Close Menu
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ

Subscribe to Updates

Get the latest creative news from FooBar about art, design and business.

What's Hot

ಸಮುದಾಯ ಭವನಗಳ ನಿರ್ಮಾಣಕ್ಕೆ ರೂ.68 ಲಕ್ಷ ಮಂಜೂರು

ಶಿಕ್ಷಣದಿಂದ ಸಮಾಜದಲ್ಲಿ ಬದಲಾವಣೆ ತರಲು ಸಾಧ್ಯ: ಪ್ರೊ.ಮಳಗಿ

ರಾಜಕೀಯ ಲಾಭಕ್ಕಾಗಿ ವೀರಶೈವ & ಲಿಂಗಾಯತ ಸಮಾಜ ಒಡೆವ ಪ್ರಯತ್ನ

Facebook X (Twitter) Instagram
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
Facebook X (Twitter) Instagram YouTube WhatsApp
udayarashminews.comudayarashminews.com
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
udayarashminews.comudayarashminews.com
Home»(ರಾಜ್ಯ ) ಜಿಲ್ಲೆ»ಕೆಪಿಎಸ್‌ಸಿ ಪರೀಕ್ಷೆಗೆ ವಿಜಯಪುರ ಜಿಲ್ಲಾಡಳಿತದಿಂದ ಸಕಲ ಸಿದ್ಧತೆ
(ರಾಜ್ಯ ) ಜಿಲ್ಲೆ

ಕೆಪಿಎಸ್‌ಸಿ ಪರೀಕ್ಷೆಗೆ ವಿಜಯಪುರ ಜಿಲ್ಲಾಡಳಿತದಿಂದ ಸಕಲ ಸಿದ್ಧತೆ

By No Comments2 Mins Read
Facebook Twitter Pinterest LinkedIn Telegram WhatsApp
Share
Facebook Twitter LinkedIn Email Telegram WhatsApp

ಬಿಗಿ ಪೊಲೀಸ್ ಭದ್ರತೆ | ಸಿಸಿಟಿವಿ ನಿಗಾ | ೨೦ ಪರೀಕ್ಷಾ ಕೇಂದ್ರಗಳಲ್ಲಿ ೮,೧೧೭ ಅಭ್ಯರ್ಥಿಗಳು | ಪ್ರಶ್ನೆಪತ್ರಿಕೆ ಸಾಗಾಟಕ್ಕೆ ೮ ಮಾರ್ಗ | ನೇರ ವೆಬ್‌ಕಾಸ್ಟಿಂಗ್ ವ್ಯವಸ್ಥೆ

ಉದಯರಶ್ಮಿ ದಿನಪತ್ರಿಕೆ

ವಿಜಯಪುರ: ಕರ್ನಾಟಕ ಲೋಕಸೇವಾ ಆಯೋಗದ (ಕೆಪಿಎಸ್‌ಸಿ) ವತಿಯಿಂದ ನವೆಂಬರ್ ೧೫ರಂದು ನಡೆಯಲಿರುವ ಗೆಜೆಟೆಡ್ ಪ್ರೊಬೇಷನರ್ಸ್ ಗ್ರೂಪ್ ಎ ಮತ್ತು ಬಿ ವೃಂದದ ಪೂರ್ವಭಾವಿ ಪರೀಕ್ಷೆಗೆ ಜಿಲ್ಲಾಡಳಿತ ಹಾಗೂ ಪೊಲೀಸ್ ಇಲಾಖೆ ಸಕಲ ಸಿದ್ಧತೆ ಮಾಡಿಕೊಂಡಿದ್ದು, ಪರೀಕ್ಷೆಯನ್ನು ಪಾರದರ್ಶಕವಾಗಿ ಮತ್ತು ಯಾವುದೇ ಲೋಪದೋಷಗಳಿಲ್ಲದೆ ನಡೆಸಲು ಅಗತ್ಯ ಕ್ರಮ ಕೈಗೊಳ್ಳಲಾಗಿದೆ ಎಂದು ಜಿಲ್ಲಾಧಿಕಾರಿ ಡಾ. ಆನಂದ್. ಕೆ. ತಿಳಿಸಿದರು.
ನಗರದ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಶುಕ್ರವಾರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಜಿಲ್ಲೆಯಲ್ಲಿ ಒಟ್ಟು ೨೦ ಪರೀಕ್ಷಾ ಕೇಂದ್ರಗಳಲ್ಲಿ ೮,೧೧೭ ಅಭ್ಯರ್ಥಿಗಳು ಪರೀಕ್ಷೆ ಬರೆಯಲಿದ್ದಾರೆ.ಕೆಪಿಎಸ್‌ಸಿ ನಿಗದಿಪಡಿಸಿರುವ ಪರೀಕ್ಷಾ ಮಾರ್ಗಸೂಚಿಯಂತೆ ಎಲ್ಲ ಅಗತ್ಯ ಸಿದ್ಧತೆಗಳನ್ನು ಮಾಡಿಕೊಳ್ಳಲಾಗಿದೆ. ಪ್ರಶ್ನೆಪತ್ರಿಕೆಗಳನ್ನು ಮುನ್ನೆಚ್ಚರಿಕೆ ಕ್ರಮವಾಗಿ ಜಿಲ್ಲಾ ಖಜಾನೆಯಲ್ಲಿ ಭದ್ರವಾಗಿ ಇರಿಸಲಾಗಿದ್ದು, ಪರೀಕ್ಷಾ ಕೇಂದ್ರಗಳಿಗೆ ಸಾಗಿಸಲು ಎಂಟು ಮಾರ್ಗಗಳನ್ನು ಗುರುತಿಸಲಾಗಿದೆ.
ಪ್ರತಿ ಮಾರ್ಗಕ್ಕೂ ಮಾರ್ಗಾಧಿಕಾರಿಗಳನ್ನು ನೇಮಿಸಿ ಪೊಲೀಸ್ ಭದ್ರತೆಯೊಂದಿಗೆ ಪ್ರಶ್ನೆಪತ್ರಿಕೆಗಳನ್ನು ಸಾಗಿಸಲಾಗುವುದು. ಪರೀಕ್ಷೆ ಆರಂಭವಾಗುವ ಕನಿಷ್ಠ ಒಂದು ಗಂಟೆ ಮುಂಚಿತವಾಗಿ ಎಲ್ಲ ಕೇಂದ್ರಗಳಿಗೂ ಪ್ರಶ್ನೆಪತ್ರಿಕೆ ತಲುಪುವಂತೆ ವ್ಯವಸ್ಥೆ ಮಾಡಲಾಗಿದೆ ಎಂದರು.
ಪ್ರತಿ ಪರೀಕ್ಷಾ ಕೇಂದ್ರದಲ್ಲಿ ಮುಖ್ಯ ಅಧೀಕ್ಷಕರು, ವೀಕ್ಷಕರು ಹಾಗೂ ಪ್ರಶ್ನೆಪತ್ರಿಕೆಗಳ ಉಸ್ತುವಾರಿಗಾಗಿ ಸಿಬ್ಬಂದಿ ನಿಯೋಜಿಸಲಾಗಿದೆ. ಇವರ ಸಮ್ಮುಖದಲ್ಲಿಯೇ ಪ್ರಶ್ನೆಪತ್ರಿಕೆಗಳನ್ನು ತೆರೆಯಲಾಗುವುದು. ಪ್ರತಿ ಕೊಠಡಿಯಲ್ಲಿ ಸಿಸಿಟಿವಿ ಕ್ಯಾಮೆರಾ ಅಳವಡಿಸಲಾಗಿದ್ದು, ಪ್ರಶ್ನೆಪತ್ರಿಕೆ ತೆರೆಯುವ ಭದ್ರತಾ ಕೊಠಡಿಯಲ್ಲಿಯೂ ಸಿಸಿಟಿವಿ ವ್ಯವಸ್ಥೆ ಮಾಡಲಾಗಿದೆ. ಎಲ್ಲ ಕೇಂದ್ರಗಳ ದೃಶ್ಯಾವಳಿಗಳನ್ನು ನೇರ ವೆಬ್‌ಕಾಸ್ಟಿಂಗ್ ಮೂಲಕ ಜಿಲ್ಲಾ ಪಂಚಾಯಿತಿ ಕಚೇರಿಯಲ್ಲಿ ಸ್ಥಾಪಿಸಿರುವ ಕೇಂದ್ರದಿಂದ ಮೇಲ್ವಿಚಾರಣೆ ಮಾಡಲಾಗುವುದು. ಪ್ರತಿ ನಾಲ್ಕು ಪರೀಕ್ಷಾ ಕೇಂದ್ರಗಳ ಮೇಲ್ವಿಚಾರಣೆಗೆ ಓರ್ವ ವೀಕ್ಷಕರನ್ನು ನಿಯೋಜಿಸಲಾಗಿದೆ. ಗುರುವಾರ ಸಂಜೆ ನಡೆಸಿದ ಪ್ರಾಯೋಗಿಕ ಪರಿಶೀಲನೆಯಲ್ಲಿ ಎಲ್ಲ ಕೇಂದ್ರಗಳ ನೇರ ದೃಶ್ಯಾವಳಿಗಳು ಲಭ್ಯವಾಗಿರುವುದು ಖಚಿತವಾಗಿದೆ ಎಂದು ತಿಳಿಸಿದರು.
ಬೆಳಿಗ್ಗೆ ೧೦ರಿಂದ ಮಧ್ಯಾಹ್ನ ೧೨ರವರೆಗೆ ಹಾಗೂ ಮಧ್ಯಾಹ್ನ ೨ರಿಂದ ಸಂಜೆ ೪ರವರೆಗೆ ಎರಡು ಅಧಿವೇಶನಗಳಲ್ಲಿ ಪರೀಕ್ಷೆ ನಡೆಯಲಿದೆ. ಪ್ರತಿ ಅಧಿವೇಶನದ ಒಎಂಆರ್ ಹಾಳೆಗಳನ್ನು ಜಿಲ್ಲಾ ಪಂಚಾಯಿತಿ ಕಚೇರಿಯ ಸ್ಕ್ಯಾನಿಂಗ್ ಕೇಂದ್ರದಲ್ಲಿ ಸ್ಕ್ಯಾನ್ ಮಾಡಿ, ವೆಬ್ ಸೈಟ್ ಕೆಪಿಎಸ್ಸಿ ಮೂಲಕ ಪ್ರಕಟಿಸಲಾಗುವುದು ಎಂದರು.
ಪರೀಕ್ಷಾ ಕೇಂದ್ರಗಳ ಸುತ್ತಮುತ್ತಲಿನ ೨೦೦ ಮೀಟರ್ ವ್ಯಾಪ್ತಿಯಲ್ಲಿ ಭಾರತೀಯ ನಾಗರಿಕ ಸುರಕ್ಷಾ ಸಂಹಿತೆಯ ಕಲಂ ೧೬೩ರ ಅನ್ವಯ ನಿಷೇಧಾಜ್ಞೆ ಜಾರಿಗೊಳಿಸಲಾಗಿದೆ. ಈ ವ್ಯಾಪ್ತಿಯಲ್ಲಿರುವ ಸೈಬರ್ ಕೆಫೆ ಹಾಗೂ ಜೆರಾಕ್ಸ್ ಅಂಗಡಿ,ಕೋಚಿಂಗ್ ಸೆಂಟರ್ ತೆರೆಯದಂತೆ ಸೂಚಿಸಲಾಗಿದೆ. ಪರೀಕ್ಷೆಗೆ ನಿಯೋಜಿತ ಅಧಿಕಾರಿ, ಸಿಬ್ಬಂದಿಗೆ ಈಗಾಗಲೇ ಎರಡು ಹಂತಗಳಲ್ಲಿ ತರಬೇತಿ ನೀಡಲಾಗಿದ್ದು, ಬೆಂಗಳೂರಿನಲ್ಲಿ ತರಬೇತಿ ಪಡೆದ ಇಬ್ಬರು ಮಾಸ್ಟರ್ ತರಬೇತುದಾರರು ಜಿಲ್ಲಾಮಟ್ಟದ ಸಿಬ್ಬಂದಿಗೆ ತರಬೇತಿ ನೀಡಿದ್ದಾರೆ. ಈಗಾಗಲೇ ಪರೀಕ್ಷೆಯನ್ನು ಕಟ್ಟುನಿಟ್ಟಾಗಿ ನಡೆಸುವಂತೆ ಕಟ್ಟುನಿಟ್ಟಾಗಿ ಸೂಚಿಸಲಾಗಿದೆ ಎಂದು ಹೇಳಿದರು.
ಪತ್ರಿಕಾಗೋಷ್ಠಿಯಲ್ಲಿ ಅಪರ ಜಿಲ್ಲಾಧಿಕಾರಿ ಡಾ. ಔದ್ರಾಮ ಹಾಗೂ ಶಾಲಾ ಶಿಕ್ಷಣ ಇಲಾಖೆಯ ಉಪನಿರ್ದೇಶಕ ಮಂಜುನಾಥ ಗುಳೇದಗುಡ್ಡ ಉಪಸ್ಥಿತರಿದ್ದರು.

ಎಲ್ಲ ಪರೀಕ್ಷಾ ಕೇಂದ್ರಗಳಲ್ಲಿ ಬಿಗಿ ಪೊಲೀಸ್ ಬಂದೋಬಸ್ತ್ :ಎಸ್ಪಿ ಲಕ್ಷ್ಮಣ ನಿಂಬರಗಿ

ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಲಕ್ಷ್ಮಣ ನಿಂಬರಗಿ ಮಾತನಾಡಿ, ಪರೀಕ್ಷೆ ಹಿನ್ನೆಲೆಯಲ್ಲಿ ಎಲ್ಲ ಪರೀಕ್ಷಾ ಕೇಂದ್ರಗಳಲ್ಲಿ ಬಿಗಿ ಪೊಲೀಸ್ ಬಂದೋಬಸ್ತ್ ಮಾಡಲಾಗಿದೆ. ಪ್ರಶ್ನೆಪತ್ರಿಕೆ ಸಾಗಾಟಕ್ಕೆ ಪೊಲೀಸ್ ಬೆಂಗಾವಲು ಹಾಗೂ ಶಸ್ತ್ರಸಜ್ಜಿತ ಸಿಬ್ಬಂದಿಯನ್ನು ನಿಯೋಜಿಸಲಾಗುತ್ತದೆ. ಪರೀಕ್ಷಾ ಕೇಂದ್ರದ ಆವರಣದೊಳಗೆ ಅನಧಿಕೃತ ವ್ಯಕ್ತಿಗಳಿಗೆ ಪ್ರವೇಶವಿರುವುದಿಲ್ಲ. ಮೊದಲ ಅಧಿವೇಶನದ ಪರೀಕ್ಷೆ ಮುಗಿದ ತಕ್ಷಣ ಅಭ್ಯರ್ಥಿಗಳು ಕೇಂದ್ರದ ಆವರಣದಿಂದ ಹೊರಗೆ ತೆರಳಬೇಕು. ಎರಡನೇ ಅಧಿವೇಶನಕ್ಕೆ ಬರುವ ಅಭ್ಯರ್ಥಿಗಳಿಗೆ ಹೊಸದಾಗಿ ಪ್ರಿಸ್ಕಿಂಗ್ ಮತ್ತು ಮುಖ ಗುರುತಿಸುವಿಕೆ ಪ್ರಕ್ರಿಯೆ ನಡೆಸಲಾಗುತ್ತದೆ.
ಧಾರ್ಮಿಕ ಉಡುಪು ಧರಿಸಿ ಬರುವ ಅಭ್ಯರ್ಥಿಗಳು ಪರೀಕ್ಷೆ ಆರಂಭವಾಗುವ ಎರಡೂವರೆ ಗಂಟೆ ಮುಂಚಿತವಾಗಿ ಕೇಂದ್ರಕ್ಕೆ ಹಾಜರಾಗಬೇಕು. ಅವರ ತಪಾಸಣೆಗಾಗಿ ಪ್ರತ್ಯೇಕ ಉಡುಪು ಪರಿಶೀಲನಾ ಅಧಿಕಾರಿಗಳನ್ನು ನೇಮಿಸಲಾಗಿದೆ. ಆರೋಗ್ಯ ಇಲಾಖೆಯ ವತಿಯಿಂದ ಇಎನ್ ಟಿ ತಜ್ಞರನ್ನು ಪ್ರತಿ ಕೇಂದ್ರದಲ್ಲಿಯೂ ನಿಯೋಜಿಸಲಾಗಿದೆ. ವದಂತಿ ಹಾಗೂ ನಕಲಿ ಸುದ್ದಿಗಳ ಹರಡುವಿಕೆಯನ್ನು ತಡೆಯಲು ಸಾಮಾಜಿಕ ಜಾಲತಾಣಗಳ ಮೇಲೆ ಪೊಲೀಸ್ ತಂಡಗಳು ಹದ್ದಿನ ಕಣ್ಣಿರಿಸಿವೆ. ವಾಟ್ಸ್ ಆ್ಯಪ್, ಟೆಲಿಗ್ರಾಂ, ಫೇಸ್‌ಬುಕ್ ಸೇರಿದಂತೆ ವಿವಿಧ ಮಾಧ್ಯಮಗಳಲ್ಲಿ ಸುಳ್ಳು ಮಾಹಿತಿ ಹರಡುವವರ ವಿರುದ್ಧ ಕಾನೂನು ಕ್ರಮ ಕೈಗೊಳ್ಳಲಾಗುವುದು. ಪರೀಕ್ಷೆಗೆ ಸಂಬಂಧಿಸಿದ ಅಧಿಕೃತ ಮಾಹಿತಿಗಾಗಿ ಕೆಪಿಎಸ್‌ಸಿ ಜಾಲತಾಣ ಮೂಲಕ ತಿಳಿಸಲಾಗುತ್ತದೆ ಎಂದರು.

BIJAPUR NEWS bjp congress patil public public news udaya rashmi Udayarashmi today newspaper udayarashminews.com
Share. Facebook Twitter Pinterest Email Telegram WhatsApp
  • Website

Related Posts

ಸಮುದಾಯ ಭವನಗಳ ನಿರ್ಮಾಣಕ್ಕೆ ರೂ.68 ಲಕ್ಷ ಮಂಜೂರು

ಶಿಕ್ಷಣದಿಂದ ಸಮಾಜದಲ್ಲಿ ಬದಲಾವಣೆ ತರಲು ಸಾಧ್ಯ: ಪ್ರೊ.ಮಳಗಿ

ರಾಜಕೀಯ ಲಾಭಕ್ಕಾಗಿ ವೀರಶೈವ & ಲಿಂಗಾಯತ ಸಮಾಜ ಒಡೆವ ಪ್ರಯತ್ನ

ವಿಜಯಪುರದಲ್ಲಿ ನ.೧೫ರಂದು ಆರೆಸ್ಸೆಸ್ ಪಥಸಂಚಲನ

Add A Comment
Leave A Reply Cancel Reply

Categories
  • (ರಾಜ್ಯ ) ಜಿಲ್ಲೆ
  • Helldivers
  • Typora
  • Uncategorized
  • Wemod
  • ಆರೋಗ್ಯ
  • ಇತರೆ
  • ಕಾವ್ಯರಶ್ಮಿ
  • ಚಿಂತನ
  • ದಿನಪತ್ರಿಕೆ
  • ಪುಸ್ತಕ ಪರಿಚಯ
  • ಪ್ರೇಮಲೋಕ
  • ಭಾವರಶ್ಮಿ
  • ರಾಷ್ಚ್ರ
  • ವಿಜಯಪುರ
  • ವಿದ್ಯಾರ್ಥಿ ನಿಧಿ
  • ವಿಶೇಷ ಲೇಖನ
  • ಸಾಹಿತ್ಯ
  • ಸಿನಿಮಾ
  • ಹೊತ್ತಿಗೆ ಹೊರಣ
Recent Posts
  • ಸಮುದಾಯ ಭವನಗಳ ನಿರ್ಮಾಣಕ್ಕೆ ರೂ.68 ಲಕ್ಷ ಮಂಜೂರು
    In (ರಾಜ್ಯ ) ಜಿಲ್ಲೆ
  • ಶಿಕ್ಷಣದಿಂದ ಸಮಾಜದಲ್ಲಿ ಬದಲಾವಣೆ ತರಲು ಸಾಧ್ಯ: ಪ್ರೊ.ಮಳಗಿ
    In (ರಾಜ್ಯ ) ಜಿಲ್ಲೆ
  • ರಾಜಕೀಯ ಲಾಭಕ್ಕಾಗಿ ವೀರಶೈವ & ಲಿಂಗಾಯತ ಸಮಾಜ ಒಡೆವ ಪ್ರಯತ್ನ
    In (ರಾಜ್ಯ ) ಜಿಲ್ಲೆ
  • ವಿಜಯಪುರದಲ್ಲಿ ನ.೧೫ರಂದು ಆರೆಸ್ಸೆಸ್ ಪಥಸಂಚಲನ
    In (ರಾಜ್ಯ ) ಜಿಲ್ಲೆ
  • ಆಲಮಟ್ಟಿಯಲ್ಲಿ ರೈತರ ಬೃಹತ್ ಪ್ರತಿಭಟನಾ ಮೆರವಣಿಗೆ
    In (ರಾಜ್ಯ ) ಜಿಲ್ಲೆ
  • ನ.೧೭ ಮತ್ತು ೧೮ರಂದು ಕಲಾಪ್ರತಿಭೋತ್ಸವ: ನ.೧೬ರವರೆಗೆ ಅರ್ಜಿ ಸಲ್ಲಿಸಲು ಅವಕಾಶ
    In (ರಾಜ್ಯ ) ಜಿಲ್ಲೆ
  • ನ.೧೫ ರಂದು ವಿದ್ಯುತ್ ಪೂರೈಕೆಯಲ್ಲಿ ವ್ಯತ್ಯಯ
    In (ರಾಜ್ಯ ) ಜಿಲ್ಲೆ
  • ಸ್ಥಿರಾಸ್ತಿಗಳ ಮಾರ್ಗಸೂಚಿ ದರ ಪರಿಷ್ಕರಣೆ: ಆಕ್ಷೇಪಣೆ ಆಹ್ವಾನ
    In Uncategorized
  • ಉಪಲೋಕಾಯುಕ್ತ ನ್ಯಾ. ಕೆ.ಎನ್. ಫಣೀಂದ್ರ ಪ್ರವಾಸ
    In (ರಾಜ್ಯ ) ಜಿಲ್ಲೆ
  • ಹಿಂಗಾರು-ಬೇಸಿಗೆ ಬೆಳೆಗಳಿಗೆ ವಿಮೆ ಕವಚ: ಕೃಷಿ ಇಲಾಖೆಯಿಂದ ಅಧಿಸೂಚನೆ
    In (ರಾಜ್ಯ ) ಜಿಲ್ಲೆ
Editors Picks
Top Reviews
udayarashminews.com
Facebook X (Twitter) Instagram Pinterest Vimeo YouTube
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
© 2026 udayarashminews.com. Designed by udayarashmi news .

Type above and press Enter to search. Press Esc to cancel.