ನ.೨೮ರವರೆಗೆ ಆಕ್ಷೇಪಣೆ ಸಲ್ಲಿಸಲು ಅವಕಾಶ
ಉದಯರಶ್ಮಿ ದಿನಪತ್ರಿಕೆ
ವಿಜಯಪುರ: ಸಿಂದಗಿ ಉಪ ನೋಂದಣಾಧಿಕಾರಿಗಳ ಕಚೇರಿ ವ್ಯಾಪ್ತಿಯಲ್ಲಿನ ಸ್ಥಿರಾಸ್ತಿಗಳ ಮಾರುಕಟ್ಟೆ ಮೌಲ್ಯದ ಮಾರ್ಗಸೂಚಿ ದರಗಳನ್ನು ಪರಿಷ್ಕರಿಸಿ ಕರಡು ಪಟ್ಟಿ ಪ್ರಕಟಿಸಲಾಗಿದ್ದು, ಈ ಕುರಿತು ಸಾರ್ವಜನಿಕರಿಂದ ಸಲಹೆ, ಸೂಚನೆ ಹಾಗೂ ಆಕ್ಷೇಪಣೆಗಳನ್ನು ಆಹ್ವಾನಿಸಲಾಗಿದೆ.
ಕರ್ನಾಟಕ ಮುದ್ರಾಂಕ (ಅಂದಾಜು, ಪ್ರಕಟಣೆ ಮತ್ತು ಸ್ಥಿರಾಸ್ತಿಗಳ ಮಾರುಕಟ್ಟೆ ಮೌಲ್ಯದ ಮಾರ್ಗಸೂಚಿಗಳ ಪರಿಷ್ಕರಣೆಗಾಗಿ ಕೇಂದ್ರ ಮೌಲ್ಯಮಾಪನ ಸಮಿತಿ ರಚನೆ) ನಿಯಮಗಳು, ೨೦೦೩ರ ನಿಯಮ ೪(೧)ರಡಿ ರಚಿಸಲಾದ ಸಿಂದಗಿ ತಾಲೂಕು ಸ್ಥಿರಾಸ್ತಿಗಳ ಮಾರುಕಟ್ಟೆ ಮೌಲ್ಯಮಾಪನ ಉಪ ಸಮಿತಿಯು ನವೆಂಬರ್ ೬ರಂದು ತಹಶೀಲ್ದಾರರ ಅಧ್ಯಕ್ಷತೆಯಲ್ಲಿ ಸಭೆ ನಡೆಸಿ ಮಾರ್ಗಸೂಚಿ ದರಗಳ ಪರಿಷ್ಕರಿಸಲಾಗಿದೆ.
ಅದರಂತೆ ಪರಿಷ್ಕೃತ ಮಾರ್ಗಸೂಚಿ ದರಗಳ ಕರಡು ಪ್ರತಿಯನ್ನು ನವೆಂಬರ್ ೯ರಂದು ಪ್ರಾಥಮಿಕ ಗೆಜೆಟ್ ಅಧಿಸೂಚನೆ ಮೂಲಕ ಪ್ರಕಟಿಸಲಾಗಿದ್ದು, ಈ ಪ್ರತಿ ಸಿಂದಗಿ ಉಪ ನೋಂದಣಾಧಿಕಾರಿಗಳ ಕಚೇರಿಯಲ್ಲಿ ಸಾರ್ವಜನಿಕರ ಮಾಹಿತಿಗಾಗಿ ಲಭ್ಯವಿದೆ.
ಪರಿಷ್ಕೃತ ದರಗಳ ಕುರಿತು ಸಾರ್ವಜನಿಕರು ತಮ್ಮ ಸಲಹೆ, ಸೂಚನೆ ಹಾಗೂ ಆಕ್ಷೇಪಣೆಗಳನ್ನು ನವೆಂಬರ್ ೨೮ರೊಳಗೆ ಉಪ ನೋಂದಣಾಧಿಕಾರಿ ಹಾಗೂ ಸದಸ್ಯ ಕಾರ್ಯದರ್ಶಿಗಳು, ತಾಲೂಕು ಸ್ಥಿರಾಸ್ತಿಗಳ ಮಾರುಕಟ್ಟೆ ಮೌಲ್ಯಮಾಪನ ಉಪ ಸಮಿತಿ, ಸಿಂದಗಿ ಇವರಿಗೆ ಲಿಖಿತ ರೂಪದಲ್ಲಿ ಸಲ್ಲಿಸಬಹುದಾಗಿದೆ ಎಂದು ಪ್ರಕಟಣೆ ತಿಳಿಸಿದೆ.
