Close Menu
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ

Subscribe to Updates

Get the latest creative news from FooBar about art, design and business.

What's Hot

ವಿಜಯಪುರದಲ್ಲಿ ಮತ್ತೆ ಗುಂಡಿನ ಮೊರೆತ!

ಎಂಸಿಎ ಪ್ರವೇಶಕ್ಕೆ ಅರ್ಜಿ ಆಹ್ವಾನ

ಮಠಾಧೀಶರ ಒಕ್ಕೂಟದ ಚಿಂತನ ಮಂಥನ ಸಭೆ

Facebook X (Twitter) Instagram
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
Facebook X (Twitter) Instagram YouTube WhatsApp
udayarashminews.comudayarashminews.com
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
udayarashminews.comudayarashminews.com
Home»(ರಾಜ್ಯ ) ಜಿಲ್ಲೆ»ನ.15-16ರಂದು ಬೆಳಗಾವಿ ವಿಭಾಗ ಮಟ್ಟದ ಖೋ ಖೋ ಪಂದ್ಯಾವಳಿ
(ರಾಜ್ಯ ) ಜಿಲ್ಲೆ

ನ.15-16ರಂದು ಬೆಳಗಾವಿ ವಿಭಾಗ ಮಟ್ಟದ ಖೋ ಖೋ ಪಂದ್ಯಾವಳಿ

By No Comments2 Mins Read
Facebook Twitter Pinterest LinkedIn Telegram WhatsApp
Share
Facebook Twitter LinkedIn Email Telegram WhatsApp

ಮಸೂತಿಯಲ್ಲಿ ಪಂದ್ಯಾವಳಿ | 9 ಜಿಲ್ಲೆಗಳ 200ಕ್ಕೂ ಹೆಚ್ಚು ಕ್ರೀಡಾಪಟುಗಳು ಭಾಗಿ | ಸಿದ್ಧತೆ ಚುರುಕು

ಉದಯರಶ್ಮಿ ದಿನಪತ್ರಿಕೆ

ಕೊಲ್ಹಾರ: ಬೆಳಗಾವಿ ವಿಭಾಗ ಮಟ್ಟದ 17 ವರ್ಷ ವಯೋಮಿತಿಯ ಪ್ರೌಢಶಾಲಾ ಬಾಲಕ ಮತ್ತು ಬಾಲಕಿಯರ ಖೋ ಖೋ ಪಂದ್ಯಾವಳಿಯನ್ನು ನವೆಂಬರ್ 15 ಮತ್ತು 16ರಂದು ತಾಲೂಕಿನ ಮಸೂತಿ ಗ್ರಾಮದ ಶ್ರೀ ವೀರೇಶ್ವರ ವಿದ್ಯಾವರ್ಧಕ ಸಂಘದ ಅಡಿಯಲ್ಲಿ ನಡೆಯುತ್ತಿರುವ ಶ್ರೀ ಗುರು ಸಂಗನಬಸವೇಶ್ವರ ವಜ್ರ ಮಹೋತ್ಸವ ಪ್ರೌಢಶಾಲೆಯಲ್ಲಿ ಆಯೋಜಿಸಲಾಗಿದೆ ಎಂದು ಜಿಲ್ಲಾ ದೈಹಿಕ ಶಿಕ್ಷಣಾಧಿಕಾರಿ ಎಸ್.ಜೆ. ಬಿರಾದಾರ ತಿಳಿಸಿದರು.
ಮಸೂತಿ ಗ್ರಾಮದ ಶಾಲೆಯಲ್ಲಿ ನಡೆದ ಪಂದ್ಯಾವಳಿಯ ಪೂರ್ವಭಾವಿ ಸಭೆಯಲ್ಲಿ ಮಾತನಾಡಿದ ಅವರು, ಬೆಳಗಾವಿ ವಿಭಾಗದ ಒಂಬತ್ತು ಜಿಲ್ಲೆಗಳಿಂದ ಸುಮಾರು 200ಕ್ಕೂ ಹೆಚ್ಚು ಕ್ರೀಡಾಪಟುಗಳು, 50 ನಿರ್ಣಾಯಕರು ಹಾಗೂ 50ಕ್ಕೂ ಹೆಚ್ಚು ತಂಡಗಳ ಕೋಚ್ ಮತ್ತು ವ್ಯವಸ್ಥಾಪಕರು ಭಾಗವಹಿಸಲಿದ್ದಾರೆ. ಕ್ರೀಡಾಪಟುಗಳಿಗೆ ಊಟ, ವಸತಿ, ಕುಡಿಯುವ ನೀರು, ವೈದ್ಯಕೀಯ ಸೌಲಭ್ಯ ಹಾಗೂ ಸುಸಜ್ಜಿತ ಕ್ರೀಡಾಂಗಣದ ವ್ಯವಸ್ಥೆ ಕಲ್ಪಿಸಬೇಕು. ತಂಡಗಳ ನೋಂದಣಿ, ಮೇಲ್ವಿಚಾರಣೆ ಮತ್ತು ಸಾರಿಗೆ ವ್ಯವಸ್ಥೆಯನ್ನು ಅಚ್ಚುಕಟ್ಟಾಗಿ ನಿರ್ವಹಿಸುವ ಮೂಲಕ ಪಂದ್ಯಾವಳಿಯನ್ನು ಯಶಸ್ವಿಗೊಳಿಸಬೇಕು ಎಂದು ಸಲಹೆ ನೀಡಿದರು.
ಸಭೆಯ ಅಧ್ಯಕ್ಷತೆ ವಹಿಸಿದ್ದ ಶ್ರೀ ವೀರೇಶ್ವರ ವಿದ್ಯಾವರ್ಧಕ ಸಂಘದ ಅಧ್ಯಕ್ಷ ಸಂತೋಷ ಚನಗೊಂಡ ಮಾತನಾಡಿ, ಕಳೆದ ಮೂರು ವರ್ಷಗಳಿಂದ ಈ ಪಂದ್ಯಾವಳಿ ಆಯೋಜಿಸಲು ಪ್ರಯತ್ನಿಸುತ್ತಿದ್ದೆವು. ಈ ಬಾರಿ ಅವಕಾಶ ದೊರೆತಿದ್ದು, ಗ್ರಾಮಸ್ಥರು, ಕ್ರೀಡಾಭಿಮಾನಿಗಳು, ಯುವಕರು ಹಾಗೂ ಸಂಘ-ಸಂಸ್ಥೆಗಳ ಸಹಕಾರದೊಂದಿಗೆ ಕ್ರೀಡಾಕೂಟವನ್ನು ಯಶಸ್ವಿಯಾಗಿ ನಡೆಸಲಾಗುವುದು ಎಂದರು.
ನವೆಂಬರ್ 15ರಂದು ಎಲ್ಲ ತಂಡಗಳು ಆಗಮಿಸಲಿದ್ದು, ಸಂಜೆ 4 ಗಂಟೆಗೆ ಉದ್ಘಾಟನಾ ಸಮಾರಂಭ ನಡೆಯಲಿದೆ. ಬಳಿಕ ರಾತ್ರಿ ಎರಡು ಪಂದ್ಯಗಳನ್ನು ಆಡಿಸಲಾಗುವುದು. ನವೆಂಬರ್ 16ರಂದು ಬೆಳಿಗ್ಗೆ 8 ಗಂಟೆಯಿಂದ ಪಂದ್ಯಗಳು ಮುಂದುವರಿಯಲಿವೆ. ಈಗಾಗಲೇ ಊಟ, ಉಪಾಹಾರ ಹಾಗೂ ವಸತಿ ವ್ಯವಸ್ಥೆ ಸೇರಿದಂತೆ ಅಗತ್ಯ ಸಿದ್ಧತೆಗಳನ್ನು ಕೈಗೊಳ್ಳಲಾಗಿದೆ ಎಂದು ತಿಳಿಸಿದರು.
ಸಭೆಯಲ್ಲಿ ಡಾ. ಮಕಾನದಾರ, ಅಶೋಕ ಮಾಡಗಿ, ಬಿ.ಎನ್. ಹಿರೇಮಠ, ಶಂಕರ ಚವ್ಹಾಣ, ಸಂಗನಗೌಡ ಹಚಡದ, ಶ್ರೀಧರ ಜೋಶಿ, ತಾಲೂಕು ದೈಹಿಕ ಶಿಕ್ಷಣಾಧಿಕಾರಿಗಳಾದ ಆರ್.ಎಸ್. ನರೇಗಲ್, ಎಸ್.ಬಿ. ಕುಂಬಾರ, ಎಚ್.ಎಂ. ರಾಂಪುರ, ಎನ್.ಆರ್. ಚವ್ಹಾಣ, ರವಿಕುಮಾರ ನಿಲುಗಲ್, ಎಚ್.ಆರ್. ಪೆಂಡಾರಿ, ಎಸ್.ಎಸ್. ಅವಟಿ, ಶಾಲೆಯ ಮುಖ್ಯಶಿಕ್ಷಕ ಎಚ್.ಆರ್. ರಾಠೋಡ ಹಾಗೂ ದೈಹಿಕ ಶಿಕ್ಷಕ ಎಂ.ಜಿ. ಪಾಟೀಲ ಸೇರಿದಂತೆ ವಿವಿಧ ತಾಲೂಕುಗಳ ದೈಹಿಕ ಶಿಕ್ಷಣ ಶಿಕ್ಷಕರ ಸಂಘದ ಪದಾಧಿಕಾರಿಗಳು, ಕ್ರೀಡಾ ಸಂಘಟನೆಗಳ ಪ್ರತಿನಿಧಿಗಳು ಮತ್ತು ಶಿಕ್ಷಕರು ಉಪಸ್ಥಿತರಿದ್ದರು.
ಶಿಕ್ಷಕ ಗರಸಂಗಿ ಕಾರ್ಯಕ್ರಮ ನಿರೂಪಿಸಿದರು.

BIJAPUR NEWS bjp congress patil public public news udaya rashmi Udayarashmi today newspaper udayarashminews.com
Share. Facebook Twitter Pinterest Email Telegram WhatsApp
  • Website

Related Posts

ವಿಜಯಪುರದಲ್ಲಿ ಮತ್ತೆ ಗುಂಡಿನ ಮೊರೆತ!

ಎಂಸಿಎ ಪ್ರವೇಶಕ್ಕೆ ಅರ್ಜಿ ಆಹ್ವಾನ

ಮಠಾಧೀಶರ ಒಕ್ಕೂಟದ ಚಿಂತನ ಮಂಥನ ಸಭೆ

ಪ್ರತಿಭಾ ಕಾರಂಜಿ: ಜಾಲಗೇರಿ ಶಾಲೆಯ ವಿದ್ಯಾರ್ಥಿಗಳ ಸಾಧನೆ

Add A Comment
Leave A Reply Cancel Reply

Categories
  • (ರಾಜ್ಯ ) ಜಿಲ್ಲೆ
  • Helldivers
  • Typora
  • Uncategorized
  • Wemod
  • ಆರೋಗ್ಯ
  • ಇತರೆ
  • ಕಾವ್ಯರಶ್ಮಿ
  • ಚಿಂತನ
  • ದಿನಪತ್ರಿಕೆ
  • ಪುಸ್ತಕ ಪರಿಚಯ
  • ಪ್ರೇಮಲೋಕ
  • ಭಾವರಶ್ಮಿ
  • ರಾಷ್ಚ್ರ
  • ವಿಜಯಪುರ
  • ವಿದ್ಯಾರ್ಥಿ ನಿಧಿ
  • ವಿಶೇಷ ಲೇಖನ
  • ಸಾಹಿತ್ಯ
  • ಸಿನಿಮಾ
  • ಹೊತ್ತಿಗೆ ಹೊರಣ
Recent Posts
  • ವಿಜಯಪುರದಲ್ಲಿ ಮತ್ತೆ ಗುಂಡಿನ ಮೊರೆತ!
    In (ರಾಜ್ಯ ) ಜಿಲ್ಲೆ
  • ಎಂಸಿಎ ಪ್ರವೇಶಕ್ಕೆ ಅರ್ಜಿ ಆಹ್ವಾನ
    In (ರಾಜ್ಯ ) ಜಿಲ್ಲೆ
  • ಮಠಾಧೀಶರ ಒಕ್ಕೂಟದ ಚಿಂತನ ಮಂಥನ ಸಭೆ
    In (ರಾಜ್ಯ ) ಜಿಲ್ಲೆ
  • ಪ್ರತಿಭಾ ಕಾರಂಜಿ: ಜಾಲಗೇರಿ ಶಾಲೆಯ ವಿದ್ಯಾರ್ಥಿಗಳ ಸಾಧನೆ
    In (ರಾಜ್ಯ ) ಜಿಲ್ಲೆ
  • ನ.೧೭ ಹಾಗೂ ೧೮ರಂದು ಕಲಾ ಪ್ರತಿಭೋತ್ಸವ ಅರ್ಜಿ ಸಲ್ಲಿಸುವ ಅವಧಿ ವಿಸ್ತರಣೆ
    In (ರಾಜ್ಯ ) ಜಿಲ್ಲೆ
  • ಬಸವನ ಬಾಗೇವಾಡಿ, ನಿಡಗುಂದಿ, ಕೊಲ್ಹಾರ ತಾಲ್ಲೂಕಿನ ಸ್ಥಿರಾಸ್ತಿಗಳ ಪರಿಷ್ಕೃತ ದರಪಟ್ಟಿ ಪ್ರಕಟನ.೨೮ರವರೆಗೆ ಆಕ್ಷೇಪಣೆ ಸಲ್ಲಿಕೆಗೆ ಅವಕಾಶ
    In (ರಾಜ್ಯ ) ಜಿಲ್ಲೆ
  • ರೋಹಿತ್ ಲಮಾಣಿ ಕಿತ್ತೂರು ರಾಣಿ ಚೆನ್ನಮ್ಮ ವಿವಿ ಬ್ಲೂ
    In (ರಾಜ್ಯ ) ಜಿಲ್ಲೆ
  • 371(ಜೆ) ಮೀಸಲಾತಿ ನೀಡಲು ಸರಕಾರ ಮುಂದಾಗಬೇಕು
    In (ರಾಜ್ಯ ) ಜಿಲ್ಲೆ
  • ಶಾಸಕ ಬಸನಗೌಡ ರ 6 ತಿಂಗಳ ವೇತನ ಸಿಎಂ ಪರಿಹಾರ ನಿಧಿಗೆ
    In (ರಾಜ್ಯ ) ಜಿಲ್ಲೆ
  • ಬೆಂಕಿ ಅವಘಡ: ₹50 ಸಾವಿರ ಮೌಲ್ಯದ ಮೇವು ಭಸ್ಮ
    In (ರಾಜ್ಯ ) ಜಿಲ್ಲೆ
Editors Picks
Top Reviews
udayarashminews.com
Facebook X (Twitter) Instagram Pinterest Vimeo YouTube
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
© 2026 udayarashminews.com. Designed by udayarashmi news .

Type above and press Enter to search. Press Esc to cancel.