ಉದಯರಶ್ಮಿ ದಿನಪತ್ರಿಕೆ
ವಿಜಯಪುರ: ಡಿಸೆಂಬರ್ 13 ರಂದು ನಗರದಲ್ಲಿ ನಡೆಯಲಿರುವ ವೃಕ್ಷಥಾನ್ ಹೆರಿಟೇಜ್ ರನ್ 7ನೇ ಆವೃತ್ತಿಯ ಪೂರ್ವಭಾವಿಯಾಗಿ ನವೆಂಬರ್ 21 ರಂದು ಶನಿವಾರ ಪ್ರಬಂಧ ಮತ್ತು ಚಿತ್ರಕಲಾ ಸ್ಪರ್ಧೆ ಆಯೋಜಿಸಲಾಗಿದೆ.
ನಗರದ ಐತಿಹಾಸಿಕ ಗೋಳಗುಮ್ಮಟ ಆವರಣದಲ್ಲಿ ಈ ಸ್ಪರ್ಧೆಗಳು ನಡೆಯಲಿವೆ. ಬೆಳಿಗ್ಗೆ 8.30 ರಿಂದ 10 ಗಂಟೆವರೆಗೆ ಚಿತ್ರಕಲೆ ಸ್ಪರ್ಧೆ ನಡೆಯಲಿದ್ದರೆ, ಬೆಳಿಗ್ಗೆ 10.30 ರಿಂದ ಮಧ್ಯಾಹ್ನ 12 ಗಂಟೆಯವರೆಗೆ ಪ್ರಬಂಧ ಸ್ಪರ್ಧೆ ನಡೆಯಲಿದೆ. ಪ್ರೌಢಶಾಲೆ ಮತ್ತು ಪಿಯು ಕಾಲೇಜು ವಿದ್ಯಾರ್ಥಿಗಳಿಗಾಗಿ ಎರಡು ವಿಭಾಗಗಳಲ್ಲಿ ಈ ಸ್ಪರ್ಧೆಗಳು ನಡೆಯಲಿದ್ದು, ಬಾಲಕ ಮತ್ತು ಬಾಲಕಿಯರಿಗಾಗಿ ಪ್ರತ್ಯೇಕವಾಗಿ ಈ ಸ್ಪರ್ಧೆ ಆಯೋಜಿಸಲಾಗಿದೆ.
ಈ ಸ್ಪರ್ಧೆಯಲ್ಲಿ ವಿಜೇತರಿಗೆ ಪ್ರಥಮ ಬಹುಮಾನ ರೂ. 10 ಸಾವಿರ, ದ್ವಿತೀಯ ಬಹುಮಾನ ರೂ. 7500, ತೃತೀಯ ಬಹುಮಾನ ರೂ. 5000 ಹಾಗೂ ಸಮಾಧಾನಕರ ಬಹುಮಾನ ರೂ. 2500 ನೀಡಲಾಗುವುದು.
ಆಸಕ್ತರು ಶಿವು ಕುಂಬಾರ 9972795289, ಅಮೀತ ಬಿರಾದಾರ 9880107038 ಹಾಗೂ ರಮೇಶ ಬಿರಾದಾರ 9972025236 ಇವರನ್ನು ಸಂಪರ್ಕಿಸಬಹುದಾಗಿದೆ ಎಂದು ವೃಕ್ಷಥಾನ್ ಹೆರಿಟೇಜ್ ರನ್ ಕೋರ್ ಕಮಿಟಿ ಮಾಧ್ಯಮ ಪ್ರಕಟಣೆಯಲ್ಲಿ ಮಾಹಿತಿ ನೀಡಲಾಗಿದೆ.
