Close Menu
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ

Subscribe to Updates

Get the latest creative news from FooBar about art, design and business.

What's Hot

ವಿವಿಧ ಯೋಜನೆ ಸಾಲ-ಸೌಲಭ್ಯಕ್ಕೆ ಅರ್ಜಿ ಆಹ್ವಾನ

ಒನಕೆ ಓಬವ್ವ ಧೈರ್ಯ, ತ್ಯಾಗ ಮಹಿಳೆಯರಿಗೆ ಸ್ಫೂರ್ತಿಯಾಗಲಿ

ದೇವರಹಿಪ್ಪರಗಿಯಲ್ಲಿ ಚನ್ನಬಸವಣ್ಣ ಜಯಂತಿ ಆಚರಣೆ

Facebook X (Twitter) Instagram
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
Facebook X (Twitter) Instagram YouTube WhatsApp
udayarashminews.comudayarashminews.com
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
udayarashminews.comudayarashminews.com
Home»(ರಾಜ್ಯ ) ಜಿಲ್ಲೆ»ಸರ್ಕಾರಿ ಶಿಕ್ಷಣ ವ್ಯವಸ್ಥೆ ಮಾರಾಟಕ್ಕೆ ಆಮ್ ಆದ್ಮಿ ಪಕ್ಷ ಬಿಡೊಲ್ಲ
(ರಾಜ್ಯ ) ಜಿಲ್ಲೆ

ಸರ್ಕಾರಿ ಶಿಕ್ಷಣ ವ್ಯವಸ್ಥೆ ಮಾರಾಟಕ್ಕೆ ಆಮ್ ಆದ್ಮಿ ಪಕ್ಷ ಬಿಡೊಲ್ಲ

By No Comments2 Mins Read
Facebook Twitter Pinterest LinkedIn Telegram WhatsApp
Share
Facebook Twitter LinkedIn Email Telegram WhatsApp

ಸರ್ಕಾರಿ ಶಾಲೆಗಳನ್ನು ಖಾಸಗಿ ಶಿಕ್ಷಣ ಮಾಫಿಯಾಗಳಿಗೆ ಒಪ್ಪಿಸುವ ಹುನ್ನಾರ | ಸಿಎಂ ಡಿ.ಕೆ. ಶಿವಕುಮಾರ್ ನಿರ್ಧಾರಕ್ಕೆ ಖಂಡನೆ | ವಿಜಯಪುರ ಜಿಲ್ಲಾಧ್ಯಕ್ಷ ಭೋಗೇಶ್ ಸೋಲಾಪುರ್ ಟೀಕೆ

ಉದಯರಶ್ಮಿ ದಿನಪತ್ರಿಕೆ

ವಿಜಯಪುರ: ಖಾಸಗಿ ಶಾಲೆಗಳ ಪರವಾಗಿ ತಮ್ಮ ಸರ್ಕಾರ ನಿಲ್ಲಲಿದೆ ಎಂದು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಬಹಿರಂಗವಾಗಿ ಹೇಳಿರುವುದು ರಾಜ್ಯದ ಶಿಕ್ಷಣ ವ್ಯವಸ್ಥೆಯ ಬಗ್ಗೆ ಕಾಂಗ್ರೆಸ್ ಸರ್ಕಾರಕ್ಕಿರುವ ನೈಜ ಕಾಳಜಿಯನ್ನು ಬಯಲು ಮಾಡಿದೆ. ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ಸಂವಿಧಾನದ ಆಶಯದಂತೆ ಪ್ರತಿಯೊಂದು ಸರ್ಕಾರದ ಆದ್ಯ ಕರ್ತವ್ಯ ಶಿಕ್ಷಣ ಮತ್ತು ಆರೋಗ್ಯವನ್ನು ಜನರಿಗೆ ಉಚಿತವಾಗಿ ಅಥವಾ ಕೈಗೆಟುಕುವ ದರದಲ್ಲಿ ಒದಗಿಸುವುದಾಗಿದೆ. ಇದು ಪ್ರತಿಯೊಬ್ಬ ಭಾರತೀಯ ಪ್ರಜೆಯ ಮೂಲಭೂತ ಹಕ್ಕಾಗಿದೆ. ಆದರೆ ಕಾಂಗ್ರೆಸ್ ರಾಜ್ಯ ಸರ್ಕಾರದ ರಿಯಲ್ ಎಸ್ಟೇಟ್ ನೀತಿಯಿಂದಾಗಿ ಸರ್ಕಾರಿ ಶಿಕ್ಷಣ ವ್ಯವಸ್ಥೆಯೂ ಸಹ ಖಾಸಗಿ ಶಿಕ್ಷಣ ಮಾಫಿಯಾಗಳ ಹಿಡಿತಕ್ಕೆ ಸಿಲುಕುತ್ತಿರುವುದು ಆತಂಕಕಾರಿ ಬೆಳವಣಿಗೆಯಾಗಿದೆ ಎಂದು ಆಮ್ ಆದ್ಮಿ ಪಕ್ಷದ ವಿಜಯಪುರ ಜಿಲ್ಲಾಧ್ಯಕ್ಷರಾದ ಭೋಗೇಶ್ ಸೋಲಾಪುರ್ ಟೀಕಿಸಿದ್ದಾರೆ.
ಈಗಾಗಲೇ ರಾಜ್ಯದ ಸರ್ಕಾರಿ ಶಾಲೆಗಳ ಸಾವಿರಾರು ಕೋಟಿ ರೂಪಾಯಿ ಮೌಲ್ಯದ ಆಸ್ತಿಗಳು ಹಾಗೂ ಲಕ್ಷಾಂತರ ಎಕರೆ ಜಮೀನುಗಳನ್ನು ಖಾಸಗಿ ಸಂಸ್ಥೆಗಳಿಗೆ ದತ್ತು ನೀಡುವ ನೆಪದಲ್ಲಿ ಖಾಸಗೀಕರಣಗೊಳಿಸುವ ಪ್ರಯತ್ನ ನಡೆಯುತ್ತಿದೆ. ಇದು ಶಿಕ್ಷಣ ಸುಧಾರಣೆಯಲ್ಲ, ಬದಲಾಗಿ ಸರ್ಕಾರಿ ಆಸ್ತಿಗಳನ್ನು ಖಾಸಗಿ ಹಿತಾಸಕ್ತಿಗಳಿಗೆ ಧಾರೆ ಎರೆಯುವ ಅಪಾಯಕಾರಿ ರಿಯಲ್ ಎಸ್ಟೇಟ್ ದಂಧೆಗೆ ಮುನ್ನುಡಿ ಬರೆದಂತಾಗಿದೆ. ರಾಜಕೀಯ ಪ್ರಭಾವಿಗಳು ಮತ್ತು ಪ್ರಬಲ ವ್ಯಕ್ತಿಗಳ ಖಾಸಗಿ ಶಿಕ್ಷಣ ಸಂಸ್ಥೆಗಳ ಹಿತಾಸಕ್ತಿಗೆ ಸರ್ಕಾರ ಮಣೆ ಹಾಕುತ್ತಿರುವ ಅನುಮಾನ ಮೂಡುತ್ತಿದೆ ಎಂದಿದ್ದಾರೆ.
ರಾಜ್ಯದಲ್ಲಿ ಸಂಗ್ರಹವಾಗುವ ಸಿಎಸ್ಆರ್ ನಿಧಿಯನ್ನು ಶಿಕ್ಷಣ ಕ್ಷೇತ್ರಕ್ಕೆ ಬಳಸುವ ಉದ್ದೇಶವಿದ್ದರೆ, ಈ ವರ್ಷ ಸಂಗ್ರಹವಾಗಲಿರುವ ಸುಮಾರು ಕೋಟಿ ರೂಪಾಯಿಗೂ ಅಧಿಕ ಮೊತ್ತವನ್ನು ಸರ್ಕಾರಿ ಶಾಲೆಗಳ ಅಭಿವೃದ್ಧಿಗೆ ಮೀಸಲಿಡಬೇಕು. ಶಿಕ್ಷಣ ತಜ್ಞರ ಉನ್ನತ ಮಟ್ಟದ ಸಮಿತಿ ರಚಿಸಿ, ಶಾಲೆಗಳ ಕಟ್ಟಡ, ಪ್ರಯೋಗಾಲಯ, ಗ್ರಂಥಾಲಯ, ಡಿಜಿಟಲ್ ಶಿಕ್ಷಣ, ಶಿಕ್ಷಕರ ತರಬೇತಿ ಸೇರಿದಂತೆ ಸಮಗ್ರ ಅಭಿವೃದ್ಧಿಗೆ ಯೋಜನೆ ರೂಪಿಸಬೇಕು ಎಂದಿದ್ದಾರೆ.
ಸರ್ಕಾರಿ ಶಾಲೆಗಳನ್ನು ಖಾಸಗಿ ಶಾಲೆಗಳಿಗೆ ದತ್ತು ಅಥವಾ ಗುತ್ತಿಗೆ ನೀಡುವ ಪ್ರಕ್ರಿಯೆಯನ್ನು ತಕ್ಷಣವೇ ಸ್ಥಗಿತಗೊಳಿಸಬೇಕು. ಸರ್ಕಾರಿ ಶಾಲೆಗಳು ಸರ್ಕಾರದ ಆಸ್ತಿ ಮಾತ್ರವಲ್ಲ, ಬಡ ಮತ್ತು ಮಧ್ಯಮ ವರ್ಗದ ಮಕ್ಕಳ ಭವಿಷ್ಯದ ಭರವಸೆಯಾಗಿವೆ. ಅವುಗಳನ್ನು ಖಾಸಗಿ ಶಿಕ್ಷಣ ಮಾಫಿಯಾಗಳಿಗೆ ಒಪ್ಪಿಸುವ ಯಾವುದೇ ಪ್ರಯತ್ನವನ್ನು ಆಮ್ ಆದ್ಮಿ ಪಕ್ಷ ತೀವ್ರವಾಗಿ ವಿರೋಧಿಸಲಿದೆ. ರಾಜ್ಯದ ಸರ್ಕಾರಿ ಶಿಕ್ಷಣ ವ್ಯವಸ್ಥೆಯನ್ನು ಉಳಿಸಲು ಕಾಂಗ್ರೆಸ್ ಸರ್ಕಾರದ ಈ ಜನವಿರೋಧಿ ನೀತಿಯ ವಿರುದ್ಧ ರಾಜ್ಯಾದ್ಯಂತ ಜನಜಾಗೃತಿ ಮತ್ತು ಹೋರಾಟ ರೂಪಿಸಲಾಗುವುದು ಎಂದು ಭೋಗೇಶ್ ಸೋಲಾಪುರ್ ಎಚ್ಚರಿಸಿದ್ದಾರೆ.

BIJAPUR NEWS bjp congress patil public public news udaya rashmi Udayarashmi today newspaper udayarashminews.com
Share. Facebook Twitter Pinterest Email Telegram WhatsApp
  • Website

Related Posts

ವಿವಿಧ ಯೋಜನೆ ಸಾಲ-ಸೌಲಭ್ಯಕ್ಕೆ ಅರ್ಜಿ ಆಹ್ವಾನ

ಒನಕೆ ಓಬವ್ವ ಧೈರ್ಯ, ತ್ಯಾಗ ಮಹಿಳೆಯರಿಗೆ ಸ್ಫೂರ್ತಿಯಾಗಲಿ

ದೇವರಹಿಪ್ಪರಗಿಯಲ್ಲಿ ಚನ್ನಬಸವಣ್ಣ ಜಯಂತಿ ಆಚರಣೆ

ದೇಶಭಕ್ತರ ಜೀವನ ಚರಿತ್ರೆ ನಮಗೆ ಮಾರ್ಗದರ್ಶನ

Add A Comment
Leave A Reply Cancel Reply

Categories
  • (ರಾಜ್ಯ ) ಜಿಲ್ಲೆ
  • Helldivers
  • Typora
  • Uncategorized
  • Wemod
  • ಆರೋಗ್ಯ
  • ಇತರೆ
  • ಕಾವ್ಯರಶ್ಮಿ
  • ಚಿಂತನ
  • ದಿನಪತ್ರಿಕೆ
  • ಪುಸ್ತಕ ಪರಿಚಯ
  • ಪ್ರೇಮಲೋಕ
  • ಭಾವರಶ್ಮಿ
  • ರಾಷ್ಚ್ರ
  • ವಿಜಯಪುರ
  • ವಿದ್ಯಾರ್ಥಿ ನಿಧಿ
  • ವಿಶೇಷ ಲೇಖನ
  • ಸಾಹಿತ್ಯ
  • ಸಿನಿಮಾ
  • ಹೊತ್ತಿಗೆ ಹೊರಣ
Recent Posts
  • ವಿವಿಧ ಯೋಜನೆ ಸಾಲ-ಸೌಲಭ್ಯಕ್ಕೆ ಅರ್ಜಿ ಆಹ್ವಾನ
    In (ರಾಜ್ಯ ) ಜಿಲ್ಲೆ
  • ಒನಕೆ ಓಬವ್ವ ಧೈರ್ಯ, ತ್ಯಾಗ ಮಹಿಳೆಯರಿಗೆ ಸ್ಫೂರ್ತಿಯಾಗಲಿ
    In (ರಾಜ್ಯ ) ಜಿಲ್ಲೆ
  • ದೇವರಹಿಪ್ಪರಗಿಯಲ್ಲಿ ಚನ್ನಬಸವಣ್ಣ ಜಯಂತಿ ಆಚರಣೆ
    In (ರಾಜ್ಯ ) ಜಿಲ್ಲೆ
  • ದೇಶಭಕ್ತರ ಜೀವನ ಚರಿತ್ರೆ ನಮಗೆ ಮಾರ್ಗದರ್ಶನ
    In (ರಾಜ್ಯ ) ಜಿಲ್ಲೆ
  • ಸರ್ಕಾರಿ ಶಿಕ್ಷಣ ವ್ಯವಸ್ಥೆ ಮಾರಾಟಕ್ಕೆ ಆಮ್ ಆದ್ಮಿ ಪಕ್ಷ ಬಿಡೊಲ್ಲ
    In (ರಾಜ್ಯ ) ಜಿಲ್ಲೆ
  • ಝಳಕಿಯಲ್ಲಿ ದೇವರ ಪಲ್ಲಕ್ಕಿಗಳ ಅದ್ದೂರಿ ಭೇಟಿ
    In (ರಾಜ್ಯ ) ಜಿಲ್ಲೆ
  • ಗಿಡುಗದ ಪುನರ್ಜನ್ಮದ ಅದ್ಭುತ ಕಥೆ
    In ವಿಶೇಷ ಲೇಖನ
  • ಆತಂಕ ಸೀಳಿ, ಜಗವನ್ನೇ ಆಳಿ!
    In ವಿಶೇಷ ಲೇಖನ
  • ಉದಯರಶ್ಮಿ ಇಂದಿನ ದಿನಪತ್ರಿಕೆ ನವೆಂಬರ್ 11,2026
    In ದಿನಪತ್ರಿಕೆ
  • ರೈತರಿಗೆ ಯಾವುದೇ ಜಾತಿ-ಪಕ್ಷವಿಲ್ಲ :ಶಶಿಕಾಂತ ಗುರೂಜಿ
    In (ರಾಜ್ಯ ) ಜಿಲ್ಲೆ
Editors Picks
Top Reviews
udayarashminews.com
Facebook X (Twitter) Instagram Pinterest Vimeo YouTube
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
© 2026 udayarashminews.com. Designed by udayarashmi news .

Type above and press Enter to search. Press Esc to cancel.