ಮುಖ್ಯಮಂತ್ರಿಗಳ ಕಾರ್ಯದರ್ಶಿಗೆ 6 ತಿಂಗಳ ವೇತನವಾದ ರೂ.4.83 ಪರಿಹಾರ ಚೆಕ್ ಹಸ್ತಾಂತರ
ಉದಯರಶ್ಮಿ ದಿನಪತ್ರಿಕೆ
ವಿಜಯಪುರ: ನಗರ ಶಾಸಕರಾದ ಬಸನಗೌಡ ಪಾಟೀಲ ಯತ್ನಾಳ ಅವರು ತಮ್ಮ 6 ತಿಂಗಳ ವೇತನವಾದ ರೂ.4.83 ಲಕ್ಷ ಚೆಕ್ ನ್ನು ಮುಖ್ಯಮಂತ್ರಿಗಳ ಪರಿಹಾರ ನಿಧಿ (ಬರ ಪರಿಹಾರ) ಶಾಖೆಗೆ ಶನಿವಾರ ಮುಖ್ಯಮಂತ್ರಿಗಳ ಕಾರ್ಯದರ್ಶಿ ಭುವನೇಶ್ವರಯ್ಯ ಅವರ ಮೂಲಕ ಹಸ್ತಾಂತರಿಸಿದರು.
ರಾಜ್ಯದಲ್ಲಿ ಮಳೆಯ ಅಭಾವದಿಂದ ತೀವ್ರ ಬರಗಾಲವನ್ನು ಎದುರಿಸುತ್ತಿದ್ದು, ಇದರಿಂದಾಗಿ ಅನ್ನದಾತರು ಬೆಳೆ ಬೆಳೆಯಲು ತೀವ್ರ ಸಂಕಷ್ಟ ಅನುಭವಿಸುತ್ತಿದ್ದಾರೆ. ಈ ವಿಷಯ ಕುರಿತು ಚರ್ಚಿಸಲು ಸೆಪ್ಟೆಂಬರ್ ತಿಂಗಳಲ್ಲಿ ಕರೆಯಲಾದ ವಿಶೇಷ ಅಧಿವೇಶನದಲ್ಲಿ ಮುಖ್ಯಮಂತ್ರಿಗಳು ರೈತರ ಪ್ರತಿ ಕುಟುಂಬಕ್ಕೆ ಕೇವಲ ರೂ.2,500 ಘೋಷಿಸಿದ್ದರು. ಆಗ ಶಾಸಕರಾದ ಬಸನಗೌಡ ಪಾಟೀಲ ಯತ್ನಾಳರು ಹೆಚ್ಚಿನ ಪರಿಹಾರ ಘೋಷಣೆಗೆ ಸರ್ಕಾರಕ್ಕೆ ಆಗ್ರಹಿಸಿದ್ದರು.
ಅಲ್ಲದೆ, ಸಂಕಷ್ಟದಲ್ಲಿರುವ ರೈತರಿಗೆ ಹೆಚ್ಚಿನ ಪರಿಹಾರ ಮೊತ್ತ ಘೋಷಿಸಬೇಕೆಂದು ಆಗ್ರಹಿಸಿ ಸಾವಿರಾರು ಸಂಖ್ಯೆಯ ರೈತರೊಂದಿಗೆ ವಿಜಯಪುರ ನಗರದ ಸಿದ್ದೇಶ್ವರ ದೇವಸ್ಥಾನದಿಂದ ಜಿಲ್ಲಾಧಿಕಾರಿಗಳ ಕಚೇರಿಗೆ ಬೃಹತ್ ಪ್ರತಿಭಟನಾ ಮೆರವಣಿಗೆ ಮೂಲಕ ತೆರಳಿ, ರಾಜ್ಯ ಸರ್ಕಾರಕ್ಕೆ ಮನವಿ ಸಲ್ಲಿಸಿದ ಬಳಿಕ ರೈತರನ್ನು ಉದ್ದೇಶಿಸಿ ಮಾತನಾಡುವಾಗ ಬೀಕರ ಬರದಿಂದ ಕಷ್ಟದಲ್ಲಿರುವ ರೈತರಿಗೆ ಹೆಚ್ಚಿನ ಬರ ಪರಿಹಾರ ನೀಡಲು ರಾಜ್ಯ ಸರ್ಕಾರಕ್ಕೆ ಆರ್ಥಿಕ ತೊಂದರೆ ಆಗುತ್ತಿದ್ದರೆ, ಅವರ ನೆರವಿಗಾಗಿ ತಮ್ಮ 6 ತಿಂಗಳ ವೇತನವನ್ನು ಮುಖ್ಯಮಂತ್ರಿಗಳ ಪರಿಹಾರ ನಿಧಿ (ಬರಗಾಲ)ಗೆ ನೀಡುವುದಾಗಿ ಘೋಷಿಸಿದ್ದರು.
ಅದರಂತೆ ಶನಿವಾರ ಮುಖ್ಯಮಂತ್ರಿಗಳ ಪರಿಹಾರ ನಿಧಿಯ ಹೆಸರಿನಲ್ಲಿರುವ ರೂ.4.83 ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾ, ಅನ್ನು ಮುಖ್ಯಮಂತ್ರಿಗಳ ಕಾರ್ಯದರ್ಶಿ ಅವರಿಗೆ ಹಸ್ತಾರಿಸಿ, ಸಂಕಷ್ಟದಲ್ಲಿರುವ ಅನ್ನದಾತರಿಗೆ ನೆರವಾಗಿದ್ದಾರೆ.

