ಉದಯರಶ್ಮಿ ದಿನಪತ್ರಿಕೆ
ವಿಜಯಪುರ: ಕನ್ನಡ ಮತ್ತು ಸಂಸ್ಕೃತಿ ಇಲಾಖೆ ವತಿಯಿಂದ ಮಕ್ಕಳ ಹಾಗೂ ಯುವಜನರಲ್ಲಿನ ಕಲಾಪ್ರತಿಭೆಯನ್ನು ಗುರುತಿಸಿ, ಪ್ರೋತ್ಸಾಹಿಸುವ ಉದ್ದೇಶದಿಂದ ನವೆಂಬರ್ ೧೭ ಮತ್ತು ೧೮ರಂದು ಕಲಾಪ್ರತಿಭೋತ್ಸವ ಆಯೋಜಿಸಲಾಗಿದೆ.
ನಗರದ ಕಂದಗಲ್ ಶ್ರೀ ಹನುಮಂತರಾಯ ರಂಗಮಂದಿರದಲ್ಲಿ ಎರಡು ದಿನಗಳ ಕಾಲ ಕಾರ್ಯಕ್ರಮ ನಡೆಯಲಿದೆ. ಬಾಲ ಪ್ರತಿಭೆ, ಕಿಶೋರ ಪ್ರತಿಭೆ ಹಾಗೂ ಯುವ ಪ್ರತಿಭೆಗಳಿಗಾಗಿ ಆಯೋಜಿಸಿರುವ ಈ ಉತ್ಸವದಲ್ಲಿ ಭಾಗವಹಿಸಲು ಆಸಕ್ತರು ಅಗತ್ಯ ದಾಖಲೆಗಳೊಂದಿಗೆ ನವೆಂಬರ್ ೧೬ರ ಸಂಜೆ ೫.೩೦ ಗಂಟೆಯೊಳಗಾಗಿ ಅರ್ಜಿ ಸಲ್ಲಿಸಬಹುದಾಗಿದೆ. ನಿಗದಿತ ಅವಧಿಯ ನಂತರ ಸಲ್ಲಿಕೆಯಾಗುವ ಅರ್ಜಿಗಳನ್ನು ಪರಿಗಣಿಸಲಾಗುವುದಿಲ್ಲ.
ಅರ್ಜಿಗಳನ್ನು ಸಹಾಯಕ ನಿರ್ದೇಶಕರ ಕಚೇರಿ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ, ಕಂದಗಲ್ ಶ್ರೀ ಹನುಮಂತರಾಯ ರಂಗಮಂದಿರ, ಸ್ಟೇಷನ್ ರಸ್ತೆ, ವಿಜಯಪುರ ಇಲ್ಲಿ ಖುದ್ದಾಗಿ ಸಲ್ಲಿಸಬೇಕು ಎಂದು ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಹಾಯಕ ನಿರ್ದೇಶಕರಾದ ಸಂತೋಷ ಭೋವಿ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
