ಉದಯರಶ್ಮಿ ದಿನಪತ್ರಿಕೆ
ಇಂಡಿ: ನಗರದ ಬಸ್ ನಿಲ್ದಾಣಕ್ಕೆ ಸ್ವಾತಂತ್ರ್ಯ ಹೋರಾಟಗಾರ ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ ಅವರ ಹೆಸರನ್ನು ನಾಮಕರಣ ಮಾಡಲಾಗಿದ್ದು, ಶೀಘ್ರದಲ್ಲೇ ಬಸ್ ನಿಲ್ದಾಣದ ನಾಮಫಲಕ ಬದಲಾಯಿಸಿ ‘ಸಂಗೊಳ್ಳಿ ರಾಯಣ್ಣ ಬಸ್ ನಿಲ್ದಾಣ’ ಎಂದು ಅಧಿಕೃತವಾಗಿ ಅಳವಡಿಸಲಾಗುವುದು ಎಂದು ಶಾಸಕ ಯಶವಂತರಾಯಗೌಡ ಪಾಟೀಲ ತಿಳಿಸಿದ್ದಾರೆ.
ಮಂಗಳವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು ನಗರದ ಬಸ್ ನಿಲ್ದಾಣದ ಎದುರುಗಡೆ ಸ್ಥಾಪಿಸಲಾಗಿರುವ ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ ಅವರ ಪುತ್ಥಳಿಯನ್ನು ಕೂಡ ಶೀಘ್ರದಲ್ಲೇ ಅದ್ಧೂರಿ ಕಾರ್ಯಕ್ರಮ ಆಯೋಜಿಸುವ ಮೂಲಕ ಲೋಕಾರ್ಪಣೆಗೊಳಿಸಲಾಗುವುದು ಎಂದು ಅವರು ಹೇಳಿದ್ದಾರೆ.
ಸಂಗೊಳ್ಳಿ ರಾಯಣ್ಣ ಅವರು ದೇಶದ ಸ್ವಾತಂತ್ರ್ಯ ಹೋರಾಟದಲ್ಲಿ ಅಪ್ರತಿಮ ಧೈರ್ಯ, ಸಾಹಸ ಮತ್ತು ದೇಶಪ್ರೇಮ ಮೆರೆದ ಮಹಾನ್ ಹೋರಾಟಗಾರರಾಗಿದ್ದಾರೆ. ಅವರ ಹೆಸರನ್ನು ಬಸ್ ನಿಲ್ದಾಣಕ್ಕೆ ನಾಮಕರಣ ಮಾಡಿರುವುದು ಅವರ ತ್ಯಾಗ, ಹೋರಾಟ ಮತ್ತು ದೇಶಭಕ್ತಿಗೆ ಸಲ್ಲಿಸುವ ಗೌರವವಾಗಿದೆ.
ಬಸ್ ನಿಲ್ದಾಣದ ನಾಮಫಲಕ ಬದಲಾವಣೆ ಹಾಗೂ ಪುತ್ಥಳಿಯ ಅದ್ಧೂರಿ ಲೋಕಾರ್ಪಣೆಯಿಂದ ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ ಅವರ ಇತಿಹಾಸ ಮತ್ತು ಆದರ್ಶಗಳು ಮುಂದಿನ ಪೀಳಿಗೆಗೆ ಪರಿಚಯವಾಗಲಿವೆ ಎಂದು ಶಾಸಕರು ತಿಳಿಸಿದ್ದಾರೆ.

