Close Menu
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ

Subscribe to Updates

Get the latest creative news from FooBar about art, design and business.

What's Hot

ಮಕ್ಕಳಲ್ಲಿ ಸಂಶೋಧನಾ ಆಸಕ್ತಿ ಬೆಳೆಸಲು ವಿಜ್ಞಾನ ಸಮಾವೇಶ ಸಹಕಾರಿ

ಸಕ್ಕರೆ ಕಾರ್ಖಾನೆ ಎದುರು ರೈತರ ಬೃಹತ್ ಪ್ರತಿಭಟನೆ

ಮಾರ್ಕಬ್ಬಿನಹಳ್ಳಿ: ಪ್ರಜಾಸೇವೆ ಆಂದೋಲನ ಸಭೆಗೆ ಚಾಲನೆ

Facebook X (Twitter) Instagram
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
Facebook X (Twitter) Instagram YouTube WhatsApp
udayarashminews.comudayarashminews.com
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
udayarashminews.comudayarashminews.com
Home»(ರಾಜ್ಯ ) ಜಿಲ್ಲೆ»ದೇವರಹಿಪ್ಪರಗಿಯಲ್ಲಿ ದೀಪಾವಳಿ ಹಬ್ಬದ ಸಂಭ್ರಮ
(ರಾಜ್ಯ ) ಜಿಲ್ಲೆ

ದೇವರಹಿಪ್ಪರಗಿಯಲ್ಲಿ ದೀಪಾವಳಿ ಹಬ್ಬದ ಸಂಭ್ರಮ

By No Comments1 Min Read
Facebook Twitter Pinterest LinkedIn Telegram WhatsApp
Share
Facebook Twitter LinkedIn Email Telegram WhatsApp

ಉದಯರಶ್ಮಿ ದಿನಪತ್ರಿಕೆ

ದೇವರಹಿಪ್ಪರಗಿ: ಬೆಳಕಿನ ಹಬ್ಬ ದೀಪಾವಳಿಯ ಅಮವಾಸ್ಯೆ ಪೂಜೆಯ ಅಂಗವಾಗಿ ಹೂ, ಹಣ್ಣು, ಕುಂಬಳಕಾಯಿ ಸೇರಿದಂತೆ ಪಟಾಕಿ, ಅಲಂಕಾರಿಕ ವಸ್ತುಗಳ ದರ ಹೆಚ್ಚಾಗಿದ್ದರೂ, ಮಾರಾಟ ಮಾತ್ರ ಮಂದವಾಗಿ ಕಂಡು ಬಂತು.
ಪಟ್ಟಣದಲ್ಲಿ ದೀಪಾವಳಿ ಅಮವಾಸ್ಯೆಯನ್ನು ಭಾನುವಾರ ಹಾಗೂ ಸೋಮವಾರ ಎರಡು ದಿನಗಳಂದು ಆಚರಿಸಲಾಗುತ್ತಿದೆ. ವ್ಯಾಪಾರಸ್ಥರು ತಮ್ಮ ಅಂಗಡಿ, ಮಾರಾಟ ಮಳಿಗೆಗೆಳ ಲಕ್ಷ್ಮಿ ಪೂಜೆಗಾಗಿ ಬಾಳೇಗಿಡ, ಕಬ್ಬು, ತೆಂಗಿನ ಪರಕೆ, ಶೃಂಗಾರ ವಸ್ತಗಳ ಸಹಿತ ಖಾತೆಪುಸ್ತಕ, ಹೂಹಣ್ಣುಗಳನ್ನು ಭಾನುವಾರ ಹಾಗೂ ಸೋಮವಾರ ಬೆಳಿಗ್ಗೆಯೇ ಖರೀದಿಸಿದರು. ಪೂಜೆಗಾಗಿ ರಾತ್ರಿ ಅಂಗಡಿ ಮಳಿಗೆಗಳನ್ನು ಹೂ-ಹಾರ, ವಿದ್ಯುತ್ ದೀಪಗಳೊಂದಿಗೆ ಸಿಂಗರಿಸಿದರು. ಹೊಸ ಬಟ್ಟೆಗಳನ್ನು ಧರಿಸಿ ಮನೆ ಮಂದಿಯೆಲ್ಲಾ ಪೂಜಾ ಕಾರ್ಯಕ್ರಮದಲ್ಲಿ ಪಾಲ್ಗೊಂಡರು. ಮಹಿಳೆಯರು ವಿಶೇಷವಾಗಿ ಮುತೈದಿಯರ ಪೂಜೆಯಲ್ಲಿ ನಿರತರಾಗಿದ್ದರೆ, ಮಕ್ಕಳು ಪಟಾಕಿ ಸಿಡಿಸಿ ಸಂಭ್ರಮಿಸಿದರು.
ಸಂಜೆ ಆರಂಭಗೊಂಡ ಪೂಜಾ ವಿಧಿವಿಧಾನಗಳು ತಡ ಮಧ್ಯರಾತ್ರಿಯವರೆಗೆ ಜರುಗಿದವು.
ಸೋಮವಾರ ಸೂರ್ಯೋದಯದೊಂದಿಗೆ ಅಮವಾಸ್ಯೆ ಆರಂಭಗೊಳ್ಳುತ್ತಿದ್ದು ಮನೆಗಳಲ್ಲಿ ಲಕ್ಷ್ಮಿ ಪೂಜೆಯ ಅಂಗವಾಗಿ ಹೂ-ಹಾರಗಳನ್ನು ಖರೀದಿಸಲು ಜನ ಬೆಳಿಗ್ಗೆಯೇ ಆಗಮಿಸಿದ್ದರು. ಇದರಿಂದ ಭಾನುವಾರ ಮಾರುಕಟ್ಟೆಯಲ್ಲಿ ಜಾತ್ರೆಯಂತೆ ಜನಸಂದಣಿ ಕಂಡು ಬಂತು. ಚೆಂಡು ಹೂವು, ಶಾವಂತಿಗೆ ಹೂಗಳ ಬೆಲೆ ಕಿಲೋ ಒಂದಕ್ಕೆ ೧೦೦ರಿಂದ ೨೦೦ ರೂ, ಬಾಳೆದಿಂಡು ಜೋಡಿ ಒಂದಕ್ಕೆ ೪೦-೧೦೦ ರೂ, ಐದು ತರದ ಹಣ್ಣುಗಳಿಗೆ ೪೦-೨೫೦ ರೂ, ಕುಂಬಳಕಾಯಿ ೫೦-೧೦೦ ರೂ, ಹೂವಿನ ಹಾರ ೪೦-೧೦೦ರೂ, ಗಳವರೆಗೆ ಮಾರಲ್ಪಟ್ಟವು.
ಅಮವಾಸ್ಯೆ ದಿನ ಮಹಿಳೆಯರು ಸೇರಿದಂತೆ ಮನೆಯವರೆಲ್ಲರೂ ಮನೆ, ಅಂಗಡಿ, ವಾಹನಗಳನ್ನು ಹೂಗಳಿಂದ ತಳಿರು ತೋರಣಗಳನ್ನು ಸಿದ್ಧಪಡಿಸಿ ಸಿಂಗರಿಸಿದರು. ನಂತರ ಶಾಸ್ತ್ರೋಕ್ತವಾಗಿ ಲಕ್ಷ್ಮಿ ಪೂಜೆ ಕೈಗೊಂಡು ನಂತರ ಮುತೈದೆಯರಿಗೆ ಹಾಗೂ ಬಾಲ ಮುತೈದೆಯರಿಗೆ ಉಡಿತುಂಬುವ ಕಾರ್ಯಕ್ರಮಗಳನ್ನು ನೆರವೇರಿಸಿದರು. ಚಿಕ್ಕ ಮಕ್ಕಳು ಹೊಸ ಬಟ್ಟೆಗಳೊಂದಿಗೆ ಪಟಾಕಿ ಸಿಡಿಸಿ ಸಂಭ್ರಮಿಸಿದರು.

BIJAPUR NEWS bjp congress patil public public news udaya rashmi Udayarashmi today newspaper udayarashminews.com
Share. Facebook Twitter Pinterest Email Telegram WhatsApp
  • Website

Related Posts

ಮಕ್ಕಳಲ್ಲಿ ಸಂಶೋಧನಾ ಆಸಕ್ತಿ ಬೆಳೆಸಲು ವಿಜ್ಞಾನ ಸಮಾವೇಶ ಸಹಕಾರಿ

ಸಕ್ಕರೆ ಕಾರ್ಖಾನೆ ಎದುರು ರೈತರ ಬೃಹತ್ ಪ್ರತಿಭಟನೆ

ಮಾರ್ಕಬ್ಬಿನಹಳ್ಳಿ: ಪ್ರಜಾಸೇವೆ ಆಂದೋಲನ ಸಭೆಗೆ ಚಾಲನೆ

ಭಂಡಾರದಲ್ಲಿ ಮಿಂದೆದ್ದ ಭಕ್ತ ಸಮೂಹ ಹಳದಿಮಯ

Add A Comment
Leave A Reply Cancel Reply

Categories
  • (ರಾಜ್ಯ ) ಜಿಲ್ಲೆ
  • Helldivers
  • Typora
  • Uncategorized
  • Wemod
  • ಆರೋಗ್ಯ
  • ಇತರೆ
  • ಕಾವ್ಯರಶ್ಮಿ
  • ಚಿಂತನ
  • ದಿನಪತ್ರಿಕೆ
  • ಪುಸ್ತಕ ಪರಿಚಯ
  • ಪ್ರೇಮಲೋಕ
  • ಭಾವರಶ್ಮಿ
  • ರಾಷ್ಚ್ರ
  • ವಿಜಯಪುರ
  • ವಿದ್ಯಾರ್ಥಿ ನಿಧಿ
  • ವಿಶೇಷ ಲೇಖನ
  • ಸಾಹಿತ್ಯ
  • ಸಿನಿಮಾ
  • ಹೊತ್ತಿಗೆ ಹೊರಣ
Recent Posts
  • ಮಕ್ಕಳಲ್ಲಿ ಸಂಶೋಧನಾ ಆಸಕ್ತಿ ಬೆಳೆಸಲು ವಿಜ್ಞಾನ ಸಮಾವೇಶ ಸಹಕಾರಿ
    In (ರಾಜ್ಯ ) ಜಿಲ್ಲೆ
  • ಸಕ್ಕರೆ ಕಾರ್ಖಾನೆ ಎದುರು ರೈತರ ಬೃಹತ್ ಪ್ರತಿಭಟನೆ
    In (ರಾಜ್ಯ ) ಜಿಲ್ಲೆ
  • ಮಾರ್ಕಬ್ಬಿನಹಳ್ಳಿ: ಪ್ರಜಾಸೇವೆ ಆಂದೋಲನ ಸಭೆಗೆ ಚಾಲನೆ
    In (ರಾಜ್ಯ ) ಜಿಲ್ಲೆ
  • ದೇವರಹಿಪ್ಪರಗಿಯಲ್ಲಿ ದೀಪಾವಳಿ ಹಬ್ಬದ ಸಂಭ್ರಮ
    In (ರಾಜ್ಯ ) ಜಿಲ್ಲೆ
  • ಭಂಡಾರದಲ್ಲಿ ಮಿಂದೆದ್ದ ಭಕ್ತ ಸಮೂಹ ಹಳದಿಮಯ
    In (ರಾಜ್ಯ ) ಜಿಲ್ಲೆ
  • ಮಲಕಾರಿಸಿದ್ಧ – ಲಗಮವ್ವ ದೇವಿ ಭೇಟಿ ಸಂಪನ್ನ
    In (ರಾಜ್ಯ ) ಜಿಲ್ಲೆ
  • ನ.೨೮ರವರೆಗೆ ಸಾರ್ವಜನಿಕರಿಂದ ಸಲಹೆ, ಆಕ್ಷೇಪಣೆ ಸಲ್ಲಿಸಲು ಅವಕಾಶ
    In (ರಾಜ್ಯ ) ಜಿಲ್ಲೆ
  • ಸಿಂದಗಿ: ಸ್ಥಿರಾಸ್ತಿಗಳ ಮಾರ್ಗಸೂಚಿ ದರ ಪರಿಷ್ಕರಣೆ
    In (ರಾಜ್ಯ ) ಜಿಲ್ಲೆ
  • ನ.೨೮ರವರೆಗೆ ಆಕ್ಷೇಪಣೆ ಸಲ್ಲಿಸಲು ಅವಕಾಶ
    In (ರಾಜ್ಯ ) ಜಿಲ್ಲೆ
  • ಕಬ್ಬು ಬೆಲೆ ನಿಗದಿಯಲ್ಲಿ ವಿಜಯಪುರ ರೈತರಿಗೆ ತಾರತಮ್ಯ
    In (ರಾಜ್ಯ ) ಜಿಲ್ಲೆ
Editors Picks
Top Reviews
udayarashminews.com
Facebook X (Twitter) Instagram Pinterest Vimeo YouTube
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
© 2026 udayarashminews.com. Designed by udayarashmi news .

Type above and press Enter to search. Press Esc to cancel.