ವಿಜಯಪುರ: ತಿಕೋಟಾ ತಾಲೂಕನ್ನು ಬರಪೀಡಿತ ಎಂದು ರಾಜ್ಯ ಸರಕಾರ ಘೋಷಣೆ ಮಾಡಿರುವುದನ್ನು ತಿಕೋಟಾ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಸಿದ್ದು ಗೌಡನವರ ಸ್ವಾಗತಿಸಿದ್ದು, ಸಚಿವ ಎಂ. ಬಿ. ಪಾಟೀಲ ಅವರಿಗೆ ಕೃತಜ್ಞತೆ ಸಲ್ಲಿಸಿದ್ದಾರೆ.
ಬರಪೀಡಿತ ತಾಲೂಕು ಘೋಷಣೆ ಮಾಡಲು ಅಗತ್ಯವಿರುವ ಮಾನದಂಡಗಳ ಬಗ್ಗೆ ಅರಿವಿಲ್ಲದ ಕೆಲವರು ಸುಳ್ಳು ಆರೋಪ ಮಾಡಿ, ತಮ್ಮಅಜ್ಞಾನ ಪ್ರದರ್ಶಿಸುತ್ತ ಕ್ಷುಲ್ಲಕ ರಾಜಕಾರಣದಲ್ಲಿ ತೊಡಗಿದ್ದರು. ಅಲ್ಲದೇ, ಬಿಜೆಪಿಯ ರಾಜ್ಯಾಧ್ಯಕ್ಷರೂ ಕೂಡ ಈ ಮಾನದಂಡಗಳ ಬಗ್ಗೆ ತಿಳಿದುಕೊಳ್ಳದೇ ಬರ ಅಧ್ಯಯನಕ್ಕೆ ಎಂದು ಪ್ರಚಾರ ಪಡೆಯಲು ಭೇಟಿ ನೀಡಿದ್ದರು. ಆದರೆ, ರಾಜ್ಯಾಧ್ಯಕ್ಷರು ತಮ್ಮ ತಂಡದೊಂದಿಗೆ ಪ್ರವಾಸ ಕೈಗೊಂಡು ತಮ್ಮ ಮನೆ ತಲುಪುವ ಮೊದಲೇ ರಾಜ್ಯ ಸರಕಾರ ತಿಕೋಟಾ ತಾಲೂಕನ್ನು ಬರಪೀಡಿತ ತಾಲೂಕು ಎಂದು ಘೋಷಣೆ ಮಾಡಿದೆ. ಇನ್ನು ಮುಂದಾದರೂ ಕೀಳು ರಾಜಕಾರಣ ಮಾಡುವವರು ಯಾವುದೇ ಮಾನದಂಡ ಘೋಷಣೆ ಮಾಡಲು ಅಗತ್ಯವಿರುವ ಮಾನದಂಡಗಳ ಬಗ್ಗೆ ತಿಳಿದುಕೊಂಡು ಮಾತನಾಡಬೇಕೇ ಹೊರತು ರಾಜಕೀಯ ಲಾಭಕ್ಕಾಗಿ ಸುಳ್ಳು ಆರೋಪ ಮಾಡತ್ತ ತಿರುಗಬಾರದು ಎಂದು ಸಿದ್ದು ಗೌಡನವರ ಕಿವಿಮಾತು ಹೇಳಿದ್ದಾರೆ.
ತಿಕೋಟಾ ಬರಪೀಡಿತ ತಾಲೂಕು ಎಂದು ಘೋಷಣೆಗೆ ಅನುಸರಿಸಬೇಕಾದ ಮಾನದಂಡಗಳು ಮತ್ತು ಅದಕ್ಕೆ ಅಗತ್ಯವಾಗಿರುವ ಸಂಪೂರ್ಣ ಮಾಹಿತಿಯನ್ನು ಕಂದಾಯ ಸಚಿವರು ಮತ್ತು ಮುಖ್ಯಮಂತ್ರಿಗಳಿಗೆ ದಾಖಲೆಗಳ ಸಮೇತ ಒದಗಿಸುವ ಮೂಲಕ ಜಿಲ್ಲಾ ಉಸ್ತುವಾರಿ ಸಚಿವ ಎಂ. ಬಿ. ಪಾಟೀಲ ಅವರು ತಿಕೋಟಾ ಬರಪೀಡಿತ ತಾಲೂಕು ಎಂದು ಘೋಷಣೆ ಮಾಡಲು ಕಾರಣರಾಗಿದ್ದಾರೆ. ಅವರಿಗೆ ಇಡೀ ತಿಕೋಟಾ ತಾಲೂಕು ಹಾಗೂ ಬಬಲೇಶ್ವರ ಮತಕ್ಷೇತ್ರದ ರೈತರ ಪರವಾಗಿ ಹೃತ್ಪೂರ್ವಕ ಕೃತಜ್ಞತೆಗಳನ್ನು ಸಲ್ಲಿಸುವುದಾಗಿ ಸಿದ್ದು ಗೌಡನವರ ಮಾಧ್ಯಮ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
Subscribe to Updates
Get the latest creative news from FooBar about art, design and business.
Related Posts
Add A Comment

