ವಿಜಯಪುರ: ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ನೆಹರು ಯುವ ಕೇಂದ್ರ, ರಾಷ್ಟ್ರೀಯ ಸೇವಾ ಯೋಜನೆ ಹಾಗೂ ಬಿಎಲ್‌ಡಿಇ ಸಂಸ್ಥೆಯ ಎವ್ಹಿಎಸ್ ಆರ್ಯುವೇದ ಮಹಾವಿದ್ಯಾಲಯ ಇವರ ಸಂಯುಕ್ತಾಶ್ರಯದಲ್ಲಿ ನವೆಂಬರ್ ೧೮ ರಂದು ನಗರದ ಬಿಎಲ್‌ಡಿಇ ಸಂಸ್ಥೆಯ ಎವ್ಹಿಎಸ್ ಆರ್ಯುವೇದ ಮಹಾವಿದ್ಯಾಲಯದ ವಾಗ್ಭಟ್ ಸಭಾಂಗಣದಲ್ಲಿ ಜಿಲ್ಲಾ ಮಟ್ಟದ ಯುವಜನೋತ್ಸವ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ.
ಈ ಯುವ ಜನೋತ್ಸವದಲ್ಲಿ ಜಾನಪದ ನೃತ್ಯ (ಗುಂಪು), ಜನಪದ ಗೀತೆ (ಗುಂಪು), ಜಾನಪದ ನೃತ್ಯ, ಜಾನಪದ ಗೀತೆ, ಕಥೆ ಬರೆಯುವುದು, ಪೋಸ್ಟರ್ ಮೇಕಿಂಗ್, ಘೊಷಣೆ, ಛಾಯಾಚಿತ್ರಣ ಸ್ಪರ್ಧೆಗಳನ್ನು ಆಯೋಜಿಸಲಾಗುವುದು. ಸ್ಪರ್ಧೆಗಳಲ್ಲಿ ಭಾಗವಹಿಸಲಿಚ್ಛಿಸುವ ೨೯ ವರ್ಷದೊಳಗಿನ ವಿದ್ಯಾರ್ಥಿ-ವಿದ್ಯಾರ್ಥಿನಿಯರು ಹಾಗೂ ಯುವಜನ ಸಂಘಗಳ ಸದಸ್ಯರು ತಮ್ಮ ಹೆಸರನ್ನು ಸಹಾಯಕ ನಿರ್ದೇಶಕರು ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಕೆ, ಡಾ.ಬಿ.ಆರ್.ಅಂಬೇಡ್ಕರ್ ಕ್ರೀಡಾಂಗಣ, ವಿಜಯಪುರ ಕಚೇರಿಯಲ್ಲಿ ದಿನಾಂಕ : ೧೫-೧೧-೨೦೨೩ರೊಳಗಾಗಿ ನೊಂದಾಯಿಸಿಕೊಳ್ಳಬೇಕು. ಈ ಕುರಿತಂತೆ ಹೆಚ್ಚಿನ ಮಾಹಿತಿಗಾಗಿ ದೂ: ೦೮೩೫೨-೨೫೧೦೮೫, ಮೊ:೯೪೮೦೮೮೬೫೫೫ ಸಂಖ್ಯೆಗೆ ಸಂಪರ್ಕಿಸುವಂತೆ ಯುವ ಸಬಲೀಕರಣ ಮತ್ತು ಕ್ರಿಡಾ ಇಲಾಖೆ ಸಹಾಯಕ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
Related Posts
Add A Comment