ಉದಯರಶ್ಮಿ ದಿನಪತ್ರಿಕೆ
ವಿಜಯಪುರ: ಧಾರವಾಡದ ಕೃಷಿ ವಿಶ್ವವಿದ್ಯಾಲಯದ ವ್ಯಾಪ್ತಿಗೆ ಒಳಪಡುವ ವಿಜಯಪುರ ಕೃಷಿ ಮಹಾವಿದ್ಯಾಲಯದಲ್ಲಿ ಖಾಲಿ ಇರುವ ಸಹಾಯಕ ಪ್ರಾಧ್ಯಾಪಕ ಹುದ್ದೆಗಳನ್ನು ತಾತ್ಕಾಲಿಕ ಹಾಗೂ ಅರೆಕಾಲಿಕ ಆಧಾರದ ಮೇಲೆ ಭರ್ತಿ ಮಾಡಿಕೊಳ್ಳಲು ಅರ್ಹ ಅಭ್ಯರ್ಥಿಗಳಿಂದ ನೇರ ಸಂದರ್ಶನಕ್ಕೆ ಅರ್ಜಿ ಆಹ್ವಾನಿಸಲಾಗಿದೆ.
ಅಗ್ರಿಕಲ್ಚರಲ್ ಎಂಟಮಾಲಜಿ, ಜೆನೆಟಿಕ್ಸ್ ಆ್ಯಂಡ್ ಪ್ಲಾಂಟ್ ಬ್ರೀಡಿಂಗ್, ಪ್ಲಾಂಟ್ ಪ್ಯಾಥಾಲಜಿ, ಸಾಯಿಲ್ ಸೈನ್ಸ್, ಅಗ್ರಿಕಲ್ಚರಲ್ ಎಕ್ಸ್ಟೆನ್ಷನ್, ಬಯೋಟೆಕ್ನಾಲಜಿ ಹಾಗೂ ಸೈಕಾಲಜಿ-ರೂರಲ್ ಸೋಷಿಯಾಲಜಿ ವಿಷಯಗಳಲ್ಲಿ ತಲಾ ಒಂದು ಹುದ್ದೆಗೆ, ಆಯಾ ವರ್ಗೀಕರಣದನ್ವಯ ನೇಮಕಾತಿ ಪ್ರಕ್ರಿಯೆ ನಡೆಯಲಿದೆ.
ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು ನವೆಂಬರ್ ೨೫ ರಂದು ಬೆಳಿಗ್ಗೆ ೯ ರಿಂದ ಸಂಜೆ ೪ ಗಂಟೆವರೆಗೆ ವಿವಿಧ ಹುದ್ದೆಗಳಿಗನುಗುಣಾವಾಗಿ ನಡೆಯುವ ನೇರ ಸಂದರ್ಶನದಲ್ಲಿ ಭಾಗವಹಿಸಬಹುದು. ಅಭ್ಯರ್ಥಿಗಳು ನಿಗದಿತ ಅರ್ಜಿ ನಮೂನೆಯನ್ನು ಭರ್ತಿ ಮಾಡಿ, ಎಲ್ಲ ಮೂಲ ದಾಖಲಾತಿಗಳು, ಅವುಗಳ ದೃಢೀಕೃತ ಎರಡು ಸೆಟ್ ನಕಲು ಪ್ರತಿಗಳು ಹಾಗೂ ಇತ್ತೀಚಿನ ಭಾವಚಿತ್ರದೊಂದಿಗೆ ಸಂದರ್ಶನಕ್ಕೆ ನೇರವಾಗಿ ಹಾಜರಾಗಬೇಕು. ಮುಂಚಿತವಾಗಿ ಅರ್ಜಿ ಸಲ್ಲಿಸಲು ಅವಕಾಶವಿರುವುದಿಲ್ಲ.
ನಿಗದಿತ ಅರ್ಜಿ ನಮೂನೆ ಹಾಗೂ ನೇಮಕಾತಿಗೆ ಸಂಬಂಧಿಸಿದ ಹೆಚ್ಚಿನ ಮಾಹಿತಿಗಾಗಿ ಕೃಷಿ ವಿಶ್ವವಿದ್ಯಾಲಯದ ಅಧಿಕೃತ ಅಂತರ್ಜಾಲ ತಾಣ hಣಣಠಿs://uಚಿsಜ.eಜuಗೆ ಭೇಟಿ ನೀಡಬಹುದಾಗಿದೆ ಎಂದು ಕೃಷಿ ಮಹಾವಿದ್ಯಾಲಯದ ಡೀನ್ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
