ಉದಯರಶ್ಮಿ ದಿನಪತ್ರಿಕೆ
ಆಲಮೇಲ: ಹಿಂದೂಗಳು ಸಂಘಟಿತರಾಗಿದ್ದರೆ ಮಾತ್ರ ಭಾರತ ಉಳಿಯಲು ಸಾಧ್ಯ. ಈ ನಿಟ್ಟಿನಲ್ಲಿ ರಾಷ್ಟ್ರೀಯ ಸ್ವಯಂಸೇವಕ ಸಂಘವು ದೇಶದಾದ್ಯಂತ ಶಾಖೆಗಳ ಮೂಲಕ ಬಲಿಷ್ಠ ಭಾರತ ನಿರ್ಮಾಣಕ್ಕೆ ಕಂಕಣಬದ್ಧವಾಗಿದೆ ಎಂದು ದಿಲೀಪ ಸದಾನಂದ ವರ್ಣೇಕರ ಹೇಳಿದರು.
ಪಟ್ಟಣದಲ್ಲಿ ಶನಿವಾರ ಪಟ್ಟಣದ ಎ.ಕೆ. ನಂದಿ ಪ್ರೌಢಶಾಲಾ ಮೈದಾನದಲ್ಲಿ ರಾಷ್ಟ್ರೀಯ ಸ್ವಯಂಸೇವಕ ಸಂಘದ ವತಿಯಿಂದ ನಡೆದ ಭವ್ಯ ಪಥಸಂಚಲನದ ಮುಕ್ತಾಯದ ನಂತರ ಆಯೋಜಿಸಿದ್ದ ಸಮಾವೇಶದಲ್ಲಿ ಅವರು ಉಪನ್ಯಾಸ ನೀಡಿದರು.
ವೇದಿಕೆಯಲ್ಲಿ ಹಿರೇಮಠದ ಚಂದ್ರಶೇಖರ ಸ್ವಾಮೀಜಿ, ಅಳ್ಳೊಳ್ಳಿಮಠದ ಶ್ರೀಶೈಲ ಸ್ವಾಮೀಜಿ ಉಪಸ್ಥಿತರಿದ್ದರು.

