ವಿಜಯಪುರ: ಜಿಲ್ಲೆಯಲ್ಲಿರುವ ಪಟಾಕಿ ಮಾರಾಟ ಮಳಿಗೆ, ದಾಸ್ತಾನುಗಳಿಗೆ ಭೇಟಿ ನಿಡಿ, ಮಳಿಗೆಗಳಲ್ಲಿ ಕೈಗೊಂಡ ಮುಂಜಾಗ್ರತಾ ಕ್ರಮ ಹಾಗೂ ಮಳಿಗೆಗಳಲ್ಲಿ ಹಸಿರು(ಗ್ರೀನ್) ಪಟಾಕಿ ಮಾತ್ರ ಮಾಡುತ್ತಿರುವ ಬಗ್ಗೆ ಪರಿಶೀಲನೆ ನಡೆಸುವಂತೆ ಸಂಬಂಧಿಸಿದ ಅಧಿಕಾರಿಗಳಿಗೆ ಜಿಲ್ಲಾಧಿಕಾರಿ ಟಿ.ಭೂಬಾಲನ್ ಅವರು ಸೂಚನೆ ನೀಡಿದ್ದಾರೆ.
ಇತ್ತೀಚೆಗೆ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಜರುಗಿದ ದೀಪಾವಳಿ ಹಬ್ಬದ ಪ್ರಯುಕ್ತ ಪಟಾಕಿ ಮಳಿಗೆಗಳಲ್ಲಿ ಗ್ರೀನ್ ಪಟಾಕಿ ಮಾರಾಟ ಮಾಡಲು ಹಾಗೂ ಮುಂಜಾಗ್ರತಾ ಕ್ರಮ ಕೈಗೊಳ್ಳುವ ಕುರಿತ ಸಭೆ ಅಧ್ಯಕ್ಷತೆ ವಹಿಸಿದ್ದ ಅವರು, ಜಿಲ್ಲೆಯಲ್ಲಿ ಲೈಸನ್ಸ್ ಪಡೆಯದೇ ಪಟಾಕಿ ಮಾರಾಟ ಮಾಡುವವರ ಮೇಲೆ ಪ್ರಕರಣದ ದಾಖಲಿಸುವಂತೆ ಹಾಗೂ ಅನಧಿಕೃತ ಪಟಾಕಿ ಮಾರಾಟ ಮಾಡದಂತೆ ಕ್ರಮ ವಹಿಸಲು ಅವರು ಅಧಿಕಾರಿಗಳಿಗೆ ಸೂಚಿಸಿದರು.
ದೀಪಾವಳಿ ಹಬ್ಬದ ಸಂದರ್ಭದಲ್ಲಿ ಪಟಾಕಿ ಮಳಿಗೆ, ದಾಸ್ತಾನಿನ ಸ್ಥಳಗಳಲ್ಲಿ ಯಾವುದೇ ಅವಘಡಗಳು ಸಂಭವಿಸದಂತೆ ಎಲ್ಲ ಅಗತ್ಯ ಮುನ್ನೆಚ್ಚರಿಕೆ ಕ್ರಮ ವಹಿಸಬೇಕು. ದೀಪಾವಳಿ ಸಂದರ್ಭದಲ್ಲಿ ಜಿಲ್ಲೆಯಲ್ಲಿ ತಾತ್ಕಾಲಿಕವಾಗಿ ಪಟಾಕಿ ಮಾರಾಟ ಮಳಿಗೆ ತೆರೆಯಲು ಅನುಮತಿ ನೀಡುವ ಸಂದರ್ಭದಲ್ಲಿ ಪರಿಶೀಲಿಸಿಕೊಂಡು ಯಾವುದೇ ರೀತಿಯಿಂದ ಸಾರ್ವಜನಿಕರಿಗೆ ತೊಂದರೆ, ಹಾನಿಯಾಗದಂತೆ ಸೂಕ್ತ ಬಯಲು ಜಾಗವನ್ನು ಗುರುತಿಸಬೇಕು. ಪಟಾಕಿ ಮಾರಾಟ ಮಾಡಲು ಒಂದು ವಾರದ ಮುಂಚಿತವಾಗಿ ಅರ್ಜಿಗಳನ್ನು ಪಡೆದು, ಅರ್ಜಿಗಳನ್ನು ಸಂಬಂಧಪಟ್ಟ ಅಧಿಕಾರಿಗಳ ಜಂಟಿ ವರದಿಯೊಂದಿಗೆ ತಾತ್ಕಾಲಿಕ ಲೈಸನ್ಸ್ ಪಡೆಯಲು ಜಿಲ್ಲಾಧಿಕಾರಿಗಳ ಕಚೇರಿಗೆ ಪ್ರಸ್ತಾವನೆಗಳನ್ನು ಸಲ್ಲಿಸುವಂತೆ ಸೂಚಿಸಿದರು.
ಸಭೆಯಲ್ಲಿ ಅಪರ ಜಿಲ್ಲಾಧಿಕಾರಿ ಮಹಾದೇವ ಮುರಗಿ ಸೇರಿದಂತೆ ವಿವಿಧ ತಾಲೂಕಾ ತಹಶೀಲ್ದಾರರು, ಜಿಲ್ಲಾ ಮಟ್ಟದ ವಿವಿಧ ಅಧಿಕಾರಿಗಳು ಉಪಸ್ಥಿತರಿದ್ದರು.
Related Posts
Add A Comment