ಉದಯರಶ್ಮಿ ದಿನಪತ್ರಿಕೆ
ವಿಜಯಪುರ: ಕಿತ್ತೂರು ರಾಣಿ ಚೆನ್ನಮ್ಮ ವಿಶ್ವವಿದ್ಯಾಲಯ, ಬೆಳಗಾವಿ ಇದರ ವ್ಯಾಪ್ತಿಗೆ ಬರುವ ಚಿಕ್ಕೋಡಿಯ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ (ಜಿಎಫ್ಜಿಸಿ) ನವೆಂಬರ್ ೨ರಂದು ನಡೆದ ‘ಬೆಳಗಾವಿ ಸಿಂಗಲ್ ಝೋನ್ ಪುರುಷ/ಮಹಿಳಾ ಟೈಕ್ವಾಂಡೋ ಸ್ಪರ್ಧೆಯಲ್ಲಿ ಬಿಎಲ್ಡಿಇ ಸಂಸ್ಥೆಯ ಎಸ್.ಬಿ. ಕಲಾ ಮತ್ತು ಕೆ.ಸಿ.ಪಿ ವಿಜ್ಞಾನ ಕಾಲೇಜಿನ ಪ್ರತಿಭಾವಂತ ವಿದ್ಯಾರ್ಥಿ ರೋಹಿತ್ ಲಮಾಣಿ ಪ್ರಥಮ ಸ್ಥಾನವನ್ನು ಪಡೆದುಕೊಂಡು ವಿಶ್ವವಿದ್ಯಾಲಯ ಬ್ಲೂ ಆಗಿ ಸಾಧನೆ ಮಾಡಿದ್ದಾನೆ.
ಈ ಸಾಧನೆಗೆ ಕಾಲೇಜಿನ ಪ್ರಾಚಾರ್ಯ ಡಾ. ಶ್ರೀನಿವಾಸ್ ಎ. ಟಿ. ದೈಹಿಕ ಶಿಕ್ಷಣ ನಿರ್ದೇಶಕರಾದ ಪ್ರೊ. ಎಸ. ಎ. ಪಾಟೀಲ್,ಐ.ಕ್ಯೂ.ಎ.ಸಿ ಸಂಯೋಜಕ ಡಾ. ಪಿ. ಎಸ್. ಪಾಟೀಲ ಆಡಳಿತ ಮಂಡಳಿ, ಬೋಧಕ ಮತ್ತು ಬೋಧಕೇತರ ಸಿಬ್ಬಂದಿ ವರ್ಗದವರು, ವಿದ್ಯಾರ್ಥಿಯ ಸಾಧನೆಗೆ ತಮ್ಮ ಹೃತ್ಪೂರ್ವಕ ಅಭಿನಂದನೆಗಳನ್ನು ಸಲ್ಲಿಸಿದ್ದಾರೆ.

