ಉದಯರಶ್ಮಿ ದಿನಪತ್ರಿಕೆ
ವಿಜಯಪುರ: ೨೦೨೬-೨೭ನೇ ಒಂದನೇ ಹಾಗೂ ಎರಡನೇ ತ್ರೈಮಾಸಿಕದ ಜಿಲ್ಲಾ ಮಟ್ಟದ ಕರ್ನಾಟಕ ಅಭಿವೃದ್ಧಿ ಕಾರ್ಯಕ್ರಮಗಳ (ಕೆಡಿಪಿ)
ಸಭೆಯು ಬೃಹತ್ ಮತ್ತು ಮಧ್ಯಮ ಕೈಗಾರಿಕೆ ಹಾಗೂ ಮೂಲಸೌಲಭ್ಯ ಅಭಿವೃದ್ಧಿ ಸಚಿವರು ಹಾಗೂ ಜಿಲ್ಲಾ ಉಸ್ತುವಾರಿ ಸಚಿವರಾದ ಡಾ.ಎಂ.ಬಿ.ಪಾಟೀಲ ಅವರ ಅಧ್ಯಕ್ಷತೆಯಲ್ಲಿ ನ.೨೧ ರಂದು ಬೆಳಿಗ್ಗೆ ೧೦:೩೦ಕ್ಕೆ ನಗರದ ಜಿಲ್ಲಾ ಪಂಚಾಯತಿಯ ಸಭಾಂಗಣದಲ್ಲಿ ಆಯೋಜಿಸಲಾಗಿದೆ ಎಂದು ಜಿಲ್ಲಾ ಪಂಚಾಯತಿಯ ಮುಖ್ಯ ಕಾರ್ಯ ನಿರ್ವಹಣಾಧಿಕಾರಿಗಳಾದ ಆನಂದ ಪ್ರಕಾಶ ಮೀನಾ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
