ಉದಯರಶ್ಮಿ ದಿನಪತ್ರಿಕೆ
ವಿಜಯಪುರ: ನಗರದ ಸಿದ್ದೇಶ್ವರ ದೇವಸ್ಥಾನದ ಆವರಣದಲ್ಲಿ ಚಲನಚಿತ್ರ ಖ್ಯಾತ ನಟ ಹಾಗೂ ಬೆಂಗಳೂರು ವಾಣಿಜ್ಯ ತೆರಿಗೆ ಇಲಾಖೆಯ ಜಂಟಿ ಆಯುಕ್ತ ಸಂಗಮೇಶ ಉಪಾಸೆ ಅವರ ಅಭಿನಯದ ’ಧಗೆ’ ಚಲನಚಿತ್ರದ ಪೋಸ್ಟರ್ ಪ್ರಚಾರಕ್ಕೆ ಶನಿವಾರ ಬೆಳಗ್ಗೆ ೧೦.೩೦ ಕ್ಕೆ ಚಾಲನೆ ನೀಡಲಾಗುತ್ತಿದೆ.
ಮಾಜಿ ಸಚಿವ ಅಪ್ಪಾಸಾಹೇಬ ಪಟ್ಟಣಶೆಟ್ಟಿ, ಮಾಜಿ ಶಾಸಕ ರಾಜು ಆಲಗೂರ ಪೋಸ್ಟರ್ ಪ್ರಚಾರಕ್ಕೆ ಚಾಲನೆ ನೀಡಲಿದ್ದಾರೆ.
ಬಿಜೆಪಿ ಎಸ್ಸಿ ಮೋರ್ಚಾ ರಾಜ್ಯ ಪ್ರಧಾನ ಕಾರ್ಯದರ್ಶಿ ಉಮೇಶ ಕಾರಜೋಳ, ಬಿಜೆಪಿ ರಾಜ್ಯ ಉಪಾಧ್ಯಕ್ಷ ಡಾ.ಸುರೇಶ ಬಿರಾದಾರ, ಕರ್ನಾಟಕ ಶೈಕ್ಷಣಿಕ ಹಾಗೂ ಗ್ರಾಮೀಣಾಭಿವೃದ್ಧಿ ಸಂಸ್ಥೆಯ ಅಧ್ಯಕ್ಷ ಸಂಗಮೇಶ ಜಾಧವ, ನಟ ಸಂಗಮೇಶ ಉಪಾಸೆ, ನಿರ್ಮಾಪಕ ಮಡಿವಾಳಪ್ಪ ಗೋಗಿ ಚಾಲನೆಗೆ ಕೈ ಜೋಡಿಸಲಿದ್ದಾರೆ.
’ಧಗೆ’ ಚಲನಚಿತ್ರದ ತಾರಾಗಣದ ಕಲಾವಿದರು ಕಾರ್ಯಕ್ರಮದಲ್ಲಿ ಪಾಲ್ಗೊಳ್ಳಲಿದ್ದಾರೆ.

