ಉದಯರಶ್ಮಿ ದಿನಪತ್ರಿಕೆ
ವಿಜಯಪುರ: ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಸಚಿವರು ಹಾಗೂ ಶಿವಮೊಗ್ಗ ಜಿಲ್ಲಾ ಉಸ್ತುವಾರಿ ಸಚಿವರಾದ ಎಸ್. ಮಧು ಬಂಗಾರಪ್ಪ ಅವರು ನವೆಂಬರ್ ೧೩ ಮತ್ತು ೧೪ರಂದು ವಿಜಯಪುರ ಜಿಲ್ಲಾ ಪ್ರವಾಸ ಕೈಗೊಂಡು ವಿವಿಧ ಕಾರ್ಯಕ್ರಮಗಳಲ್ಲಿ ಭಾಗವಹಿಸಲಿದ್ದಾರೆ.
ನ.೧೩ರ ಸಂಜೆ ೫.೩೦ಕ್ಕೆ ಹುಬ್ಬಳ್ಳಿಯಿಂದ ಹೊರಟು, ರಾತ್ರಿ ೯ಕ್ಕೆ ವಿಜಯಪುರಕ್ಕೆ ಆಗಮಿಸಿ,ವಾಸ್ತವ್ಯ ಮಾಡಲಿದ್ದಾರೆ. ನ.೧೪ರಂದು ಶನಿವಾರ ಬೆಳಗ್ಗೆ ೯.೩೦ಕ್ಕೆ ನಗರದ ಗಾಂಧಿ ವೃತ್ತದಲ್ಲಿರುವ ಕರ್ನಾಟಕ ಪಬ್ಲಿಕ್ ಶಾಲೆಯಲ್ಲಿ ಆಯೋಜಿಸಿರುವ ಮಕ್ಕಳ ದಿನಾಚರಣೆ ಕಾರ್ಯಕ್ರಮದಲ್ಲಿ ಭಾಗವಹಿಸಲಿದ್ದಾರೆ. ಬೆಳಗ್ಗೆ ೧೦.೧೫ಕ್ಕೆ ನಗರದ ಸರ್ಕಾರಿ ಉರ್ದು ಶಾಲೆಗೆ ಭೇಟಿ ನೀಡಲಿದ್ದಾರೆ.
ನಂತರ ಬೆಳಗ್ಗೆ ೧೧ ಗಂಟೆಗೆ ತಿಕೋಟಾದ ಎ.ಬಿ. ಜತ್ತಿ ಪದವಿಪೂರ್ವ ಕಾಲೇಜಿನಲ್ಲಿ ಮಕ್ಕಳ ದಿನಾಚರಣೆ ಅಂಗವಾಗಿ ಆಯೋಜಿಸಿರುವ ಮಕ್ಕಳ ವಿಜ್ಞಾನ ಜಾತ್ರೆ ಉದ್ಘಾಟಿಸಿ, ವಿಜ್ಞಾನ ವಸ್ತುಪ್ರದರ್ಶನ ವೀಕ್ಷಿಸಲಿದ್ದಾರೆ.
ಬಳಿಕ ಮಧ್ಯಾಹ್ನ ೩ ಗಂಟೆಗೆ ತಿಕೋಟಾದಿಂದ ರಸ್ತೆ ಮಾರ್ಗವಾಗಿ ಹುಬ್ಬಳ್ಳಿಗೆ ಮರುಪ್ರಯಾಣ ಬೆಳೆಸಲಿದ್ದಾರೆ ಎಂದು ಪ್ರಕಟಣೆ ತಿಳಿಸಿದೆ.
