ಉದಯರಶ್ಮಿ ದಿನಪತ್ರಿಕೆ
ವಿಜಯಪುರ: ನಗರದ ಬಂಜಾರ ದೈಹಿಕ ಶಿಕ್ಷಣ ಕಾಲೇಜಿನ ಆಶ್ರಯದಲ್ಲಿ ಅ.೨೭ ರಂದು ನಡೆದ ಕಿತ್ತೂರು ರಾಣಿ ಚೆನ್ನಮ್ಮ ವಿಶ್ವವಿದ್ಯಾಲಯ (ಬೆಳಗಾವಿ) ಮಟ್ಟದ ಸ್ಪರ್ಧೆಯಲ್ಲಿ ಬಿಎಲ್ಡಿಇ ಸಂಸ್ಥೆಯ ಎಸ್.ಬಿ. ಕಲಾ ಮತ್ತು ಕೆ.ಸಿ.ಪಿ ವಿಜ್ಞಾನ ಕಾಲೇಜಿನ ಪ್ರತಿಭಾವಂತ ಬಿ.ಎ. ವಿದ್ಯಾರ್ಥಿಗಳಾದ ಭೀರಪ್ಪ ನಾಟಿಕಾರ್ ೧೧೦ ಮೀಟರ್ ಹರ್ಡಲ್ಸ್ (ಅಡೆತಡೆ ಓಟ) ಸ್ಪರ್ಧೆಯಲ್ಲಿ ದ್ವಿತೀಯ ಸ್ಥಾನ. ಹಾಗೂ ತೇಜಸ್ವಿನಿ ರಾಠೋಡ್ ‘ಸಿಂಗಲ್ ಝೋನ್’ ಬಾಸ್ಕೆಟ್ಬಾಲ್ ಪಂದ್ಯಾವಳಿ ಹಾಗೂ ಆಯ್ಕೆ ಪ್ರಕ್ರಿಯೆಯಲ್ಲಿ ಯೂನಿವರ್ಸಿಟಿ ಬ್ಲೂ’ ಆಗಿ ಸಾಧನೆ ಮಾಡಿದ್ದಾರೆ. ಇವರ ಈ ಸಾಧನೆಯು ಕಾಲೇಜಿಗೆ ಕೀರ್ತಿ ಮತ್ತು ಗೌರವವನ್ನು ಹೆಚ್ಚಿಸಿದೆ. ಈ ಸಾಧನೆಗೆ ಕಾಲೇಜಿನ ಪ್ರಾಚಾರ್ಯ ಡಾ. ಶ್ರೀನಿವಾಸ್ ಎ. ಟಿ, ದೈಹಿಕ ಶಿಕ್ಷಣ ನಿರ್ದೇಶಕ ಪ್ರೊ. ಎಸ್. ಎ. ಪಾಟೀಲ್,ಐಕ್ಯೂಎಸಿ ಸಂಯೋಜಕ ಡಾ.ಪಿ.ಎಸ್.ಪಾಟೀಲ ಕಾಲೇಜಿನ ಆಡಳಿತ ಮಂಡಳಿ ಹಾಗೂ ಎಲ್ಲಾ ಬೋಧಕ ಮತ್ತು ಬೋಧಕೇತರ ಸಿಬ್ಬಂದಿ ಹರ್ಷ ವ್ಯಕ್ತಪಡಿಸಿ ಅಭಿನಂದಿಸಿದ್ದಾರೆ.

