ಉದಯರಶ್ಮಿ ದಿನಪತ್ರಿಕೆ
ಸಿಂದಗಿ: ಇಂದಿನ ಮಕ್ಕಳೆ ನಾಳಿನ ಪ್ರಜೆಗಳು, ಮಕ್ಕಳ ದಿನಾಚರಣೆ ಮಾಡುವ ಮೂಲಕ ಅವರ ಹಕ್ಕುಗಳು, ಆರೈಕೆ ಮತ್ತು ಶಿಕ್ಷಣದ ಬಗ್ಗೆ ಜಾಗೃತಿ ಮೂಡಿಸುವ ಕಾರ್ಯವನ್ನು ಮಾಡಲಾಗುತ್ತಿದೆ. ಪಂಡಿತ ಜವಾಹರಲಾಲ ನೆಹರು ಅವರ ಮರಣದ ನಂತರ, ಅವರ ಜನ್ಮದಿನದ ಸವಿನೆನಪಿಗಾಗಿ ನಂ.೧೪ರಂದು ಭಾರತದಲ್ಲಿ ಮಕ್ಕಳ ದಿನಾಚರಣೆ ಆಚರಿಸಲಾಗುತ್ತದೆ ಎಂದು ಶಿಕ್ಷಕ, ಸಾಹಿತಿ ಎಂ.ಆರ್.ಡೋಣ ಹೇಳಿದರು.
ಸಿಂದಗಿ ನಗರದ ಕಾವ್ಯ ಸಮೂಹ ಶಿಕ್ಷಣ ಸಂಸ್ಥೆಯ ಕಾವ್ಯ ಪ್ರಾಥಮಿಕ ಹಾಗೂ ಪ್ರೌಡಶಾಲೆಯಲ್ಲಿ ಹಮ್ಮಿಕೊಂಡ ಮಕ್ಕಳ ದಿನಾಚರಣೆಯಲ್ಲಿ ಮಾತನಾಡಿದ ಅವರು, ಮಕ್ಕಳು ಪ್ರೀತಿಯಿಂದ ನೆಹರು ರವರನ್ನು ಚಾಚಾ ನೆಹರು ಎಂದು ಕರೆಯುತ್ತಿದ್ದರು. ಈ ದಿನದಂದು ಭಾರತದಾದ್ಯಂತ ಮಕ್ಕಳಿಗಾಗಿ ಮತ್ತು ಅನೇಕ ಶೈಕ್ಷಣಿಕ ಮತ್ತು ಸಾಂಸ್ಕೃತಿಕ ಕಾರ್ಯಕ್ರಮಗಳನ್ನು ನಡೆಸಲಾಗುತ್ತದೆ ಎಂದರು.
ಇದೇ ಸಂದರ್ಭದಲ್ಲಿ ಪತ್ರಕರ್ತ ಪಂಡಿತ ಯಂಪೂರೆ ಚಿಕ್ಕ ಮಕ್ಕಳ ತಜ್ಞೆ ಡಾ.ಸರೋಜನಿ ದಾನಗೊಂಡ ಮಾತನಾಡಿದರು.
ಸಂಸ್ಥೆಯ ಸಂಚಾಲಕಿ ಕಾಂಚನಾ ನಾಗರಬೆಟ್ಟ ಅಧ್ಯಕ್ಷತೆ ವಹಿಸಿದ್ದರು. ಮುಖ್ಯ ಅತಿಥಿಗಳಾಗಿ ಶಕುಂತಲಾ ಹಿರೇಮಠ ವೇದಿಕೆ ಮೇಲಿದ್ದರು. ಆಸ್ಮಾ ಮಸಳಿ ನಿರೂಪಿಸಿದರು.

