ಉದಯರಶ್ಮಿ ದಿನಪತ್ರಿಕೆ
ಅಥಣಿ: ರಾಜಕೀಯ, ಸಾಮಾಜಿಕ ಹಾಗೂ ಉದ್ಯಮ ಕ್ಷೇತ್ರಗಳಲ್ಲಿ ತಮ್ಮದೇ ಆದ ಛಾಪು ಮೂಡಿಸಿರುವ ಅಥಣಿಯ ಯುವ ನಾಯಕ, ಉದ್ಯಮಿ ಹಾಗೂ ಸಮಾಜಸೇವಕ ರಾವಸಾಬ ಐಹೊಳೆ ಅವರಿಗೆ ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿಯ ಪರಿಶಿಷ್ಟ ಜಾತಿ ವಿಭಾಗದ ರಾಜ್ಯ ಉಪಾಧ್ಯಕ್ಷರನ್ನಾಗಿ ನೇಮಕ ಮಾಡಿರುವುದು ಅಥಣಿ ತಾಲೂಕು ಸೇರಿದಂತೆ ಜಿಲ್ಲೆಯ ಕಾಂಗ್ರೆಸ್ ಕಾರ್ಯಕರ್ತರು, ಅಭಿಮಾನಿಗಳು ಹಾಗೂ ಯುವ ಸಮುದಾಯದಲ್ಲಿ ಸಂತಸ ಮತ್ತು ಹೊಸ ನಿರೀಕ್ಷೆ ಮೂಡಿಸಿದೆ.
ಎಐಸಿಸಿ ಪರಿಶಿಷ್ಟ ಜಾತಿ ವಿಭಾಗದ ರಾಷ್ಟ್ರೀಯ ಅಧ್ಯಕ್ಷ ರಾಜೇಂದ್ರಪಾಲ್ ಗೌತಮ ಅವರ ಮಾರ್ಗದರ್ಶನ ಹಾಗೂ ಆದೇಶದ ಮೇರೆಗೆ, ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿಯ ಅಧ್ಯಕ್ಷ ಬಿ.ಕೆ. ಹರಿಪ್ರಸಾದ ಅವರ ಅನುಮೋದನೆಯೊಂದಿಗೆ ಈ ನೇಮಕಾತಿ ಮಾಡಲಾಗಿದೆ.

