ಉದಯರಶ್ಮಿ ದಿನಪತ್ರಿಕೆ
ವಿಜಯಪುರ: ಕನ್ನಡ ಮತ್ತು ಸಂಸ್ಕೃತಿ ಇಲಾಖೆ ವತಿಯಿಂದ ಮಕ್ಕಳ ಹಾಗೂ ಯುವಜನರಲ್ಲಿರುವ ಕಲಾ ಪ್ರತಿಭೆಯನ್ನು ಗುರುತಿಸಿ, ಪ್ರೋತ್ಸಾಹಿಸುವ ಉದ್ದೇಶದಿಂದ ಕಲಾ ಪ್ರತಿಭೋತ್ಸವ ಕಾರ್ಯಕ್ರಮವನ್ನು ನವೆಂಬರ್ ೧೭ ಹಾಗೂ ೧೮ರಂದು ವಿಜಯಪುರ ನಗರದ ಕಂದಗಲ್ ಶ್ರೀ ಹನುಮಂತರಾಯ ರಂಗಮಂದಿರದಲ್ಲಿ ಆಯೋಜಿಸಲಾಗಿದೆ.
ಬಾಲ ಪ್ರತಿಭೆ, ಕಿಶೋರ ಪ್ರತಿಭೆ ಹಾಗೂ ಯುವ ಪ್ರತಿಭೆಗಳ ವಿಭಾಗಗಳಲ್ಲಿ ಭಾಗವಹಿಸಲು ಆಸಕ್ತರು ಅಗತ್ಯ ದಾಖಲೆಗಳ ಸಹಿತ ನವೆಂಬರ್ ೧೩ರ ಸಂಜೆ ೫.೩೦ರೊಳಗೆ ಸಹಾಯಕ ನಿರ್ದೇಶಕರು, ಕನ್ನಡ ಮತ್ತು ಸಂಸ್ಕೃತಿ ಇಲಾಖೆ, ಕಂದಗಲ್ ಶ್ರೀ ಹನುಮಂತರಾಯ ರಂಗಮAದಿರ, ಸ್ಟೇಷನ್ ರಸ್ತೆ, ವಿಜಯಪುರ ಇಲ್ಲಿಗೆ ಖುದ್ದಾಗಿ ಅರ್ಜಿ ಸಲ್ಲಿಸಬೇಕು ಎಂದು ಪ್ರಕಟಣೆ ತಿಳಿಸಿದೆ.
