ಮುದ್ದೇಬಿಹಾಳ-ತಾಳಿಕೋಟೆ ತಾಲೂಕುಗಳ ಸ್ಥಿರಾಸ್ತಿಗಳ ಮಾರ್ಗಸೂಚಿ ಬೆಲೆ ಪರಿಷ್ಕರಣೆಗೆ ಕರಡು ಪಟ್ಟಿ ಪ್ರಕಟಣೆ
ಉದಯರಶ್ಮಿ ದಿನಪತ್ರಿಕೆ
ವಿಜಯಪುರ: ೨೦೨೬-೨೭ನೇ ಸಾಲಿಗೆ ಮುದ್ದೇಬಿಹಾಳ ಉಪ ನೋಂದಣಿ ಕಚೇರಿ ವ್ಯಾಪ್ತಿಯ ಮುದ್ದೇಬಿಹಾಳ ಹಾಗೂ ತಾಳಿಕೋಟೆ ತಾಲೂಕುಗಳ ನಗರ ಮತ್ತು ಗ್ರಾಮಾಂತರ ಪ್ರದೇಶಗಳ ಸ್ಥಿರಾಸ್ತಿಗಳ ಮಾರ್ಗಸೂಚಿ ಬೆಲೆ ಪರಿಷ್ಕರಣೆಗೆ ಸಂಬಂಧಿಸಿದಂತೆ ಕರಡು ಪಟ್ಟಿಯನ್ನು ಸಿದ್ಧಪಡಿಸಿ ಸಾರ್ವಜನಿಕರ ಮಾಹಿತಿಗಾಗಿ ಪ್ರಕಟಿಸಲಾಗಿದೆ.ಮುದ್ದೇಬಿಹಾಳ ಹಾಗೂ ತಾಳಿಕೋಟೆ ತಾಲೂಕುಗಳ ಸ್ಥಿರಾಸ್ತಿಗಳ ಮಾರ್ಗಸೂಚಿ ಬೆಲೆ ನಿರ್ಧರಣಾ ಉಪಸಮಿತಿಯ ಸಭೆಯಲ್ಲಿ ಕೈಗೊಂಡ ನಿರ್ಧಾರಗಳ ಆಧಾರದ ಮೇಲೆ ಕರಡು ಪಟ್ಟಿ ಸಿದ್ಧಪಡಿಸಲಾಗಿದೆ. ನಗರ ಹಾಗೂ ಗ್ರಾಮಾಂತರ ಪ್ರದೇಶಗಳ ಸ್ಥಿರಾಸ್ತಿಗಳ ಪರಿಷ್ಕೃತ ಮಾರ್ಗಸೂಚಿ ಬೆಲೆ ನಿಗದಿಪಡಿಸುವ ಪ್ರಕ್ರಿಯೆ ಕೈಗೊಳ್ಳಲಾಗಿದೆ.
ಕರಡು ಪಟ್ಟಿಗೆ ಸಂಬಂಧಿಸಿದಂತೆ ಸಾರ್ವಜನಿಕರು ತಮ್ಮ ಸಲಹೆ, ಆಕ್ಷೇಪಣೆ ಹಾಗೂ ತಿದ್ದುಪಡಿ ಸಲ್ಲಿಸಲು ನವೆಂಬರ್ ೯ರಿಂದ ೨೮ರವರೆಗೆ ಅವಕಾಶ ಕಲ್ಪಿಸಲಾಗಿದೆ. ನಿಗದಿತ ಅವಧಿಯೊಳಗೆ ಮುದ್ದೇಬಿಹಾಳ ಉಪ ನೋಂದಣಾಧಿಕಾರಿಗಳ ಕಚೇರಿಗೆ ಆಕ್ಷೇಪಣೆ ಸಲ್ಲಿಸಬಹುದಾಗಿದೆ ಎಂದು ಮುದ್ದೇಬಿಹಾಳ ಉಪ ನೋಂದಣಾಧಿಕಾರಿಗಳು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
