ವಿಜಯಪುರ: ಮಹಾನಗರ ಪಾಲಿಕೆ ವತಿಯಿಂದ ಕೇಂದ್ರ ಪುರಸ್ಕೃತ ಯೋಜನೆಯಾದ ದೀನ್‌ದಯಾಳ ಅಂತ್ಯೋದಯ ರಾಷ್ಟ್ರೀಯ ನಗರ ಜೀವನೋಪಾಯ ಅಭಿಯಾನದಡಿ ಅರ್ಜಿ ಆಹ್ವಾನಿಸಲಾಗಿದೆ.
ಈ ಯೋಜನೆಯಡಿ ಸ್ವಯಂ ಉದ್ಯೋಗ ಯೋಜನೆ, ಗುಂಪು ಸಮೂಹ ಉದ್ಯಮಗಳು ಯೋಜನೆ, ಸ್ವಸಹಾಯ ಗುಂಪುಗಳ ರಚನೆ, ಸ್ವ-ಸಹಾಯ ಗುಂಪುಗಳ ಬ್ಯಾಂಕ್ ಲಿಂಕೇಜ್ ಯೋಜನೆಗಳನ್ನು ಅನುಷ್ಠಾನಗೊಳಿಸಲಾಗುತ್ತಿದ್ದು, ಆಸಕ್ತ ಅರ್ಹರು ಜಾತಿ ಮತ್ತು ಆದಾಯ ಪ್ರಮಾಣ ಪತ್ರ, ಆಧಾರ ಕಾರ್ಡ್, ರೇಷನ್ ಕಾರ್ಡ್, ಬ್ಯಾಂಕ್ ಪಾಸ್ ಬುಕ್ ಝರಾಕ್ಸ್ ಮತದಾರರ ಗುರುತಿನ ಚೀಟಿ, ವಿದ್ಯಾರ್ಹತೆ ಪ್ರಮಾಣ ಪತ್ರ, ಇತ್ತೀಚಿನ ಎರಡು ಭಾವಚಿತ್ರಗಳೊಂದಿಗೆ ದಿನಾಂಕ : ೨೦-೧೧-೨೦೨೩ರೊಳಗೆ ಮಹಾನಗರ ಪಾಲಿಕೆಗೆ ಸಲ್ಲಿಸಬೇಕು. ಈ ಕುರಿತಂತೆ ಹೆಚ್ಚಿನ ಮಾಹಿತಿಗಾಗಿ ಪಾಲಿಕೆಯ ಡೇ-ನಲ್ಮ ವಿಭಾಗ ಸಂಪರ್ಕಿಸುವಂತೆ ಪಾಲಿಕೆ ಆಯುಕ್ತರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
Related Posts
Add A Comment