Close Menu
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ

Subscribe to Updates

Get the latest creative news from FooBar about art, design and business.

What's Hot

ಸಾರ್ವಜನಿಕರಿಂದ ಹೊಸದಾಗಿ ದೂರುಗಳನ್ನು ಸ್ವೀಕರಿಸುವುದಿಲ್ಲ

ಮಕ್ಕಳ ಸುಪ್ತ ಪ್ರತಿಭೆ ಗುರುತಿಸಿ ಪೋಷಿಸಿ :ಡಾ.ಸಂಬಣ್ಣಿ

ಇಂದು ಸೋಮಜಾಳದಲ್ಲಿ ಮ್ಯಾರಥಾನ್ ಸ್ಪರ್ಧೆ

Facebook X (Twitter) Instagram
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
Facebook X (Twitter) Instagram YouTube WhatsApp
udayarashminews.comudayarashminews.com
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
udayarashminews.comudayarashminews.com
Home»(ರಾಜ್ಯ ) ಜಿಲ್ಲೆ»ಮಕ್ಕಳ ಸುಪ್ತ ಪ್ರತಿಭೆ ಗುರುತಿಸಿ ಪೋಷಿಸಿ :ಡಾ.ಸಂಬಣ್ಣಿ
(ರಾಜ್ಯ ) ಜಿಲ್ಲೆ

ಮಕ್ಕಳ ಸುಪ್ತ ಪ್ರತಿಭೆ ಗುರುತಿಸಿ ಪೋಷಿಸಿ :ಡಾ.ಸಂಬಣ್ಣಿ

By No Comments2 Mins Read
Facebook Twitter Pinterest LinkedIn Telegram WhatsApp
Share
Facebook Twitter LinkedIn Email Telegram WhatsApp

ವಿಜಯಪುರದಲ್ಲಿ ನಡೆದ ಜಿಲ್ಲಾಮಟ್ಟದ ಕಲಾಪ್ರತಿಭೋತ್ಸವ | ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತರಿಗೆ ಹಾಗೂ ಕಲಾವಿದರಿಗೆ ಸನ್ಮಾನ

ಉದಯರಶ್ಮಿ ದಿನಪತ್ರಿಕೆ

ವಿಜಯಪುರ: ಮಕ್ಕಳಲ್ಲಿನ ಸುಪ್ತ ಪ್ರತಿಭೆಯನ್ನು ಗುರುತಿಸಿ, ಪೋಷಿಸುವುದರೊಂದಿಗೆ ಅವರಿಗೆ ಸೂಕ್ತ ಪ್ರೋತ್ಸಾಹ ಹಾಗೂ ಅವಕಾಶಗಳನ್ನು ಕಲ್ಪಿಸಬೇಕು. ಮಕ್ಕಳು ಕಲೆಯಲ್ಲಿ ಅರಳಿ, ತಮ್ಮ ಪ್ರತಿಭೆಯ ಮೂಲಕ ಕಲಾಜಗತ್ತಿನಲ್ಲಿ ಗುರುತಿಸಿಕೊಳ್ಳುವ ಆಶಯದೊಂದಿಗೆ ಮುನ್ನಡೆಯಬೇಕು ಎಂದು ವಿಜಯಪುರ ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಡಾ. ಗಂಗಾಧರ ಎಸ್. ಸಂಬಣ್ಣಿ ಕರೆ ನೀಡಿದರು.
ನಗರದ ಕಂದಗಲ್ ಶ್ರೀ ಹನುಮಂತರಾಯ ರಂಗಮಂದಿರದಲ್ಲಿ ಮಂಗಳವಾರ ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ವತಿಯಿಂದ ಆಯೋಜಿಸಿದ್ದ ಜಿಲ್ಲಾಮಟ್ಟದ ಕಲಾಪ್ರತಿಭೋತ್ಸವ ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದರು. ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದ ಜಿಲ್ಲಾ ಮಟ್ಟದ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿ ಅಧ್ಯಕ್ಷ ವಸಂತ ಸಿದ್ರಾಮಪ್ಪ ಹೊನಮೊಡೆ ಮಾತನಾಡಿ, ಮಕ್ಕಳ ಸೃಜನಾತ್ಮಕ ಕಲೆಗೆ ಪೂರಕಾವಾಗಿ ಇಂತಹ ಕಾರ್ಯಕ್ರಮಗಳು ಪ್ರೇರಣೆ ಒದಗಿಸುತ್ತವೆ.
ಸಮಾಜ ಕಲ್ಯಾಣ ಇಲಾಖೆಯ ಉಪನಿರ್ದೇಶಕ ಮಹೇಶ್ ಪೋತದಾರ ಮಾತನಾಡಿ, ವಿಜಯಪುರ ಜಿಲ್ಲೆ ಸಾಂಸ್ಕೃತಿಕ ವೈವಿಧ್ಯತೆಯಿಂದ ಕೂಡಿದ್ದು, ಸಾಹಿತ್ಯ, ಸಂಸ್ಕೃತಿ ಹಾಗೂ ಪರಂಪರೆಯ ಶ್ರೀಮಂತಿಕೆಯನ್ನು ಇಂದಿಗೂ ಜೀವಂತವಾಗಿರಿಸಿಕೊಂಡಿದೆ. ಇಂತಹ ಕಲಾಪ್ರತಿಭೋತ್ಸವಗಳು ಮಕ್ಕಳಲ್ಲಿರುವ ಕಲಾಸಕ್ತಿಯನ್ನು ಬೆಳೆಸುವುದರ ಜತೆಗೆ ಅವರ ಪ್ರತಿಭೆ ಅನಾವರಣಗೊಳಿಸಲು ಉತ್ತಮ ವೇದಿಕೆಯಾಗಿವೆ ಎಂದರು.
ಸ್ಪರ್ಧೆಗಳಲ್ಲಿ ಸೋಲು-ಗೆಲುವಿಗಿಂತ ಭಾಗವಹಿಸುವಿಕೆ ಮುಖ್ಯ. ವಿದ್ಯಾರ್ಥಿಗಳು ಯಾವುದೇ ಸ್ಪರ್ಧೆಯಿಂದ ಹಿಂದೆ ಸರಿಯದೆ ಆತ್ಮವಿಶ್ವಾಸದಿಂದ ತಮ್ಮ ಪ್ರತಿಭೆಯನ್ನು ಪ್ರದರ್ಶಿಸಬೇಕು. ಪ್ರತಿಭಾವಂತರನ್ನು ಗುರುತಿಸಿ ಅವರಿಗೆ ಸೂಕ್ತ ವೇದಿಕೆ ಕಲ್ಪಿಸುವ ಮೂಲಕ ಪ್ರೋತ್ಸಾಹಿಸುವ ಕಾರ್ಯವನ್ನು ಇಲಾಖೆಗಳು ಮಾಡುತ್ತಿವೆ. ಜಿಲ್ಲೆಯಲ್ಲಿ ಸಾಕಷ್ಟು ಪ್ರತಿಭಾವಂತರಿದ್ದು, ವಿದ್ಯಾರ್ಥಿಗಳು ಪಠ್ಯದ ಜತೆಗೆ ಪಠ್ಯೇತರ ಚಟುವಟಿಕೆಗಳಲ್ಲಿಯೂ ಸಕ್ರಿಯವಾಗಿ ತೊಡಗಿಸಿಕೊಳ್ಳಬೇಕು. ಇದರಿಂದ ಪ್ರತಿಭೆಯನ್ನು ಅನಾವರಣಗೊಳಿಸುವುದರೊಂದಿಗೆ ವಲಯ ಹಾಗೂ ರಾಜ್ಯಮಟ್ಟದಲ್ಲಿಯೂ ಗುರುತಿಸಿಕೊಳ್ಳಲು ಸಾಧ್ಯವಾಗುತ್ತದೆ ಎಂದು ಅಭಿಪ್ರಾಯಪಟ್ಟರು.
ಯುವಪ್ರತಿಭೆ ವಿಭಾಗದ ಸಮೂಹ ಸ್ಪರ್ಧೆಯಲ್ಲಿ ಡೊಳ್ಳು ಕುಣಿತ ಕಲಾವಿದರು ನೀಡಿದ ಆಕರ್ಷಕ ಪ್ರದರ್ಶನ ಗಮನ ಸೆಳೆಯಿತು. ಜಿಲ್ಲಾಮಟ್ಟದ ಸ್ಪರ್ಧೆಗಳಲ್ಲಿ ಪ್ರಥಮ ಸ್ಥಾನ ಪಡೆದ ವಿದ್ಯಾರ್ಥಿಗಳು ಮುಂದಿನ ವಲಯಮಟ್ಟದ ಸ್ಪರ್ಧೆಗೆ ಆಯ್ಕೆಯಾಗಲಿದ್ದಾರೆ.
ಕಾರ್ಯಕ್ರಮದಲ್ಲಿ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತರಾದ ಪಿ.ಎಸ್. ಕಡೆಮನಿ, ಎಲ್.ಬಿ. ಶೇಖ, ಸುರೇಶ ರಾಮಚಂದ್ರ ಜೋಶಿ, ಕರ್ನಾಟಕ ಜಾನಪದ ಅಕಾಡೆಮಿಯ ಸದಸ್ಯರಾದ ಡಾ. ಎಂ.ಎಂ. ಪಡಶೆಟ್ಟಿ, ಕರ್ನಾಟಕ ಲಲಿತಕಲಾ ಅಕಾಡೆಮಿ ಸದಸ್ಯೆ ರಾಜೇಶ್ವರಿ ಮೋಪಗಾರ, ಹಿರಿಯ ಶಹನಾಯ್ ಕಲಾವಿದ ಗಿರಿಮಲ್ಲಪ್ಪ ಭಜಂತ್ರಿ, ಬಾಲಕರ ಸರ್ಕಾರಿ ಪದವಿ ಪೂರ್ವ ಕಾಲೇಜಿನ ಆಂಗ್ಲಭಾಷೆ ಪ್ರಾಧ್ಯಾಪಕ ಸಿ.ಎಸ್. ಪೂಜಾರ, ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಹಾಯಕ ನಿರ್ದೇಶಕ ಸಂತೋಷ ಭೋವಿ, ಇಲಾಖೆಯ ಸಿಬ್ಬಂದಿ, ತೀರ್ಪುಗಾರರು ಹಾಗೂ ಕಲಾವಿದರು,ವಿದ್ಯಾರ್ಥಿಗಳು ಉಪಸ್ಥಿತರಿದ್ದರು.

ವಿದ್ಯಾರ್ಥಿಗಳ ಪ್ರತಿಭೆ ಪ್ರದರ್ಶನ

ಕಲಾಪ್ರತಿಭೋತ್ಸವದಲ್ಲಿ ಬಾಲಪ್ರತಿಭೆ-ಕಿಶೋರ ಪ್ರತಿಭೆ ಹಾಗೂ ಯುವಪ್ರತಿಭೆ ಎಂಬ ಮೂರು ವಿಭಾಗಗಳಲ್ಲಿ ವಿವಿಧ ಸ್ಪರ್ಧೆಗಳನ್ನು ಆಯೋಜಿಸಲಾಗಿತ್ತು. ಶಾಸ್ತ್ರೀಯ ನೃತ್ಯ, ಸುಗಮ ಸಂಗೀತ, ಜನಪದ ಗೀತೆ, ಹಿಂದೂಸ್ಥಾನಿ ಮತ್ತು ಕರ್ನಾಟಕ ವಾದ್ಯ ಸಂಗೀತ, ಹಿಂದೂಸ್ಥಾನಿ ಹಾಗೂ ಕರ್ನಾಟಕ ಶಾಸ್ತ್ರೀಯ ಸಂಗೀತ ಮತ್ತು ಚಿತ್ರಕಲೆ ಸ್ಪರ್ಧೆಗಳಲ್ಲಿ ವಿದ್ಯಾರ್ಥಿಗಳು ತಮ್ಮ ಪ್ರತಿಭೆ ಪ್ರದರ್ಶಿಸಿದರು.

ರಾಜ್ಯೋತ್ಸವ ಪ್ರಶಸ್ತಿಗೆ ಭಾಜನರಾದವರಿಗೆ ಸನ್ಮಾನ

ಇದೇ ಸಂದರ್ಭದಲ್ಲಿ ಪ್ರಸಕ್ತ ಸಾಲಿನ ಕರ್ನಾಟಕ ರಾಜ್ಯೋತ್ಸವ ಪ್ರಶಸ್ತಿಗೆ ಭಾಜನರಾದ ಜಾನಪದ ಕಲಾವಿದರಾದ ಸುರೇಶ ರಾಮಚಂದ್ರ ಜೋಶಿ ಅವರನ್ನು ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ವತಿಯಿಂದ ಆತ್ಮೀಯವಾಗಿ ಸನ್ಮಾನಿಸಲಾಯಿತು. ಕಳೆದ ಸಾಲಿನ ಕಲಾಪ್ರತಿಭೋತ್ಸವದಲ್ಲಿ ರಾಜ್ಯಮಟ್ಟದ ಹಿಂದೂಸ್ಥಾನಿ ಶಾಸ್ತ್ರೀಯ ಸಂಗೀತ ಸ್ಪರ್ಧೆಯಲ್ಲಿ ಪ್ರಥಮ ಸ್ಥಾನ ಪಡೆದು ಜಿಲ್ಲೆಯ ಕೀರ್ತಿ ಹೆಚ್ಚಿಸಿದ ಕಾಶೀನಾಥ ಭೋಸ್ಲೆ ಅವರನ್ನು ಸನ್ಮಾನಿಸಿ ಗೌರವಿಸಲಾಯಿತು.
BIJAPUR NEWS bjp congress patil public public news udaya rashmi Udayarashmi today newspaper udayarashminews.com
Share. Facebook Twitter Pinterest Email Telegram WhatsApp
  • Website

Related Posts

ಸಾರ್ವಜನಿಕರಿಂದ ಹೊಸದಾಗಿ ದೂರುಗಳನ್ನು ಸ್ವೀಕರಿಸುವುದಿಲ್ಲ

ಇಂದು ಸೋಮಜಾಳದಲ್ಲಿ ಮ್ಯಾರಥಾನ್ ಸ್ಪರ್ಧೆ

ನ.21 ರಂದು ಪ್ರಬಂಧ ಮತ್ತು ಚಿತ್ರಕಲಾ ಸ್ಪರ್ಧೆ

ವಿದ್ಯಾರ್ಥಿಗಳು ಆತ್ಮವಿಶ್ವಾಸದಿಂದ ಪರೀಕ್ಷೆಎದುರಿಸಿ :ಕುಂಬಾರ

Add A Comment
Leave A Reply Cancel Reply

Categories
  • (ರಾಜ್ಯ ) ಜಿಲ್ಲೆ
  • Helldivers
  • Typora
  • Uncategorized
  • Wemod
  • ಆರೋಗ್ಯ
  • ಇತರೆ
  • ಕಾವ್ಯರಶ್ಮಿ
  • ಚಿಂತನ
  • ದಿನಪತ್ರಿಕೆ
  • ಪುಸ್ತಕ ಪರಿಚಯ
  • ಪ್ರೇಮಲೋಕ
  • ಭಾವರಶ್ಮಿ
  • ರಾಷ್ಚ್ರ
  • ವಿಜಯಪುರ
  • ವಿದ್ಯಾರ್ಥಿ ನಿಧಿ
  • ವಿಶೇಷ ಲೇಖನ
  • ಸಾಹಿತ್ಯ
  • ಸಿನಿಮಾ
  • ಹೊತ್ತಿಗೆ ಹೊರಣ
Recent Posts
  • ಸಾರ್ವಜನಿಕರಿಂದ ಹೊಸದಾಗಿ ದೂರುಗಳನ್ನು ಸ್ವೀಕರಿಸುವುದಿಲ್ಲ
    In (ರಾಜ್ಯ ) ಜಿಲ್ಲೆ
  • ಮಕ್ಕಳ ಸುಪ್ತ ಪ್ರತಿಭೆ ಗುರುತಿಸಿ ಪೋಷಿಸಿ :ಡಾ.ಸಂಬಣ್ಣಿ
    In (ರಾಜ್ಯ ) ಜಿಲ್ಲೆ
  • ಇಂದು ಸೋಮಜಾಳದಲ್ಲಿ ಮ್ಯಾರಥಾನ್ ಸ್ಪರ್ಧೆ
    In (ರಾಜ್ಯ ) ಜಿಲ್ಲೆ
  • ನ.21 ರಂದು ಪ್ರಬಂಧ ಮತ್ತು ಚಿತ್ರಕಲಾ ಸ್ಪರ್ಧೆ
    In (ರಾಜ್ಯ ) ಜಿಲ್ಲೆ
  • ವಿದ್ಯಾರ್ಥಿಗಳು ಆತ್ಮವಿಶ್ವಾಸದಿಂದ ಪರೀಕ್ಷೆಎದುರಿಸಿ :ಕುಂಬಾರ
    In (ರಾಜ್ಯ ) ಜಿಲ್ಲೆ
  • ಮತದಾರರ ಪಟ್ಟಿಯ ವಿಶೇಷ ಸಂಕ್ಷಿಪ್ತ ಪರಿಷ್ಕರಣೆ ವೇಳಾಪಟ್ಟಿ ಪ್ರಕಟ
    In (ರಾಜ್ಯ ) ಜಿಲ್ಲೆ
  • ಉದ್ಯೋಗ ಖಾತ್ರಿ ಯೋಜನೆ ಸಮರ್ಪಕ ಅನುಷ್ಠಾನಕ್ಕೆ ಆಗ್ರಹ
    In (ರಾಜ್ಯ ) ಜಿಲ್ಲೆ
  • ಗೋಶಾಲೆ ಕಟ್ಟಡಕ್ಕೆ ೧೧ ಲಕ್ಷ ರೂ. ಅನುದಾನ:ಯಶವಂತರಾಯಗೌಡ
    In (ರಾಜ್ಯ ) ಜಿಲ್ಲೆ
  • ಇಂಡಿ ಬಸ್ ನಿಲ್ದಾಣಕ್ಕೆ ಸಂಗೊಳ್ಳಿ ರಾಯಣ್ಣ ಹೆಸರು ನಾಮಕರಣ
    In (ರಾಜ್ಯ ) ಜಿಲ್ಲೆ
  • ಕಾರ್ಮಿಕ ಇಲಾಖೆ ಆದೇಶದಂತೆ ನೌಕರರ ವೇತನ ಪಾವತಿಸಲು ಆಗ್ರಹ
    In (ರಾಜ್ಯ ) ಜಿಲ್ಲೆ
Editors Picks
Top Reviews
udayarashminews.com
Facebook X (Twitter) Instagram Pinterest Vimeo YouTube
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
© 2026 udayarashminews.com. Designed by udayarashmi news .

Type above and press Enter to search. Press Esc to cancel.