ಉದಯರಶ್ಮಿ ದಿನಪತ್ರಿಕೆ
ದೇವರಹಿಪ್ಪರಗಿ: ಪ್ರಜಾಸೇವೆ ಆಂದೋಲನದ ಮೂಲಕ ಗ್ರಾಮಸ್ಥರು ತಮ್ಮ ಕುಂದುಕೊರತೆಗಳಿಗೆ ಪರಿಹಾರ ಕಂಡುಕೊಳ್ಳಬಹುದಾಗಿದೆ ಎಂದು ಗ್ರೇಡ್-೨ ತಹಶೀಲ್ದಾರ್ ಎಮ್.ಜಿ. ಬಿರಾದಾರ, ಹೇಳಿದರು.
ತಾಲ್ಲೂಕಿನ ಮಾರ್ಕಬ್ಬಿನಹಳ್ಳಿ ಗ್ರಾಮದಲ್ಲಿ ಶನಿವಾರ ಜಿಲ್ಲಾಡಳಿತ, ಜಿಲ್ಲಾ ಪಂಚಾಯಿತಿ ವಿಜಯಪುರ, ತಾಲ್ಲೂಕು ಆಡಳಿತ, ತಾಲ್ಲೂಕು ಪಂಚಾಯಿತಿ ದೇವರಹಿಪ್ಪರಗಿ ಅಡಿಯಲ್ಲಿ ಜರುಗಿದ ಪ್ರಜಾ ಸೇವೆ ಆಂದೋಲನ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು.
ಸಾರ್ವಜನಿಕರ ಸಮಸ್ಯೆಗಳಿಗೆ ಸಂಬಂಧಿಸಿದ ಇಲಾಖೆಯ ಅಧಿಕಾರಿಗಳು ಅಗತ್ಯ ಮಾಹಿತಿ ಸಂಗ್ರಹಿಸಬೇಕು ಎಂದರು.
ಸಭೆಯಲ್ಲಿ ವಿವಿಧ ಇಲಾಖೆಯ ಕುಂದುಕೊರತೆಗಳ ಕುರಿತು ರೈತರು ಮತ್ತು ಸಾರ್ವಜನಿಕರು ಅಹವಾಲುಗಳನ್ನು ಸಲ್ಲಿಸಿದರು.
ಒಟ್ಟು ೨೨ ಅರ್ಜಿಗಳು ಸ್ವೀಕೃತವಾಗಿದ್ದು ಅವುಗಳಲಿ ್ಲಕೆಲವು ಅರ್ಜಿಗಳನ್ನು ಸ್ಥಳದಲ್ಲಿಯೇ ಇತ್ಯರ್ಥ ಪಡಿಸಲಾಯಿತು. ಬಾಕಿ ಉಳಿದ ಅರ್ಜಿಗಳನ್ನು ಮುಂದಿನ ಕ್ರಮಕ್ಕಾಗಿ ಸಂಬಂದಿಸಿದ ಇಲಾಖೆಗಳಿಗೆ ವರ್ಗಾಯಿಸಲಾಯಿತು.
ತಾಲ್ಲೂಕು ಪಂಚಾಯಿತಿ ಇಓ ಭಾರತಿ ಚೆಲುವಯ್ಯ , ಶಿರಸ್ತೇದಾರ ಸುರೇಶ ಮ್ಯಾಗೇರಿ, ಸಿಂದಗಿ ತಾಲ್ಲೂಕು ಭೂದಾಖಲೆಗಳ ಸಹಾಯಕ ನಿರ್ದೇಶಕ ಎಸ್.ಆರ್.ಅಗಸಬಾಳ, ಬಸವನ ಬಾಗೇವಾಡಿ ಪಶು ಆಸ್ಪತ್ರೆಯ ಮುಖ್ಯ ಪಶು ವೈದ್ಯಾಧಿಕಾರಿ ರಾಮು ರಾಠೋಡ ಹಾಗೂ ವಿವಿಧ ಇಲಾಖೆಗಳ ಅಧಿಕಾರಿಗಳು, ಸಾರ್ವಜನಿಕರು ಇದ್ದರು.

