Close Menu
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ

Subscribe to Updates

Get the latest creative news from FooBar about art, design and business.

What's Hot

ಕಬ್ಬು ಬೆಳೆಗಾರರಿಂದ ಸಕ್ಕರೆ ಕಾರ್ಖಾನೆಗೆ ಬೀಗ :ಪ್ರತಿಭಟನೆ

ಪ್ರತಿ ಟನ್ ಕಬ್ಬಿಗೆ ರೂ.೩೬೦೦ ಕೊಡಿಸಲು ಕರವೇ ಮನವಿ

ಓಬವ್ವ ಸ್ವಾಮಿನಿಷ್ಠೆ, ಸಮಯಸ್ಪೂರ್ತಿ, ತ್ಯಾಗದ ತ್ರಿವೇಣಿ ಸಂಗಮ

Facebook X (Twitter) Instagram
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
Facebook X (Twitter) Instagram YouTube WhatsApp
udayarashminews.comudayarashminews.com
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
udayarashminews.comudayarashminews.com
Home»(ರಾಜ್ಯ ) ಜಿಲ್ಲೆ»ಡಿ.೩೦ವರೆಗೆ ಮುಂಗಾರು ಬೆಳೆಗೆ ನೀರು ಹರಿಸಲು ಆಗ್ರಹ
(ರಾಜ್ಯ ) ಜಿಲ್ಲೆ

ಡಿ.೩೦ವರೆಗೆ ಮುಂಗಾರು ಬೆಳೆಗೆ ನೀರು ಹರಿಸಲು ಆಗ್ರಹ

By No Comments1 Min Read
Facebook Twitter Pinterest LinkedIn Telegram WhatsApp
Share
Facebook Twitter LinkedIn Email Telegram WhatsApp

ಕೆಪಿಸಿಎಲ್ ಮೂಲಕ ನೀರು ಹರಿಸುವುದನ್ನು ಸ್ಥಗಿತಗೊಳಿಸಲು ಆಗ್ರಹಿಸಿ ನ.೧೩ ರಂದು ಬೃಹತ್ ಪ್ರತಿಭಟನೆ

ಉದಯರಶ್ಮಿ ದಿನಪತ್ರಿಕೆ

ಆಲಮಟ್ಟಿ: ಇಲ್ಲಿನ ಲಾಲ್ ಬಹದ್ದೂರ್ ಶಾಸ್ತ್ರಿ ಜಲಾಶಯದಿಂದ ಕೆಪಿಸಿಎಲ್ ಮೂಲಕ ನವೆಂಬರ್ ೧ರಿಂದ ಇಲ್ಲಿಯವರೆಗೂ ಪ್ರತಿನಿತ್ಯ ೧೭ ಸಾವಿರ ಕ್ಯೂಸೆಕ್‌ನಿಂದ ೨೦ ಸಾವಿರ ಕ್ಯೂಸೆಕ್‌ವರೆಗೆ ನೀರು ಹರಿಸಲಾಗುತ್ತಿದ್ದು, ಜಲಾಶಯದ ಎಲ್ಲಾ ನೀರನ್ನು ಸರ್ಕಾರ ಖಾಲಿ ಮಾಡಲು ಹೊರಟಿದೆ.
ಇನ್ನು ಬೇಸಿಗೆ ಹತ್ತು ತಿಂಗಳು ಇದೆ. ಅಲ್ಲಿಯವರೆಗೂ ಅವಳಿ ಜಿಲ್ಲೆಯ ರೈತರು ಹಾಗೂ ಜನಸಾಮಾನ್ಯರು ಮತ್ತು ಜಾನುವಾರುಗಳಿಗೆ ಕುಡಿಯಲು ನೀರು ಬೇಕು. ಹಿಂಗಾರು ಬೆಳೆಗಳಿಗೆ ನೀರು ಕೊಡುವುದಿಲ್ಲವೆಂದು ಐಸಿಸಿ ಸಭೆಯಲ್ಲಿ ತೀರ್ಮಾನಿಸಿದ್ದಾರೆ. ನಮಗೆ ವಂಚಿಸಿ ತೆಲಂಗಾಣಕ್ಕೆ ಬೇಕಾಬಿಟ್ಟಿ ನೀರು ಹರಿಸಲಾಗುತ್ತಿದೆ.
ನಿರಂತರ ನೀರು ಹರಿಸುತ್ತಿರುವುದರಿಂದ ಈಗ ಆಲಮಟ್ಟಿ ಜಲಾಶಯದಲ್ಲಿ ಕೇವಲ ಬಳಕೆಯ ೩೭ ಟಿಎಂಸಿ ನೀರು ಮಾತ್ರ ಉಳಿದಿದೆ. ೧೦ ತಿಂಗಳು ನೀರಿನ ಪರಿಸ್ಥಿತಿ ಹೇಗೆ ಮಾಡಬೇಕೆಂಬ ಚಿಂತೆಯಲ್ಲಿ ನಮ್ಮ ಭಾಗದ ರೈತರು ಕಾಲ ಕಳೆಯುತ್ತಿದ್ದಾರೆ.
ಕಾರಣ ಕೂಡಲೇ ನಾರಾಯಣಪುರಕ್ಕೆ ಹರಿಸುವ ನೀರನ್ನು ಸ್ಥಗಿತಗೊಳಿಸಬೇಕು ಹಾಗೂ ಮುಂಗಾರು ಬೆಳೆಗಳಾದ ತೊಗರಿ, ಹತ್ತಿ, ಈರುಳ್ಳಿ ಸೇರಿದಂತೆ ಇನ್ನಿತರ ಬೆಳೆಗಳಿಗೆ ಡಿಸೆಂಬರ್ ೩೦ರವರೆಗೆ ಕಡ್ಡಾಯವಾಗಿ ನೀರು ಹರಿಸಬೇಕೆಂದು ಆಗ್ರಹಿಸಿ ಶುಕ್ರವಾರ ದಿನಾಂಕ ೧೩-೧೧-೨೦೨೬ರಂದು ಬೆಳಗ್ಗೆ ೧೧ ಗಂಟೆಗೆ ಆಲಮಟ್ಟಿಯಲ್ಲಿ ಅಖಂಡ ಕರ್ನಾಟಕ ರೈತ ಸಂಘ, ಕರ್ನಾಟಕ ರಾಜ್ಯ ರೈತ ಸಂಘ, ಹಸಿರು ಸೇನೆ ಮತ್ತು ಕರ್ನಾಟಕ ರಾಜ್ಯ ರೈತ ಸಂಘ ಜಂಟಿಯಾಗಿ ಪ್ರತಿಭಟನೆ ಹಮ್ಮಿಕೊಳ್ಳಲಾಗಿದೆ.
ರಾಮಲಿಂಗೇಶ್ವರ ದೇವಸ್ಥಾನದಿಂದ ಮೆರವಣಿಗೆ ಮೂಲಕ ಕೆಬಿಜೆಎನ್‌ಎಲ್ ಮುಖ್ಯ ಅಭಿಯಂತರರ ಕಚೇರಿಗೆ ತೆರಳಿ ಕೆಲ ಹೊತ್ತು ಧರಣಿ ನಡೆಸಿ ಮನವಿ ಸಲ್ಲಿಸಲಾಗುವುದು.
ಕಾರಣ ಎಲ್ಲಾ ರೈತಪರ ಸಂಘಟನೆಗಳು ಹಾಗೂ ಸಮಸ್ತ ರೈತ ಬಾಂಧವರು ಪ್ರತಿಭಟನೆಯಲ್ಲಿ ಭಾಗವಹಿಸಬೇಕೆಂದು ಅಖಂಡ ಕರ್ನಾಟಕ ರೈತ ಸಂಘದ ರಾಜ್ಯ ಪ್ರಧಾನ ಕಾರ್ಯದರ್ಶಿ ಅರವಿಂದ್ ಕುಲಕರ್ಣಿ ಹಾಗೂ ರಾಜ್ಯ ಸಂಘಟನಾ ಕಾರ್ಯದರ್ಶಿ ವಿಠ್ಠಲ್ ಬಿರಾದಾರ್, ಕರ್ನಾಟಕ ರಾಜ್ಯ ರೈತ ಸಂಘ ಹಸಿರು ಸೇನೆ ಜಿಲ್ಲಾಧ್ಯಕ್ಷ ಲಿಂಗರಾಜು ಆಲೂರು, ಕರ್ನಾಟಕ ರಾಜ್ಯ ರೈತ ಸಂಘದ ಜಿಲ್ಲಾ ಕಾರ್ಯಾಧ್ಯಕ್ಷ ಮಹಾದೇವಪ್ಪ ತೇಲಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

BIJAPUR NEWS bjp congress patil public public news udaya rashmi Udayarashmi today newspaper udayarashminews.com
Share. Facebook Twitter Pinterest Email Telegram WhatsApp
  • Website

Related Posts

ಕಬ್ಬು ಬೆಳೆಗಾರರಿಂದ ಸಕ್ಕರೆ ಕಾರ್ಖಾನೆಗೆ ಬೀಗ :ಪ್ರತಿಭಟನೆ

ಪ್ರತಿ ಟನ್ ಕಬ್ಬಿಗೆ ರೂ.೩೬೦೦ ಕೊಡಿಸಲು ಕರವೇ ಮನವಿ

ಓಬವ್ವ ಸ್ವಾಮಿನಿಷ್ಠೆ, ಸಮಯಸ್ಪೂರ್ತಿ, ತ್ಯಾಗದ ತ್ರಿವೇಣಿ ಸಂಗಮ

ತಾತ್ಕಾಲಿಕ & ಅರೆಕಾಲಿಕ ಹುದ್ದೆಗಳ ನೇಮಕಾತಿಗೆ ನೇರ ಸಂದರ್ಶನ

Add A Comment
Leave A Reply Cancel Reply

Categories
  • (ರಾಜ್ಯ ) ಜಿಲ್ಲೆ
  • Helldivers
  • Typora
  • Uncategorized
  • Wemod
  • ಆರೋಗ್ಯ
  • ಇತರೆ
  • ಕಾವ್ಯರಶ್ಮಿ
  • ಚಿಂತನ
  • ದಿನಪತ್ರಿಕೆ
  • ಪುಸ್ತಕ ಪರಿಚಯ
  • ಪ್ರೇಮಲೋಕ
  • ಭಾವರಶ್ಮಿ
  • ರಾಷ್ಚ್ರ
  • ವಿಜಯಪುರ
  • ವಿದ್ಯಾರ್ಥಿ ನಿಧಿ
  • ವಿಶೇಷ ಲೇಖನ
  • ಸಾಹಿತ್ಯ
  • ಸಿನಿಮಾ
  • ಹೊತ್ತಿಗೆ ಹೊರಣ
Recent Posts
  • ಕಬ್ಬು ಬೆಳೆಗಾರರಿಂದ ಸಕ್ಕರೆ ಕಾರ್ಖಾನೆಗೆ ಬೀಗ :ಪ್ರತಿಭಟನೆ
    In (ರಾಜ್ಯ ) ಜಿಲ್ಲೆ
  • ಪ್ರತಿ ಟನ್ ಕಬ್ಬಿಗೆ ರೂ.೩೬೦೦ ಕೊಡಿಸಲು ಕರವೇ ಮನವಿ
    In (ರಾಜ್ಯ ) ಜಿಲ್ಲೆ
  • ಓಬವ್ವ ಸ್ವಾಮಿನಿಷ್ಠೆ, ಸಮಯಸ್ಪೂರ್ತಿ, ತ್ಯಾಗದ ತ್ರಿವೇಣಿ ಸಂಗಮ
    In (ರಾಜ್ಯ ) ಜಿಲ್ಲೆ
  • ಡಿ.೩೦ವರೆಗೆ ಮುಂಗಾರು ಬೆಳೆಗೆ ನೀರು ಹರಿಸಲು ಆಗ್ರಹ
    In (ರಾಜ್ಯ ) ಜಿಲ್ಲೆ
  • ತಾತ್ಕಾಲಿಕ & ಅರೆಕಾಲಿಕ ಹುದ್ದೆಗಳ ನೇಮಕಾತಿಗೆ ನೇರ ಸಂದರ್ಶನ
    In (ರಾಜ್ಯ ) ಜಿಲ್ಲೆ
  • ವಿವಿಧ ಯೋಜನೆ ಸಾಲ-ಸೌಲಭ್ಯಕ್ಕೆ ಅರ್ಜಿ ಆಹ್ವಾನ
    In (ರಾಜ್ಯ ) ಜಿಲ್ಲೆ
  • ಒನಕೆ ಓಬವ್ವ ಧೈರ್ಯ, ತ್ಯಾಗ ಮಹಿಳೆಯರಿಗೆ ಸ್ಫೂರ್ತಿಯಾಗಲಿ
    In (ರಾಜ್ಯ ) ಜಿಲ್ಲೆ
  • ದೇವರಹಿಪ್ಪರಗಿಯಲ್ಲಿ ಚನ್ನಬಸವಣ್ಣ ಜಯಂತಿ ಆಚರಣೆ
    In (ರಾಜ್ಯ ) ಜಿಲ್ಲೆ
  • ದೇಶಭಕ್ತರ ಜೀವನ ಚರಿತ್ರೆ ನಮಗೆ ಮಾರ್ಗದರ್ಶನ
    In (ರಾಜ್ಯ ) ಜಿಲ್ಲೆ
  • ಸರ್ಕಾರಿ ಶಿಕ್ಷಣ ವ್ಯವಸ್ಥೆ ಮಾರಾಟಕ್ಕೆ ಆಮ್ ಆದ್ಮಿ ಪಕ್ಷ ಬಿಡೊಲ್ಲ
    In (ರಾಜ್ಯ ) ಜಿಲ್ಲೆ
Editors Picks
Top Reviews
udayarashminews.com
Facebook X (Twitter) Instagram Pinterest Vimeo YouTube
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
© 2026 udayarashminews.com. Designed by udayarashmi news .

Type above and press Enter to search. Press Esc to cancel.