Close Menu
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ

Subscribe to Updates

Get the latest creative news from FooBar about art, design and business.

What's Hot

ಮಕ್ಕಳಲ್ಲಿ ಸಂಶೋಧನಾ ಆಸಕ್ತಿ ಬೆಳೆಸಲು ವಿಜ್ಞಾನ ಸಮಾವೇಶ ಸಹಕಾರಿ

ಸಕ್ಕರೆ ಕಾರ್ಖಾನೆ ಎದುರು ರೈತರ ಬೃಹತ್ ಪ್ರತಿಭಟನೆ

ಮಾರ್ಕಬ್ಬಿನಹಳ್ಳಿ: ಪ್ರಜಾಸೇವೆ ಆಂದೋಲನ ಸಭೆಗೆ ಚಾಲನೆ

Facebook X (Twitter) Instagram
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
Facebook X (Twitter) Instagram YouTube WhatsApp
udayarashminews.comudayarashminews.com
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
udayarashminews.comudayarashminews.com
Home»(ರಾಜ್ಯ ) ಜಿಲ್ಲೆ»ಮಕ್ಕಳಲ್ಲಿ ಸಂಶೋಧನಾ ಆಸಕ್ತಿ ಬೆಳೆಸಲು ವಿಜ್ಞಾನ ಸಮಾವೇಶ ಸಹಕಾರಿ
(ರಾಜ್ಯ ) ಜಿಲ್ಲೆ

ಮಕ್ಕಳಲ್ಲಿ ಸಂಶೋಧನಾ ಆಸಕ್ತಿ ಬೆಳೆಸಲು ವಿಜ್ಞಾನ ಸಮಾವೇಶ ಸಹಕಾರಿ

By No Comments2 Mins Read
Facebook Twitter Pinterest LinkedIn Telegram WhatsApp
Share
Facebook Twitter LinkedIn Email Telegram WhatsApp

ಅಗಸ್ತ್ಯ ವಿಜ್ಞಾನ ಕೇಂದ್ರದಲ್ಲಿ ಜಿಲ್ಲಾಮಟ್ಟದ ಮಕ್ಕಳ ವಿಜ್ಞಾನ ಸಮಾವೇಶ ಯಶಸ್ವಿ; ನೂರಾರು ವಿದ್ಯಾರ್ಥಿಗಳಿಂದ ವೈಜ್ಞಾನಿಕ ಮಾದರಿ, ನವೀನ ಆಲೋಚನೆಗಳ ಪ್ರದರ್ಶನ

ಉದಯರಶ್ಮಿ ದಿನಪತ್ರಿಕೆ

ವಿಜಯಪುರ: ವಿದ್ಯಾರ್ಥಿಗಳಲ್ಲಿ ವೈಜ್ಞಾನಿಕ ಮನೋಭಾವ, ಸಂಶೋಧನಾ ಆಸಕ್ತಿ ಹಾಗೂ ಸೃಜನಶೀಲ ಚಿಂತನೆಯನ್ನು ಬೆಳೆಸುವ ಉದ್ದೇಶದಿಂದ ಕರ್ನಾಟಕ ರಾಜ್ಯ ವಿಜ್ಞಾನ ಮತ್ತು ತಂತ್ರಜ್ಞಾನ ಮಂಡಳಿ ಹಾಗೂ ವಿಜಯಪುರ ಜಿಲ್ಲಾ ಪಂಚಾಯಿತಿಯ ಸಹಯೋಗದಲ್ಲಿ ಆಯೋಜಿಸಿದ್ದ ೨೦೨೬-೨೭ನೇ ಸಾಲಿನ ಜಿಲ್ಲಾಮಟ್ಟದ ಮಕ್ಕಳ ವಿಜ್ಞಾನ ಸಮಾವೇಶವು ನಗರದ ಅಗಸ್ತ್ಯ ವಿಜ್ಞಾನ ಕೇಂದ್ರದಲ್ಲಿ ಶನಿವಾರ ಯಶಸ್ವಿಯಾಗಿ ನಡೆಯಿತು.
ಕಾರ್ಯಕ್ರಮದಲ್ಲಿ ಮಾತನಾಡಿದ ಗೀತಾ ಪಾಟೀಲ್ ಹಾಗೂ ದಿಲೀಪ್ ಕಾಂಬಳೆ ಅವರು, ವಿಜ್ಞಾನವು ಕೇವಲ ಪಠ್ಯಪುಸ್ತಕಗಳಿಗೆ ಸೀಮಿತವಾಗದೆ ದೈನಂದಿನ ಜೀವನದಲ್ಲಿ ವೈಜ್ಞಾನಿಕ ಮನೋಭಾವ ಮತ್ತು ಪ್ರಜ್ಞಾವಂತ ಚಿಂತನೆಯನ್ನು ಬೆಳೆಸುವ ಸಾಧನವಾಗಬೇಕು ಎಂದು ಹೇಳಿದರು.
ಜಾಗತೀಕರಣ, ಪರಿಸರ ಮಾಲಿನ್ಯ ಹಾಗೂ ಅರಣ್ಯನಾಶದಿಂದ ಪರಿಸರದ ಸಮತೋಲನ ಹದಗೆಡುತ್ತಿದೆ. ಮುಂದಿನ ಪೀಳಿಗೆಯ ಹಿತದೃಷ್ಟಿಯಿಂದ ಜೀವವೈವಿಧ್ಯತೆ ಮತ್ತು ನೈಸರ್ಗಿಕ ಸಂಪನ್ಮೂಲಗಳ ಸುಸ್ಥಿರ ಸಂರಕ್ಷಣೆಗೆ ಆದ್ಯತೆ ನೀಡಬೇಕು. ತಂತ್ರಜ್ಞಾನವು ಮಾನವಕುಲದ ಪ್ರಗತಿಗೆ ಪೂರಕವಾಗಿರಬೇಕೇ ಹೊರತು ವಿನಾಶಕ್ಕೆ ಕಾರಣವಾಗಬಾರದು. ಪ್ರಾಚೀನ ಸಾಂಪ್ರದಾಯಿಕ ಜ್ಞಾನ ಮತ್ತು ಆಧುನಿಕ ವಿಜ್ಞಾನವನ್ನು ಸಮನ್ವಯಗೊಳಿಸುವುದು ಇಂದಿನ ಅಗತ್ಯವಾಗಿದೆ ಎಂದು ಅಭಿಪ್ರಾಯಪಟ್ಟರು.
ಸಮಾರಂಭದಲ್ಲಿ ಉಪ ನಿರ್ದೇಶಕರ ಕಾರ್ಯಾಲಯದ ವಿಜ್ಞಾನ ವಿಷಯ ಪರಿವೀಕ್ಷಕ ಶಂಕರ ತಳ್ಳೊಳ್ಳಿ,ಅಂಜುಮನ್ ಪದವಿ ಕಾಲೇಜಿನ ರಸಾಯನಶಾಸ್ತ್ರ ವಿಭಾಗದ ಮುಖ್ಯಸ್ಥ ಡಾ. ಸಲೀಂ ದೇಸಾಯಿ, ಅಗಸ್ತ್ಯ ಪ್ರತಿಷ್ಠಾನದ ವಿಜ್ಞಾನ ಮತ್ತು ತಂತ್ರಜ್ಞಾನ ವಿಭಾಗದ ಮುಖ್ಯಸ್ಥ ಸತೀಶ್ ಗೋಡಕಿಂಡಿ ಹಾಗೂ ಜಿಲ್ಲಾ ಪಂಚಾಯಿತಿಯ ಜಿಲ್ಲಾ ನೈಸರ್ಗಿಕ ಸಂಪನ್ಮೂಲ ದತ್ತಾಂಶ ನಿರ್ವಹಣಾ ವ್ಯವಸ್ಥೆಯ ಸಂಯೋಜಕಿ ಚೆನ್ನಮ್ಮ ಅಗಳನ್ನವರ ಉಪಸ್ಥಿತರಿದ್ದರು.
ಸಮಾವೇಶದ ಸಮಿತಿ ಸದಸ್ಯರು ಹಾಗೂ ತೀರ್ಪುಗಾರರಾಗಿ ಸರ್ಕಾರಿ ಪ್ರೌಢಶಾಲೆ ಅರಕೇರಿಯ ಆರ್.ಎಸ್. ಝಳಕಿ, ಹೆಬ್ಬಾಳಟ್ಟಿಯ ಸರ್ಕಾರಿ ಪ್ರೌಢಶಾಲೆಯ ಸಂದೀಪ್ ದೇಶಪಾಂಡೆ, ಮಮದಾಪುರ ಕರ್ನಾಟಕ ಪಬ್ಲಿಕ್ ಶಾಲೆಯ ಎಂ.ಜಿ. ಕೋರಿ, ಸಿದ್ದನಾಥ ಸರ್ಕಾರಿ ಪ್ರೌಢಶಾಲೆಯ ಶಶಿಧರ ಕುಂಬಾರ, ಮುಳವಾಡದ ಮಲ್ಲಿಕಾರ್ಜುನ ಪ್ರೌಢಶಾಲೆಯ ಧರು ಎಸ್.ಕೆ., ರಾಂಪುರ ಸರ್ಕಾರಿ ಪ್ರೌಢಶಾಲೆಯ ನಾಗೇಂದ್ರ ರಜಪೂತ್ ಹಾಗೂ ಅಗಸ್ತ್ಯ ಪ್ರತಿಷ್ಠಾನದ ಚಂದ್ರಶೇಖರ ಅಣಮಿ ಭಾಗವಹಿಸಿ ವಿದ್ಯಾರ್ಥಿಗಳ ವೈಜ್ಞಾನಿಕ ಮಾದರಿಗಳನ್ನು ಮೌಲ್ಯಮಾಪನ ಮಾಡಿದರು.
ಜಿಲ್ಲೆಯ ವಿವಿಧ ಶಾಲೆಗಳ ನೂರಾರು ವಿದ್ಯಾರ್ಥಿಗಳು ಹಾಗೂ ಮಾರ್ಗದರ್ಶಿ ಶಿಕ್ಷಕರು ಸಮಾವೇಶದಲ್ಲಿ ಪಾಲ್ಗೊಂಡು ತಮ್ಮ ವೈಜ್ಞಾನಿಕ ಮಾದರಿಗಳು ಮತ್ತು ನವೀನ ಆಲೋಚನೆಗಳನ್ನು ಪ್ರದರ್ಶಿಸಿದರು. ವಿದ್ಯಾರ್ಥಿಗಳಲ್ಲಿ ವೈಜ್ಞಾನಿಕ ಮನೋಭಾವ, ಸಂಶೋಧನಾ ಆಸಕ್ತಿ, ಸೃಜನಶೀಲತೆ ಹಾಗೂ ಸಮಸ್ಯೆಗಳನ್ನು ವೈಜ್ಞಾನಿಕವಾಗಿ ವಿಶ್ಲೇಷಿಸಿ ಪರಿಹರಿಸುವ ಸಾಮರ್ಥ್ಯ ಬೆಳೆಸುವಲ್ಲಿ ಸಮಾವೇಶ ಮಹತ್ವದ ವೇದಿಕೆಯಾಯಿತು ಎಂದು ಜಿಲ್ಲಾ ಪಂಚಾಯಿತಿಯ ಪ್ರಕಟಣೆ ತಿಳಿಸಿದೆ.

BIJAPUR NEWS bjp congress patil public public news udaya rashmi Udayarashmi today newspaper udayarashminews.com
Share. Facebook Twitter Pinterest Email Telegram WhatsApp
  • Website

Related Posts

ಸಕ್ಕರೆ ಕಾರ್ಖಾನೆ ಎದುರು ರೈತರ ಬೃಹತ್ ಪ್ರತಿಭಟನೆ

ಮಾರ್ಕಬ್ಬಿನಹಳ್ಳಿ: ಪ್ರಜಾಸೇವೆ ಆಂದೋಲನ ಸಭೆಗೆ ಚಾಲನೆ

ದೇವರಹಿಪ್ಪರಗಿಯಲ್ಲಿ ದೀಪಾವಳಿ ಹಬ್ಬದ ಸಂಭ್ರಮ

ಭಂಡಾರದಲ್ಲಿ ಮಿಂದೆದ್ದ ಭಕ್ತ ಸಮೂಹ ಹಳದಿಮಯ

Add A Comment
Leave A Reply Cancel Reply

Categories
  • (ರಾಜ್ಯ ) ಜಿಲ್ಲೆ
  • Helldivers
  • Typora
  • Uncategorized
  • Wemod
  • ಆರೋಗ್ಯ
  • ಇತರೆ
  • ಕಾವ್ಯರಶ್ಮಿ
  • ಚಿಂತನ
  • ದಿನಪತ್ರಿಕೆ
  • ಪುಸ್ತಕ ಪರಿಚಯ
  • ಪ್ರೇಮಲೋಕ
  • ಭಾವರಶ್ಮಿ
  • ರಾಷ್ಚ್ರ
  • ವಿಜಯಪುರ
  • ವಿದ್ಯಾರ್ಥಿ ನಿಧಿ
  • ವಿಶೇಷ ಲೇಖನ
  • ಸಾಹಿತ್ಯ
  • ಸಿನಿಮಾ
  • ಹೊತ್ತಿಗೆ ಹೊರಣ
Recent Posts
  • ಮಕ್ಕಳಲ್ಲಿ ಸಂಶೋಧನಾ ಆಸಕ್ತಿ ಬೆಳೆಸಲು ವಿಜ್ಞಾನ ಸಮಾವೇಶ ಸಹಕಾರಿ
    In (ರಾಜ್ಯ ) ಜಿಲ್ಲೆ
  • ಸಕ್ಕರೆ ಕಾರ್ಖಾನೆ ಎದುರು ರೈತರ ಬೃಹತ್ ಪ್ರತಿಭಟನೆ
    In (ರಾಜ್ಯ ) ಜಿಲ್ಲೆ
  • ಮಾರ್ಕಬ್ಬಿನಹಳ್ಳಿ: ಪ್ರಜಾಸೇವೆ ಆಂದೋಲನ ಸಭೆಗೆ ಚಾಲನೆ
    In (ರಾಜ್ಯ ) ಜಿಲ್ಲೆ
  • ದೇವರಹಿಪ್ಪರಗಿಯಲ್ಲಿ ದೀಪಾವಳಿ ಹಬ್ಬದ ಸಂಭ್ರಮ
    In (ರಾಜ್ಯ ) ಜಿಲ್ಲೆ
  • ಭಂಡಾರದಲ್ಲಿ ಮಿಂದೆದ್ದ ಭಕ್ತ ಸಮೂಹ ಹಳದಿಮಯ
    In (ರಾಜ್ಯ ) ಜಿಲ್ಲೆ
  • ಮಲಕಾರಿಸಿದ್ಧ – ಲಗಮವ್ವ ದೇವಿ ಭೇಟಿ ಸಂಪನ್ನ
    In (ರಾಜ್ಯ ) ಜಿಲ್ಲೆ
  • ನ.೨೮ರವರೆಗೆ ಸಾರ್ವಜನಿಕರಿಂದ ಸಲಹೆ, ಆಕ್ಷೇಪಣೆ ಸಲ್ಲಿಸಲು ಅವಕಾಶ
    In (ರಾಜ್ಯ ) ಜಿಲ್ಲೆ
  • ಸಿಂದಗಿ: ಸ್ಥಿರಾಸ್ತಿಗಳ ಮಾರ್ಗಸೂಚಿ ದರ ಪರಿಷ್ಕರಣೆ
    In (ರಾಜ್ಯ ) ಜಿಲ್ಲೆ
  • ನ.೨೮ರವರೆಗೆ ಆಕ್ಷೇಪಣೆ ಸಲ್ಲಿಸಲು ಅವಕಾಶ
    In (ರಾಜ್ಯ ) ಜಿಲ್ಲೆ
  • ಕಬ್ಬು ಬೆಲೆ ನಿಗದಿಯಲ್ಲಿ ವಿಜಯಪುರ ರೈತರಿಗೆ ತಾರತಮ್ಯ
    In (ರಾಜ್ಯ ) ಜಿಲ್ಲೆ
Editors Picks
Top Reviews
udayarashminews.com
Facebook X (Twitter) Instagram Pinterest Vimeo YouTube
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
© 2026 udayarashminews.com. Designed by udayarashmi news .

Type above and press Enter to search. Press Esc to cancel.