ್ಧಚಿತ್ರಗಳ ಮೆರವಣಿಗೆಯಲ್ಲಿ ಕಲ್ಯಾಣ ಕರ್ನಾಟಕ ರಸ್ತೆ ಸಾರಿಗೆ ನಿಗಮದ ವಿಜಯಪುರ ವಿಭಾಗದ ವತಿಯಿಂದ ರೂಪಿಸಲಾದ ಚಟ್ಟರಕಿ ಗ್ರಾಮದ ಐತಿಹಾಸಿಕ ಶ್ರೀ ದತ್ತಾತ್ರೇಯ ದೇವಾಲಯದ ಸ್ತಬ್ಧಚಿತ್ರವು ಪ್ರಥಮ ಸ್ಥಾನ ಪಡೆದು ಗಮನ ಸೆಳೆದಿದೆ.
ದೇವರಹಿಪ್ಪರಗಿ ತಾಲೂಕಿನ ಚಟ್ಟರಕಿ ಗ್ರಾಮದಲ್ಲಿರುವ ೧೨ನೇ ಶತಮಾನದ ಕಲ್ಯಾಣಿ ಚಾಲುಕ್ಯರ ಕಾಲದ ಶ್ರೀ ದತ್ತಾತ್ರೇಯ ದೇವಾಲಯದ ಐತಿಹಾಸಿಕ ಹಿನ್ನೆಲೆ, ಧಾರ್ಮಿಕ ಪರಂಪರೆ ಹಾಗೂ ವಾಸ್ತುಶಿಲ್ಪದ ವೈಶಿಷ್ಟ್ಯವನ್ನು ಬಿಂಬಿಸುವಂತೆ ಸ್ತಬ್ಧಚಿತ್ರವನ್ನು ವಿನ್ಯಾಸಗೊಳಿಸಲಾಗಿತ್ತು.
ಜಿಲ್ಲೆಯ ಐತಿಹಾಸಿಕ ಹಾಗೂ ಸಾಂಸ್ಕೃತಿಕ ಪರಂಪರೆಯನ್ನು ಪರಿಚಯಿಸುವ ಈ ಸ್ತಬ್ಧಚಿತ್ರವು ಮೆರವಣಿಗೆಯಲ್ಲಿ ಸಾರ್ವಜನಿಕರ ಮೆಚ್ಚುಗೆಗೆ ಪಾತ್ರವಾಗಿ ಪ್ರಥಮ ಬಹುಮಾನ ಗಳಿಸಿದೆ. ನಗರದ ಡಾ.ಬಿ.ಆರ್. ಅಂಬೇಡ್ಕರ್ ಜಿಲ್ಲಾ ಕ್ರೀಡಾಂಗಣದಲ್ಲಿ ನಡೆದ ಜಿಲ್ಲಾ ಮಟ್ಟದ ಕನ್ನಡ ರಾಜ್ಯೋತ್ಸವ ಸಮಾರಂಭದಲ್ಲಿ ಬೃಹತ್ ಮತ್ತು ಮಧ್ಯಮ ಕೈಗಾರಿಕೆ ಹಾಗೂ ಮೂಲಸೌಲಭ್ಯ ಅಭಿವೃದ್ಧಿ ಸಚಿವರು ಮತ್ತು ಜಿಲ್ಲಾ ಉಸ್ತುವಾರಿ ಸಚಿವರಾದ ಡಾ.ಎಂ.ಬಿ. ಪಾಟೀಲ ಅವರು ಪ್ರಥಮ ಬಹುಮಾನವನ್ನು ಪ್ರದಾನ ಮಾಡಿದರು.
ಈ ಸಾಧನೆಗೆ ಕಾರಣರಾದ ವಿಭಾಗೀಯ ನಿಯಂತ್ರಣಾಧಿಕಾರಿ ಡಿ.ಎ. ಬಿರಾದಾರ, ವಿಭಾಗೀಯ ಸಾರಿಗೆ ಅಧಿಕಾರಿ ಎಂ.ಎಸ್. ಹಿರೇಮಠ, ವಿಭಾಗೀಯ ತಾಂತ್ರಿಕ ಅಧಿಕಾರಿ ಎ.ಎಚ್. ಮದಭಾವಿ ಸೇರಿದಂತೆ ನಿಗಮದ ಎಲ್ಲ ಅಧಿಕಾರಿಗಳು ಹಾಗೂ ತಾಂತ್ರಿಕ ಸಿಬ್ಬಂದಿಗೆ ವಿಭಾಗೀಯ ನಿಯಂತ್ರಣಾಧಿಕಾರಿಗಳು ಅಭಿನಂದನೆ ಸಲ್ಲಿಸಿದ್ದಾರೆ. ಸ್ತಬ್ಧಚಿತ್ರದ ಪರಿಕಲ್ಪನೆ ಮತ್ತು ನಿರ್ಮಾಣ ಕಾರ್ಯಕ್ಕೆ ಸಹಕರಿಸಿದ ಜಿಲ್ಲಾಡಳಿತದ ಹಿರಿಯ ಅಧಿಕಾರಿಗಳು, ಕನ್ನಡ ಕ್ರಿಯಾ ಸಮಿತಿಯ ಶಿವರಾಯ ಬೈಚಬಾಳ, ಬಸಲಿಂಗಪ್ಪ ಅಂಗಡಿ ಸೇರಿದಂತೆ ಎಲ್ಲರಿಗೂ ಕೃತಜ್ಞತೆ ಸಲ್ಲಿಸಲಾಗಿದೆ ಎಂದು ವಿಜಯಪುರ ವಿಭಾಗದ ಕಲ್ಯಾಣ ಕರ್ನಾಟಕ ರಸ್ತೆ ಸಾರಿಗೆ ನಿಗಮದ ವಿಭಾಗೀಯ ನಿಯಂತ್ರಣಾಧಿಕಾರಿಗಳ ಪ್ರಕಟಣೆ ತಿಳಿಸಿದೆ.

BIJAPUR NEWS bjp congress patil public public news udaya rashmi Udayarashmi today newspaper udayarashminews.com
Share. Facebook Twitter Pinterest Email Telegram WhatsApp
  • Website

Related Posts

ಉದಯರಶ್ಮಿ ಇಂದಿನ ದಿನಪತ್ರಿಕೆ ನವೆಂಬರ್ 07,2026

ರಾಜ್ಯ ಉಪಾಧ್ಯಕ್ಷರಾಗಿ ರಾವಸಾಬ ಐಹೊಳೆ ನೇಮಕ

ಕುಖ್ಯಾತ ರೌಡಿ ಮಾಳಪ್ಪ ದೇವಕತೆ ಬಂಧನ ಅವಧಿ ವಿಸ್ತರಣೆ

ಕೃಷ್ಣಾ-ಭೀಮಾ ತೀರದ ಕಬ್ಬಿಗೂ ೩೬೦೦ ರೂ. ದರ ಅನ್ವಯಿಸಲು ಹಕ್ಕೊತ್ತಾಯ

Add A Comment
Leave A Reply Cancel Reply

Categories
  • (ರಾಜ್ಯ ) ಜಿಲ್ಲೆ
  • Helldivers
  • Typora
  • Uncategorized
  • Wemod
  • ಆರೋಗ್ಯ
  • ಇತರೆ
  • ಕಾವ್ಯರಶ್ಮಿ
  • ಚಿಂತನ
  • ದಿನಪತ್ರಿಕೆ
  • ಪುಸ್ತಕ ಪರಿಚಯ
  • ಪ್ರೇಮಲೋಕ
  • ಭಾವರಶ್ಮಿ
  • ರಾಷ್ಚ್ರ
  • ವಿಜಯಪುರ
  • ವಿದ್ಯಾರ್ಥಿ ನಿಧಿ
  • ವಿಶೇಷ ಲೇಖನ
  • ಸಾಹಿತ್ಯ
  • ಸಿನಿಮಾ
  • ಹೊತ್ತಿಗೆ ಹೊರಣ
Recent Posts
  • ಉದಯರಶ್ಮಿ ಇಂದಿನ ದಿನಪತ್ರಿಕೆ ನವೆಂಬರ್ 07,2026
    In ದಿನಪತ್ರಿಕೆ
  • ರಾಜ್ಯ ಉಪಾಧ್ಯಕ್ಷರಾಗಿ ರಾವಸಾಬ ಐಹೊಳೆ ನೇಮಕ
    In (ರಾಜ್ಯ ) ಜಿಲ್ಲೆ
  • ಕುಖ್ಯಾತ ರೌಡಿ ಮಾಳಪ್ಪ ದೇವಕತೆ ಬಂಧನ ಅವಧಿ ವಿಸ್ತರಣೆ
    In (ರಾಜ್ಯ ) ಜಿಲ್ಲೆ
  • ಕೃಷ್ಣಾ-ಭೀಮಾ ತೀರದ ಕಬ್ಬಿಗೂ ೩೬೦೦ ರೂ. ದರ ಅನ್ವಯಿಸಲು ಹಕ್ಕೊತ್ತಾಯ
    In (ರಾಜ್ಯ ) ಜಿಲ್ಲೆ
  • ಸರ್ಕಾರಿ ಶಾಲಾ ಮಕ್ಕಳಿಗೆ ವಿಮಾನ ಪ್ರಯಾಣ ಭಾಗ್ಯ!
    In (ರಾಜ್ಯ ) ಜಿಲ್ಲೆ
  • ಪ್ರಾಯೋಗಿಕ ಕೌಶಲ ಬೆಳೆಸಿಕೊಂಡರೆ ಉದ್ಯೋಗಾವಕಾಶ ಹೆಚ್ಚಳ
    In (ರಾಜ್ಯ ) ಜಿಲ್ಲೆ
  • ಪ್ರತಿಭಾ ಅನ್ವೇಷಣೆ ಮಕ್ಕಳ ಶೈಕ್ಷಣಿಕ ಪ್ರಗತಿಗೆ ಪೂರಕ :ಪಾಟೀಲ
    In (ರಾಜ್ಯ ) ಜಿಲ್ಲೆ
  • ದತ್ತಾತ್ರೇಯ ದೇವಾಲಯದ ಸ್ತಬ್ಧಚಿತ್ರಕ್ಕೆ ಪ್ರಥಮ ಸ್ಥಾನ
    In (ರಾಜ್ಯ ) ಜಿಲ್ಲೆ
  • ಎಚ್‌ಐವಿ ತಡೆಗೆ ಅರಿವು ಮೂಡಿಸಿದ ಎನ್ನೆಸ್ಸೆಸ್ ಸ್ವಯಂಸೇವಕರು
    In (ರಾಜ್ಯ ) ಜಿಲ್ಲೆ
  • ಪೌರಕಾರ್ಮಿಕರಿಗೆ ಬಟ್ಟೆ ಹಾಗೂ ಸಿಹಿ ವಿತರಣೆ
    In (ರಾಜ್ಯ ) ಜಿಲ್ಲೆ
Editors Picks
Top Reviews
udayarashminews.com
Facebook X (Twitter) Instagram Pinterest Vimeo YouTube
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
© 2026 udayarashminews.com. Designed by udayarashmi news .

Type above and press Enter to search. Press Esc to cancel.